• search

ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯ ಪಟ್ಟಾಭಿಷೇಕ

By Balaraj Tantry
Subscribe to Oneindia Kannada
For Quick Alerts
ALLOW NOTIFICATIONS
For Daily Alerts

  ಬೆಂಗಳೂರು, ಆಗಸ್ಟ್ 29: ರಾಮಪಟ್ಟಾಭಿಷೇಕದ ಮೂಲಕ ತ್ರೇತಾಯುಗವನ್ನು ಮರಳಿ ನೆನಪಿಸುವ ಕಾರ್ಯ ಮಾಡಲಾಗುತ್ತದೆ. ಶ್ರೀರಾಮಪಟ್ಟಾಭಿಷೇಕದ ನೈಜ ಸ್ವಾಧ, ಆನಂದ ಸಿಗಬೇಕಾದರೆ ಹಿಂದಿನ ರಾಮಾಯಣದ ಅಧ್ಯಯನ ಮಾಡಬೇಕು.

  ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಮನ ರಾಜತ್ವವನ್ನು ಪ್ರತಿಯೊಬ್ಬರೂ ಅಂಗೀಕರಿಸಿದ್ದೀರಿ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಶ್ರೀಗಳು ಹೇಳಿದರು.

  Sree Kararjitha Pattabhisheka to Lord Rama, Raghaveshwara Seer chaturmasya

  ಬುಧವಾರ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಗೋಸ್ವರ್ಗ ಚಾತುರ್ಮಾಸ್ಯ ಶುಭ ಸಂದರ್ಭದಲ್ಲಿ ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯ ಪಟ್ಟಾಭಿಷೇಕ ಸೇವೆಯ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

  ಹದಿನಾಲ್ಕು ವರ್ಷದ ವನವಾಸ ಮಾಡಿ ಜಗತ್ತಿಗೆ ಸೇತು ನಿರ್ಮಿಸಿ, ಲೋಕ ಕಂಠಕರನ್ನು ಮರ್ಧನ ಮಾಡಿದ ಬಳಿಕ ಶ್ರೀರಾಮನಿಗೆ ಪಟ್ಟಾಭಿಷೇಕವಾಗಿದೆ.

  ಜಗತ್ತಿನ ಕಲ್ಯಾಣ ಕಾರ್ಯಗಳನ್ನು ಮಾಡಿದ ಬಳಿಕ ಪಟ್ಟವನ್ನು ಏರಿದ್ದು. ಮಹಾನ್ ವ್ಯಕ್ತಿಗಳ ಬದುಕಿನ ಸನ್ನಿವೇಶಗಳ ಮೂಲಕವೇ ನೆನಪು ಸದಾ ಉಳಿದುಕೊಳ್ಳುತ್ತದೆ. ರಾಮನ ವೈಭವಕ್ಕೆ ಸಾಟಿಯಾದುದು ಬೇರೊಂದಿಲ್ಲ.

  537ದಿನಕ್ಕೆ ಒಂದು ಬಾರಿ ಅಗತ್ಯ ಪೂಜಿತವಾದ ಶಂಕರಾಚಾರ್ಯ ಪ್ರಭಕ್ತರಾಗಿರತಕ್ಕಂತಹ ಅನೇಕ ಮಹಾತ್ಮರಿಂದ ಸಂಪೂಜಿತವಾಗಿರತಕ್ಕಂತಹ ಶ್ರೀರಾಮ ಸೀತೆಯವರಿಗೆ ಪಟ್ಟಾಭಿಷೇಕವಾಗುತ್ತದೆ ಎಂದು ಶ್ರೀಗಳು ತಿಳಿಸಿದರು.

  ವಿಶಿಷ್ಠವಾಗಿ ಅಲಂಕೃತವಾದ ಸಿಂಹಾಸನದಲ್ಲಿ ಪಟ್ಟಾಭಿಷಿಕ್ತನಾದ ಶ್ರೀಕರಾರ್ಚಿತ ಶ್ರೀರಾಮದೇವರು ಹಾಗೂ ಸೀತಾಮಾತೆಗೆ ರಾಘವೇಶ್ವರ ಶ್ರೀಗಳು ನವರತ್ನಾಭಿಷೇಕ, ಸುವರ್ಣಾಭಿಷೇಕ ರಜತಾಭಿಷೇಕ ಮಾಡಿದರು.

  ವಿಶೇಷ ಸೇವೆ, ಪಟ್ಟಕಾಣಿಕೆಯಾಗಿ ಶ್ರೀಮಠದ ಶಿಷ್ಯಭಕ್ತರು ನವರತ್ನ, ಆಭರಣಗಳು ಸೇರಿ 75ಕ್ಕೂ ಹೆಚ್ಚು ವಿವಿಧ ಸುವಸ್ತುಗಳು ಹಾಗೂ ಕಾಣಿಕೆಗಳನ್ನು ಸೇವಾರೂಪದಲ್ಲಿ ಶ್ರೀರಾಮದೇವರಿಗೆ ಸಮರ್ಪಿಸಿದರು. ಪಟ್ಟಾಭಿಷೇಕದ ಸಂದರ್ಭದಲ್ಲಿ ಸಂಗೀತ ಸೇವೆ, ನೃತ್ಯ ಸೇವೆ, ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ ಮಂತ್ರಗಳ ಘೋಷ ನೆರವೇರಿತು.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  English summary
  Sree Kararjitha Pattabhisheka to Lord Rama. During chaturmasya religious speech Raghaveshwara Seer said, we are remembering Tretha Yuga from Sri Rama Pattabhishekam.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more