ಶೃಂಗೇರಿ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿ.ಕೆ. ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ಶೃಂಗೇರಿ ಮರುಎಣಿಕೆ ವಿವಾದ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಮರುಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿ, ತನಿಖೆ ಮತ್ತು ಕಾನೂನು ಹೋರಾಟದ ಬಗ್ಗೆ ಅವರು ಸ್ಪಷ್ಟಪಡಿಸಿದ್ದಾರೆ.

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಇಲ್ಲಿ ನಡೆದಿರುವುದು ಷಡ್ಯಂತ್ರ. ಅತ್ಯಂತ ಆಘಾತಕಾರಿ ವಿಚಾರ. ನಾವು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ಕಾನೂನಾತ್ಮಕವಾಗಿಯೂ ಹೋರಾಟ ಮಾಡುತ್ತೇವೆ" ಎಂದು ಹೇಳಿದರು.

Sringeri Recount Row

"ಇದು ಅಂತಾರಾಷ್ಟ್ರೀಯ ಮಟ್ಟದ ಸಂಚಿನ ರೀತಿ ಕಾಣುತ್ತಿದೆ. ನಮಗೆ ಅನುಮಾನ ಇದ್ದಿದ್ದರೆ ನಾವು ಸುಪ್ರೀಂ ಕೋರ್ಟ್‌ಗೆ ಹೋಗುತ್ತಿದ್ದೆವು. ಆದರೆ ಇಲ್ಲಿ ಮತ ಎಣಿಕೆ ಬಾಕ್ಸ್‌ಗಳನ್ನು ತೆರೆಯಲಾಗಿದೆ. ಕೆಲವರನ್ನು ಬಳಸಿಕೊಂಡು ನಮ್ಮ ಮತಗಳಿದ್ದ ಬ್ಯಾಲೆಟ್ ಪೇಪರ್‌ಗಳ ಮೇಲೆ ಮತ್ತೊಂದು ಗುರುತು ಹಾಕಲಾಗಿದೆ. ಎಲ್ಲ ಬಂಡಲ್‌ಗಳನ್ನು ಮಾನ್ಯ ಎಂದು ಘೋಷಿಸಿದ ಬಳಿಕ ಈ ರೀತಿಯ ಬದಲಾವಣೆ ಹೇಗೆ ನಡೆದಿದೆ?" ಎಂದು ಪ್ರಶ್ನಿಸಿದರು.

"ಇಂತಹವರಿಗೆ ಮತ ಬಿದ್ದಿದೆ ಎಂದು ಪ್ರತಿ ಮತಗಳನ್ನು ಎಲ್ಲರಿಗೂ ತೋರಿಸಿರುತ್ತಾರೆ. ಇದನ್ನು ಕ್ಯಾಮೆರಾದಲ್ಲಿಯೂ ದಾಖಲಿಸಲಾಗಿದೆ. ಸಂಪೂರ್ಣ ಮತ ಎಣಿಕೆಯಾದ ಮೇಲೆ ಬಂಡಲ್ ಗಳನ್ನು ಒಳಗೆ ಹಾಕಿ ಸೀಲ್ ಮಾಡಲಾಗಿರುತ್ತದೆ. ಇದಾದ ನಂತರ ಬಂಡಲ್ ತೆಗೆದು ಮತ್ತೊಂದು ಗುರುತು ಮಾಡಲಾಗಿದೆ. ಈಗ ಅದು ಮಾತ್ರ ಎಣಿಕೆಯಾಗಬೇಕು ಎಂದು ನ್ಯಾಯಲಯದ ಮೂಲಕ ಆದೇಶ ತಂದು ಈ ರೀತಿ ಮಾಡಲಾಗಿದೆ" ಎಂದು ಹೇಳಿದರು.

"ಇದರ ಬಗ್ಗೆ ದೊಡ್ಡ ತನಿಖೆ ಅವಶ್ಯಕತೆಯಿದೆ. ಈ ಹಿಂದೆ ಫಲಿತಾಂಶ ಸರಿಯಾಗಿತ್ತು ಎಂದು ಎಲ್ಲರೂ ಸಹಿ ಮಾಡಿದ್ದಾರೆ. ಚುನಾವಣಾ ಆಯೋಗದ ಬಳಿಯೂ ದಾಖಲೆಯಿದೆ. ಆದರೆ ಮರುಎಣಿಕೆಯಲ್ಲಿ ಬದಲಾವಣೆಯಾಗಿದೆ. ಒಬ್ಬರಿಗೆ ಮತ ಬಿದ್ದ ಕಡೆ ಇನ್ನೊಬ್ಬರಿಗೂ ಗುರುತು ಹಾಕಲಾಗಿದೆ. ಇದರ ಬಗ್ಗೆ ದೂರನ್ನು ಸಹ ನೀಡಲಾಗಿದೆ" ಎಂದರು.

ಫಲಿತಾಂಶದ ಬಗ್ಗೆ ರಿಟರ್ನಿಂಗ್ ಆಫೀಸರ್ ನ್ಯಾಯಲಯಕ್ಕೆ ಕಳುಹಿಸಬೇಕಿತ್ತು. ಸಂಬಂಧಿಸಿದ ಅಧಿಕಾರಿ ಇದನ್ನೆಲ್ಲಾ ಗಮನಿಸಿದ್ದಾರೆ. ಇದು ಇಡೀ ರಾಜ್ಯಕ್ಕೆ ಕಳಂಕದ ಪ್ರಕರಣ ಎಂದರು.

"ಈ ಹಿಂದೆ ನಾಯಕರೊಬ್ಬರು ಸಹಕಾರಿ ಚುನಾವಣೆ ವೇಳೆ ಮತಪತ್ರವನ್ನೇ ನುಂಗಿದ್ದರು. ಈಗ ಇಲ್ಲಿಯೂ ಹೆಚ್ಚಿನ ಗುರುತು ಮಾಡಿ, ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ಅಕ್ರಮ ಎಸಗಲಾಗಿದೆ. ಗಾಯತ್ರಿ ಶಾಂತನಗೌಡ ಅವರ ವಿಚಾರವನ್ನು ನ್ಯಾಯಲಯದಲ್ಲಿ ಬ್ಲಾಕ್ ಮಾಡಿಕೊಂಡೆ ಬರುತ್ತಿದ್ದಾರೆ. ಸೌಮ್ಯ ರೆಡ್ಡಿ ಅವರು 12 ಮತಗಳ ಅಂತರದಲ್ಲಿ ಸೋತಿದ್ದಾರೆ. ಅದು ಇನ್ನು ಎಣಿಕೆಯಾಗಿಲ್ಲ. ಇದು ಹೇಗೆ ಎಣಿಕೆಯಾಗುತ್ತದೆ" ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರಗಳ ಬಳಕೆ ಮಾಡಿದರೆ ದರುಪಯೋಗವಾಗುತ್ತದೆ ಎನ್ನುವ ಜೆಡಿಎಸ್ ಆರೋಪದ ಬಗ್ಗೆ ಕೇಳಿದಾಗ, "ಅವರು ಮೊದಲು ಚುನಾವಣೆಗೆ ನಿಲ್ಲುತ್ತಾರೋ ಅಥವಾ ಬಿಜೆಪಿ ಜೊತೆ ವಿಲೀನ ಆಗುತ್ತಾರೋ ಎಂಬುದನ್ನು ಮೊದಲು ನೋಡೋಣ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+