ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟ : ನೋಡೆಲ್ ಅಧಿಕಾರಿ ನೇಮಕ

|
Google Oneindia Kannada News

ಬೆಂಗಳೂರು, ಏಪ್ರಿಲ್ 22 : ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ವಿಶೇಷ ನೋಡಲ್ ಅಧಿಕಾರಿನ್ನು ನೇಮಕ ಮಾಡಿದೆ. ಹಲವಾರು ಕನ್ನಡಿಗರು ಶ್ರೀಲಂಕಾದಲ್ಲಿ ಸಿಲುಕಿದ್ದಾರೆ ಅವರನ್ನು ರಕ್ಷಿಸಲು ಪ್ರಯತ್ನ ನಡೆಸಲಾಗುತ್ತಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ರಾಜ್ಯದಿಂದ ಶ್ರೀಲಂಕಾಗೆ ಪ್ರವಾಸ ಹೋಗಿದ್ದ ಏಳು ಜನರಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಟ್ವೀಟ್‌ನಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

ಶ್ರೀಲಂಕಾ ಸ್ಫೋಟ: ಇನ್ನೂ ಪತ್ತೆಯಾಗದ ಇಬ್ಬರು ಕನ್ನಡಿಗರುಶ್ರೀಲಂಕಾ ಸ್ಫೋಟ: ಇನ್ನೂ ಪತ್ತೆಯಾಗದ ಇಬ್ಬರು ಕನ್ನಡಿಗರು

Sri Lanka serial blast : Govt appoints nodal officer

'ಶ್ರೀಲಂಕಾ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಅವರನ್ನು ನೋಡಲ್ ಅಧಿಕಾರಿಯಾಗಿ ಮುಖ್ಯ ಕಾರ್ಯದರ್ಶಿಗಳು ನೇಮಕ ಮಾಡಿದ್ದು ಅವರು ಶ್ರೀಲಂಕಾದಲ್ಲಿರುವ ಭಾರತೀಯ ರಾಯಭಾರ ಕಛೇರಿಯೊಂದಿಗೆ ಸಮನ್ವಯ ನಡೆಸುತ್ತಿದ್ದಾರೆ' ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

4 ಸಾವು : ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಕಾಣೆಯಾಗಿದ್ದ ಕರ್ನಾಟಕದ ಏಳು ಜನರಲ್ಲಿ 4 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮೃತಪಟ್ಟವರ ಹೆಸರು : ಮೃತಪಟ್ಟವರನ್ನು ಲಕ್ಷ್ಮಣ ಗೌಡ ರಮೇಶ್, ಕೆ.ಎಂ. ಲಕ್ಷ್ಮೀನಾರಾಯಣ, ಎಂ. ರಂಗಪ್ಪ ಹಾಗೂ ಕೆ.ಜಿ. ಹನುಮಂತರಾಯಪ್ಪ ಎಂದು ಗುರುತಿಸಲಾಗಿದೆ.

ಶ್ರೀಲಂಕಾದಲ್ಲಿ ಜೆಡಿಎಸ್ ಮುಖಂಡರ ನಾಪತ್ತೆ, ಸಾವು: ಕುಮಾರಸ್ವಾಮಿ ಆಘಾತಶ್ರೀಲಂಕಾದಲ್ಲಿ ಜೆಡಿಎಸ್ ಮುಖಂಡರ ನಾಪತ್ತೆ, ಸಾವು: ಕುಮಾರಸ್ವಾಮಿ ಆಘಾತ

English summary
Karnataka government has appointed nodal officers to address public grievances after serial blast in Sri Lanka. Karnataka's 6 persons missing after April 21 serial blast in Sri Lank.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X