ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತಿ
ಬೆಂಗಳೂರು, ಜನವರಿ 24: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತರಾಗಿದ್ದಾರೆ. ನಿರ್ದೇಶಕ ಹುದ್ದೆಗೆ 15ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಸರ್ಕಾರ ನೇಮಕದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ಡಾ. ಸಿ. ಎನ್. ಮಂಜುನಾಥ್ 2007ರಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2023ರ ಜುಲೈನಲ್ಲಿಯೇ ಅವರ ಸೇವಾವಧಿ ಮುಕ್ತಾಯಗೊಂಡಿತ್ತು. ಆಸ್ಪತ್ರೆಯ ಸಿಬ್ಬಂದಿ ಮತ್ತು ಹಲವಾರು ಗಣ್ಯರು ಅವರ ಸೇವೆ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರು.

ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ. ಸಿ. ಎನ್. ಮಂಜುನಾಥ್ ಅವರ ಸೇವೆಯನ್ನು 2024ರ ಜನವರಿ ತನಕ ವಿಸ್ತರಣೆ ಮಾಡಲು ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಈಗ ಅವಧಿ ಮುಕ್ತಾಯಗೊಂಡಿದ್ದು, ನಿವೃತ್ತರಾಗಿದ್ದಾರೆ.
ಜಯದೇವ ಆಸ್ಪತ್ರೆಯನ್ನು ಕಟ್ಟಿ ಬೆಳೆಸುವಲ್ಲಿ ಡಾ. ಸಿ. ಎನ್. ಮಂಜುನಾಥ್ ಅವರ ಅಪಾರವಾದ ಶ್ರಮವಿದೆ. ಮೈಸೂರು ನಗರದಲ್ಲಿ ಜಯದೇವ ಆಸ್ಪತ್ರೆಯ ಶಾಖೆಯನ್ನು ನಿರ್ಮಾಣ ಮಾಡಿ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಕಲಬುರಗಿಯಲ್ಲಿಯೂ ಮಂಜುನಾಥ್ ಅವರ ಉಸ್ತುವಾರಿಯಲ್ಲಿ 371 ಹಾಸಿಗೆ ಸಾಮರ್ಥ್ಯದ ಜಯದೇವ ಸಂಸ್ಥೆಯ ಶಾಖೆ ನಿರ್ಮಾಣವಾಗುತ್ತಿದ್ದು, ಉದ್ಘಾಟನೆಗೆ ಸಜ್ಜಾಗಿದೆ.
15 ಅರ್ಜಿಗಳು ಸಲ್ಲಿಕೆ; ಕರ್ನಾಟಕದಲ್ಲಿ ವಿವಿಧ ಸರ್ಕಾರಗಳು ಅಧಿಕಾರದಲ್ಲಿ ಇದ್ದಾಗಲೂ ಡಾ. ಸಿ. ಎನ್. ಮಂಜುನಾಥ್ ಅವರನ್ನು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಮುಂದುವರೆಸಲಾಗಿತ್ತು. ಆದರೆ ಈಗ ಹೊಸ ನಿರ್ದೇಶಕರ ನೇಮಕವಾಗಲಿದೆ ಎಂಬ ಮಾಹಿತಿ ಇದೆ. ಈ ಹುದ್ದೆಗಾಗಿ 15 ಅರ್ಜಿಗಳು ಸಲ್ಲಿಕೆಯಾಗಿವೆ.
2021ರಲ್ಲಿ ಡಾ. ಸಿ. ಎನ್. ಮಂಜುನಾಥ್ ಅವಧಿ ಮುಕ್ತಾಯಗೊಂಡಿತ್ತು. ಆಗ ಕರ್ನಾಟಕ ಸರ್ಕಾರ ಆದೇಶವೊಂದನ್ನು ಹೊರಡಿಸಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಇಲ್ಲಿಗೆ ಸರ್ಕಾರದ ಅಧಿಸೂಚನೆ ದಿನಾಂಕ 25/6/2021ರಲ್ಲಿ ಡಾ. ಸಿ. ಎನ್. ಮಂಜುನಾಥ್ ಇವರನ್ನು ನಿರ್ದೇಶಕರ ಹುದ್ದೆಗೆ ನೇಮಕ ಮಾಡಲಾಗಿರುವ ಅವಧಿಯು ದಿನಾಂಕ 19/7/2022ಕ್ಕೆ ಮುಕ್ತಾಯಗೊಳ್ಳುತ್ತಿದೆ ಎಂದು ಹೇಳಿತ್ತು.
