ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ರಾಜೀನಾಮೆ
Recommended Video

ಬೆಂಗಳೂರು, ಜೂನ್ 3: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಅವರು ಇ-ಮೇಲ್ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮೂರನೇ ಅವಧಿಗೆ ಡಾ. ಜಿ. ಪರಮೇಶ್ವರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಎಸ್.ಆರ್. ಪಾಟೀಲ್ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ದಿನೇಶ್ ಗುಂಡೂರಾವ್ ಅವರಿಗೆ ದಕ್ಷಿಣ ಕರ್ನಾಟಕದ ಹೊಣೆ ನೀಡಲಾಗಿದ್ದರೆ, ಎಸ್.ಆರ್. ಪಾಟೀಲ್ ಅವರಿಗೆ ಉತ್ತರ ಕರ್ನಾಟಕದ ಹೊಣೆ ನೀಡಲಾಗಿತ್ತು.

ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕಾಗಿರುವ ಹಿನ್ನೆಡೆಯ ನೈತಿಕ ಹೊಣೆ ಹೊತ್ತು ತಾನು ರಾಜೀನಾಮೆ ನೀಡುತ್ತಿರುವುದಾಗಿ ಎಸ್.ಆರ್. ಪಾಟೀಲ್ ಹೇಳಿದ್ದಾರೆ.
ಆದರೆ ಅವರು ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ, ಈ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗಳೂ ಓಡಾಡುತ್ತಿವೆ. ಕಾಂಗ್ರೆಸ್ ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ಅಘೋಷಿತ ನಿಯಮ ಇದ್ದು ಈ ಕಾರಣಕ್ಕೆ ಸಚಿವ ಸ್ಥಾನ ಪಡೆಯಲು ಅವರು ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.












Click it and Unblock the Notifications