ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತ್ಯೇಕ ರಾಜ್ಯ: ಎಚ್ಡಿಕೆ ವಿರುದ್ಧ ಶ್ರೀರಾಮುಲು ಆಕ್ರೋಶ

|
Google Oneindia Kannada News

Recommended Video

ಕುಮಾರಣ್ಣನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರಾಮುಲು..! | Oneindia Kannada

ಮೊಳಕಾಲ್ಮೂರು, ಜುಲೈ 30: "ಮತ ನೀಡಲಿಲ್ಲವೆಂಬ ಕಾರಣಕ್ಕೆ ಉತ್ತರ ಕರ್ನಾಟಕವನ್ನು ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ" ಎಂದು ಬಿಜೆಪಿ ಮುಖಂಡ, ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಹೇಳಿದ್ದಾರೆ.

ಕರ್ನಾಟಕದಲ್ಲಿ ಜೋರುದನಿಯಲ್ಲಿರುವ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಪರ ವಿರೋಧದ ಚರ್ಚೆ ನಡೆಯುತ್ತಲೇ ಇದೆ.

"ಉತ್ತರ ಕರ್ನಾಟಕದ ಬಹುಪಾಲು ಜಿಲ್ಲೆಗಳು ನಿರ್ಲಕ್ಷ್ಯಕ್ಕೊಳಗಾಗುತ್ತಿರುವುದು ಹೌದು, ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ನನ್ನದೂ ಬೆಂಬಲವಿದೆ" ಎಂದಿದ್ದ ಶ್ರೀರಾಮುಲು ಇದೀಗ ಯೂಟರ್ನ್ ತೆಗೆದುಕೊಂಡಿದ್ದಾರೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಇಷ್ಟೆಲ್ಲಾ ಲಾಭಗಳು ಆಗುತ್ತವಂತೆಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಇಷ್ಟೆಲ್ಲಾ ಲಾಭಗಳು ಆಗುತ್ತವಂತೆ

"ಅಖಂಡ ಕರ್ನಾಟಕವು ಯಾವುದೇ ಕಾರಣಕ್ಕೂ ವಿಭಜನೆಯಾಗಬಾರದು ಎನ್ನುವುದು ನನ್ನ ಸ್ಪಷ್ಟ ನಿಲುವು. ರಾಜ್ಯ ಒಡೆಯಲು ಕೆಲವು ಸಂಘಟನೆಗಳು ಕರೆ ನೀಡಿರುವ ಬಂದ್‌ಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸಿಎಂ ವಿರುದ್ಧ ಆಕ್ರೋಶ

"ಸಿಎಂ ಕುಮಾರಸ್ವಾಮಿಯವರು ಉತ್ತರ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯವೇ ಇಂದಿನ ಈ ಪರಿಸ್ಥಿತಿಗೆ ನೇರ ಕಾರಣ. ಮತ ನೀಡಲಿಲ್ಲವೆಂಬ ಕಾರಣಕ್ಕೆ ಉತ್ತರ ಕರ್ನಾಟಕವನ್ನು ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬಗೆಯುತ್ತಿರುವ ಈ ದ್ರೋಹವನ್ನು ಮುಚ್ಚಿಡಲು ಕೆಲವು ದುಷ್ಟಶಕ್ತಿಗಳು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿವೆ ಎಂದು ಅವರು ಆಕ್ರೋಶದಿಂದ ಟ್ವೀಟ್ ಮಾಡಿದ್ದಾರೆ.

ಏನಿದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು? ಆ.2ರ ಬಂದ್ ಯಾಕಾಗಿ?ಏನಿದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು? ಆ.2ರ ಬಂದ್ ಯಾಕಾಗಿ?

ಬಹಿರಂಗವಾಗಿಯೇ ಬೆಂಬಲ ಸೂಚಿಸಿದ್ದ ಶ್ರೀರಾಮುಲು

ಬಹಿರಂಗವಾಗಿಯೇ ಬೆಂಬಲ ಸೂಚಿಸಿದ್ದ ಶ್ರೀರಾಮುಲು

ಜುಲೈ 11 ರಂದು ವಿಧಾನಸಭೆಯಲ್ಲಿ ಬಜೆತ್ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆಯಲ್ಲಿ ಮಾತನಾಡಿದ್ದ ಶ್ರೀರಾಮುಲು, 'ಉತ್ತರ ಕರ್ನಾಟಕವನ್ನು ಸರ್ಕಾರ ನಿರ್ಲಕ್ಷಿಸಿದೆ, ಹಾಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ನನ್ನ ಬೆಂಬಲವಿದೆ' ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರದೆ ಅವರ ಹೇಳಿಕೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಹಿರಿಯರು ವಿರೋಧಿಸಿದ್ದರು. ಪಕ್ಷದ ನಾಯಕರೇ ಶ್ರೀರಾಮುಲು ಹೇಳಿಕೆಗೆ ವ್ಯಕ್ತಿರಿಕ್ತವಾದ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರೀಗ ಯೂಟರ್ನ್ ತೆಗೆದುಕೊಂಡಿದ್ದಾರೆ.

ಅಖಂಡತೆಯ ಮೇಲೆ ಅಪಾರ ಗೌರವ

ಕರ್ನಾಟಕದ ಅಖಂಡತೆಯಲ್ಲಿ ನನಗೆ ಅಪಾರ ಗೌರವವಿದೆ. ಉತ್ತರ-ದಕ್ಷಿಣವೆಂಬ ಭೇದವಿಲ್ಲದೇ ಸಮಾನವಾಗಿ ಕಾಣಬೇಕೆಂದು ಬಯಸುತ್ತೇನೆ. ಸಮ್ಮಿಶ್ರ ಸರಕಾರವು ಉತ್ತರ ಕರ್ನಾಟಕಕ್ಕೂ ಆದ್ಯತೆ ನೀಡುವ ಮೂಲಕ ಕರ್ನಾಟಕದ ಏಕೀಕರಣವನ್ನು ಗೌರವಿಸಲಿ.

ಸಿದ್ದು-ಗುದ್ದು!

ಸಿದ್ದು-ಗುದ್ದು!

ಶ್ರೀರಾಮುಲು ಅವರು ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸಿ, ರಾಜ್ಯವನ್ನು ವಿಭಜಿಸಲು ಹೊರಟಿದ್ದಾರೆ ಎಂದು ದೂರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀರಾಮುಲು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಕರ್ನಾಟಕ ಏಕೀಕರಣದ ಇತಿಹಾಸವೇ ಗೊತ್ತಿಲ್ಲದ ಶ್ರೀರಾಮುಲು ಪ್ರತ್ಯೇಕ ರಾಜ್ಯದ ಬೇಡಿಕೆ ಇಡುತ್ತಿದ್ದಾರೆ. ಅವರ ಬೇಡಿಗೆ ಮೂರ್ಖತನದ್ದು ಎಂದು ಲೇವಡಿ ಮಾಡಿದ್ದರು.

English summary
BJP leader and Molakalmuru MLA B Sriramulu blames Chief minister HD Kumaraswamy for neglecting North Karnataka, and he aslo confirms that he will never support Concept of Separate north Karnataka state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X