ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಮೋದ್ ಮುತಾಲಿಕ್ ಸ್ಪರ್ಧೆ ಪಕ್ಕಾ

|
Google Oneindia Kannada News

Recommended Video

ಕರ್ನಾಟಕ ವಿಧಾನಸಭಾ ಚುನಾವಣೆಗೆ ಪ್ರಮೋದ್ ಮುತಾಲಿಕ್ ಸ್ಪರ್ಧೆ ಕನ್ಫರ್ಮ್ | Oneindia Kannada

ಚಿಕ್ಕಮಗಳೂರು, ನವೆಂಬರ್ 20: ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ 2018ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಶಿವಸೇನೆ ಅಭ್ಯರ್ಥಿಗಳ ಸ್ಪರ್ಧೆ?ಕರ್ನಾಟಕ ವಿಧಾನಸಭೆ ಚುನಾವಣೆಗೆ ಶಿವಸೇನೆ ಅಭ್ಯರ್ಥಿಗಳ ಸ್ಪರ್ಧೆ?

ಈ ಬಗ್ಗೆ ಸ್ವತಃ ಪ್ರಮೋದ್ ಮುತಾಲಿಕ್ ಅವರು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, :ರಾಜ್ಯದಲ್ಲಿ ಹಿಂದುತ್ವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಹೀಗಾಗಿ ಹಿಂದುತ್ವದ ರಕ್ಷಣೆಗಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸಲಿದ್ದೇನೆ" ಎಂದು ಸ್ಪಷ್ಟ ಪಡಿಸಿದರು.

Sri Ram Sene president Pramod Muthalik sure to contest in 2018 Karnataka assembly election

ಈಗಾಗಲೇ ಚಿಕ್ಕಮಗಳೂರು ಸೇರಿದಂತೆ ರಾಜ್ಯದ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ದಿಸುವಂತೆ ಆಹ್ವಾನ ಬಂದಿದೆ. ಈ ಪೈಕಿ ಯಾವುದಾದರೊಂದು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗಿದೆ.

ಈಗಾಗಲೇ ಶಿವಸೇನೆಯೊಂದಿಗೆ ಎರಡು ಸುತ್ತಿನ ಮಾತುಕತೆ ನಡೆದಿದೆ. ಈ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕಾರ್ಯಕರ್ತರು ಮತ್ತು ಪ್ರಮುಖರು ಬಿಜೆಪಿಯನ್ನು ಸಂಪರ್ಕಿಸುತ್ತಿದ್ದೇವೆ. ಆದರೆ, ಸೌಜನ್ಯಕ್ಕೂ ನಮ್ಮನ್ನು ಸಂಪರ್ಕಿಸಿಲ್ಲ' ಎಂದು ಮುತಾಲಿಕ್ ಇತ್ತೀಚೆಗೆ ಕಲಬುರಗಿಯಲ್ಲಿ ಹೇಳಿದ್ದರು.

English summary
Pramod Muthalik, president of Sri Ram Sene is almost sure to contest the 2018 Karnataka assembly elections. Speaking to reporters in Chikkamagaluru, I am contesting the next assembly elections Pramod Muthalik said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X