ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ರಾಜೀನಾಮೆ

By Sachhidananda Acharya
|
Google Oneindia Kannada News

Recommended Video

ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಎಸ್ ಆರ್ ಪಾಟೀಲ್ | Oneindia Kannada

ಬೆಂಗಳೂರು, ಜೂನ್ 3: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಅವರು ಇ-ಮೇಲ್ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಮೂರನೇ ಅವಧಿಗೆ ಡಾ. ಜಿ. ಪರಮೇಶ್ವರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಸಂದರ್ಭದಲ್ಲಿ ಎಸ್.ಆರ್. ಪಾಟೀಲ್ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಕ್ಯೂ ನಿಂತವರು ಯಾರ್ಯಾರು?ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಕ್ಯೂ ನಿಂತವರು ಯಾರ್ಯಾರು?

ದಿನೇಶ್ ಗುಂಡೂರಾವ್ ಅವರಿಗೆ ದಕ್ಷಿಣ ಕರ್ನಾಟಕದ ಹೊಣೆ ನೀಡಲಾಗಿದ್ದರೆ, ಎಸ್.ಆರ್. ಪಾಟೀಲ್ ಅವರಿಗೆ ಉತ್ತರ ಕರ್ನಾಟಕದ ಹೊಣೆ ನೀಡಲಾಗಿತ್ತು.

SR Patil resigns to KPCC Working President Position

ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕಾಗಿರುವ ಹಿನ್ನೆಡೆಯ ನೈತಿಕ ಹೊಣೆ ಹೊತ್ತು ತಾನು ರಾಜೀನಾಮೆ ನೀಡುತ್ತಿರುವುದಾಗಿ ಎಸ್.ಆರ್. ಪಾಟೀಲ್ ಹೇಳಿದ್ದಾರೆ.

ಆದರೆ ಅವರು ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ, ಈ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿಗಳೂ ಓಡಾಡುತ್ತಿವೆ. ಕಾಂಗ್ರೆಸ್ ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ಅಘೋಷಿತ ನಿಯಮ ಇದ್ದು ಈ ಕಾರಣಕ್ಕೆ ಸಚಿವ ಸ್ಥಾನ ಪಡೆಯಲು ಅವರು ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

English summary
SR Patil resigned to Karnataka Pradesh Congress Committee (KPCC) working president post. He submitted his resignation to Congress President Rahul Gandhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X