ಸಂಸ್ಥೆಯ ಆಡಳಿತ ಮಂಡಳಿಯ ಘಟನೋತ್ತರ ಅನುಮೋದನೆ ಪಡೆಯುವ ಷರತ್ತಿಗೊಳಪಟ್ಟು, ಸಂಸ್ಥೆಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಡಾ. ಸಿ. ಎನ್. ಮಂಜುನಾಥ್ ಇವರನ್ನು ದಿನಾಂಕ 20/7/2022ರಿಂದ ದಿನಾಂಕ 19/7/2023ರ ತನಕ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಿ ಆದೇಶ ಹೊರಡಿಸಿತ್ತು.
ಬಳಿಕ 2023ರ ಜುಲೈನಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿ ಸಭೆ ಮತ್ತು ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಡಾ. ಮಂಜುನಾಥ್ ಅವರ ಅವಧಿ ವಿಸ್ತರಣೆ ಮಾಡುವ ಒಮ್ಮತದ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಬಳಿಕ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಸಭೆಯಲ್ಲಿ ಅವರ ಅವಧಿ ವಿಸ್ತರಣೆ ಮಾಡಲಾಗಿತ್ತು.
ಕಲಬುರಗಿ ಆಸ್ಪತ್ರೆ ಲೋಕಾರ್ಪಣೆ; ಡಾ. ಸಿ. ಎನ್. ಮಂಜುನಾಥ್ ಮಾರ್ಗದರ್ಶನದಲ್ಲಿ ಕಲಬುರಗಿ ನಗರದ ಹೃದಯ ಭಾಗದಲ್ಲಿ 6.8 ಎಕರೆ ಪ್ರದೇಶದಲ್ಲಿ 183 ಕೋಟಿ ರೂ. ವೆಚ್ಚದಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖಾ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಈ ಆಸ್ಪತ್ರೆ ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದಿದ್ದು, ಲೋಕಾರ್ಪಣೆಗೆ ಸಿದ್ಧವಾಗಿದೆ.
ಕಳೆದ ವಾರ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಆಸ್ಪತ್ರೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಸುಮಾರು 56 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳೊಂದಿಗೆ ಆಸ್ಪತ್ರೆ ತನ್ನ ಸೇವೆಯನ್ನು ಶೀಘ್ರದಲ್ಲೇ ಆರಂಭಿಸಲಿದೆ.
ಕಲಬುರಗಿಯ ನೂತನ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೇವೆ ನೀಡಲು ಸಿಬ್ಬಂದಿಗಳ ನೇಮಕಾತಿಗೂ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹಣಕಾಸು ಇಲಾಖೆಯ ಸಹಮತಿಯೂ ಸಿಕ್ಕಿದೆ. ಈ ಜಯದೇವ ಶಾಖೆ ಆಸ್ಪತ್ರೆ ಕಲ್ಯಾಣ ಕರ್ನಾಟಕ ಭಾಗದ ಹೃದ್ರೋಗಿಗಳ ಪಾಲಿಗೆ ಸಂಜೀವಿನಿಯಾಗಿ ಕಾರ್ಯನಿರ್ವಹಿಸಲಿದೆ.
2016ರಲ್ಲಿ ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆ ಶಾಖೆ ಆರಂಭವಾಯಿತು. ಇದಕ್ಕೂ ಮೊದಲು ಹೃದ್ರೋಗಿಗಳು ಚಿಕಿತ್ಸೆಗೆ ಸೋಲ್ಹಾಪುರ, ಹೈದರಾಬಾದ್ ಅಥವಾ ದೂರದ ಬೆಂಗಳೂರಿಗೆ ತೆರಳಬೇಕಿತ್ತು. ಈಗ ಜಯದೇವ ಆಸ್ಪತ್ರೆ ಸ್ವಂತ ಕಟ್ಟಡ ನಿರ್ಮಾಣಗೊಂಡಿದ್ದು, ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
ಕಣ್ಣು ಸಮಸ್ಯೆಗಳು ಹೆಚ್ಚುತ್ತಿವೆಯೇ? ಈ ಆಹಾರಗಳು ನಿಮ್ಮ ದೃಷ್ಟಿಯನ್ನು ರಕ್ಷಿಸುತ್ತವೆ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಮುಚ್ಚಿಟ್ಟರೆ ಜೈಲುಪಾಲು: ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಖಡಕ್ ಎಚ್ಚರಿಕೆ -
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಬಿಸಿಲಿನ ತಾಪಕ್ಕೆ ಕಳೆಗುಂದಿದೆಯೇ ಮುಖದ ಕಾಂತಿ? ಬೇಸಿಗೆಯಲ್ಲಿ ತ್ವಚೆಯ ರಕ್ಷಣೆಗೆ ಇಲ್ಲಿವೆ 12 ಸರಳ ಸೂತ್ರ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ -
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ












Click it and Unblock the Notifications