• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರಾಜೀನಾಮೆ

|

ಬೆಂಗಳೂರು, ನವೆಂಬರ್ 26 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಡಿಎ ಅಧ್ಯಕ್ಷರಾಗಿ ಎಸ್. ಆರ್. ವಿಶ್ವನಾಥ್ ಅಧಿಕಾರ ವಹಿಸಿಕೊಂಡಿದ್ದಾರೆ.

ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ನಮ್ಮ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವ ಮೂಲಕ ತಮ್ಮೊಂದಿಗೆ ಅತ್ಯುತ್ತಮ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿಕ್ಕಾಗಿ ಹೃದಯಪೂರ್ವಕ ಧನ್ಯವಾದಗಳು" ಎಂದು ಹೇಳಿದ್ದಾರೆ.

ನಿವೇಶನ ಪಡೆದವರಿಗೆ ಎಚ್ಚರಿಕೆ ಕೊಟ್ಟ ಬಿಡಿಎ

ಎಸ್. ಆರ್. ವಿಶ್ವನಾಥ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಗುರುವಾರ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದ್ದರಿಂದ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ರಾಜೀನಾಮೆ

"ಈಗ ನನಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಬೆಂಗಳೂರು ನಾಗರಿಕರಿಗೆ ಸೇವೆ ಸಲ್ಲಿಸಲು ಜವಾಬ್ದಾರಿಯನ್ನು ನೀಡಿರುವ ಹಿನ್ನಲೆಯಲ್ಲಿ ನಾನು ಈ ದಿನ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿರುತ್ತೇನೆ" ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ರಾಜೀನಾಮೆ ಅಂಗೀಕಾರ!

   ನಾನು ಶ್ವೇತಭವನ ಬಿಟ್ಟುಕೊಡಬೇಕಾ!! ಸಾಧ್ಯಾನೇ ಇಲ್ಲಾ | Trump | Oneindia Kannada

   ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದಾಗ ಎಸ್. ಆರ್. ವಿಶ್ವನಾಥ್, ಎಂ. ಪಿ. ರೇಣುಕಾಚಾರ್ಯ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಬೇರೆ ಹುದ್ದೆ ನೀಡಿರುವ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.

   English summary
   Bengaluru Yelahanka MLA S. R. Vishwanath appointed chairman of Bengaluru Development Authority (BDA) resigned as political secretary to chief minister of Karnataka.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X