ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಐತಿಹಾಸಿಕ ಬಜೆಟ್ ಮಂಡನೆ!

|
Google Oneindia Kannada News

ಬೆಂಗಳೂರು, ಫೆ. 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಐತಿಹಾಸಿಕ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಅವರು ಹೇಳಿದ್ದಾರೆ. ನಿರ್ಮನಾ ಸೀತಾರಾಮನ್ ಅವರು ಮಂಡಿಸಿದ 2021-22ನೇ ಸಾಲಿನ ಬಜೆಟ್ ಕುರಿತು ವಿಧಾನಸೌಧದಲ್ಲಿ ಶ್ರೀರಾಮುಲು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ರಾಜ್ಯ ಮತ್ತು ದೇಶದ ಅಭಿವೃದ್ಧಿ ದೃಷ್ಟಿಯಿಂದ ಬಜೆಟ್ ಮಂಡನೆ ಮಾಡಿದ್ದಾರೆ. ಡಾ. ಅಂಬೇಡ್ಕರ್ ಅವರ ಆಶಯದಂತೆ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ 35 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ. ಜೊತೆಗೆ ಶೈಕ್ಷಣಿಕ ವಲಯಕ್ಕೆ 99 ಸಾವಿರ ಕೋಟಿ ರೂ. ಹಣ ಹಂಚಿಕೆ ಮಾಡಿದ್ದಾರೆ ಎಂದು ಹೇಳಿದರು.

ಬೆಂಗಳೂರು ಮೆಟ್ರೋ, ಸರ್ಬನ್ ರೈಲು ಯೋಜನೆಗೆ ಹಣ ನೀಡಿದ್ದಾರೆ. ಜೊತೆಗೆ ಶೋಶಿತ ವರ್ಗಕ್ಕೆ, ಮಹಾತ್ಮ ಗಾಂಧಿ, ಬಸವಣ್ಣ ಆಶಯದಂತೆ ಸಹಾಯ ಮಾಡಿದ್ದಾರೆ. ಐತಿಹಾಸಿಕ ಬಜೆಟ್ ಮಂಡನೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಅಭಿನಂದನೆಗಳು ಎಂದು ಸಚಿವ ಶ್ರೀರಾಮುಲು ಹೇಳಿದರು.

Sriramulu Reaction to Union Budget 2021

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾನಮ್ ಅವರು 2020-21ನೇ ಸಾಲಿನಲ್ಲಿ 30,42,230 ಕೋಟಿ ರೂ. ಬಜೆಟ್ ಮಂಡನೆ ಮಾಡಿದ್ದಾರೆ. ಕೇಳೆದ 2019-20ನೇ ಸಾಲಿನ ಪರಿಷ್ಕೃತ ಅಂದಾಜುಗಿಂತ ಶೇಕಡಾ 12.7 ಹೆಚ್ಚಾಗಿದೆ.

Sriramulu Reaction to Union Budget 2021

ಮೀಸಲಾತಿ ಒತ್ತಾಯ ವಿಚಾರ: ಜನಸಂಖ್ಯೆ ಆಧಾರದ ಮೇಲೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ಒದಗಿಸಲಾಗುವುದು. ವಾಲ್ಮಿಕಿ ಸಮುದಾಯಕ್ಕೆ ಶೇ. 7.5 ರಷ್ಟು ಮೀಸಲಾತಿ ಒತ್ತಾಯಕ್ಕೆ ಸಂಬಂಧಿಸಿದಂತೆ ಶ್ರೀರಾಮುಲು ಅವರು ಪ್ರತಿಕ್ರಿಯೆ ನೀಡಿದರು. ಈ ಬಗ್ಗೆ ಸೂಕ್ತಕ್ರಮಕ್ಕಾಗಿ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ. ಸಂಪುಟ ಉಪ ಸಮಿತಿ ಕೊಡುವ ವರದಿಯನ್ನು ಸಂಪುಟದಲ್ಲಿಟ್ಟು ಚರ್ಚೆ ಮಾಡಲಾಗುವುದು. ಸಿಎಂ ಯಡಿಯೂರಪ್ಪ ಅವರ ಅಧಿಕಾರವಧಿಯಲ್ಲಯೇ ವಾಲ್ಮಿಕಿ ಸಮುದಾಯಕ್ಕೆ ಶೇಕಡಾ 7.5 ರಷ್ಟು ಮೀಸಲಾತಿ ಕೊಡುತ್ತೇವೆ. ಜೊತೆಗೆ ಉಳಿದ ಸಮುದಾಯಗಳ ಮೀಸಲಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸೌಧದಲ್ಲಿ ಶ್ರೀರಾಮುಲು ಅವರು ಹೇಳಿಕೆ ನೀಡಿದ್ದಾರೆ.

Recommended Video

Union Budget 2021 : ಆರೋಗ್ಯ ಕೇಂದ್ರದಲ್ಲಿ ಸಾಕಷ್ಟು ಬದಲಾವಣೆ! | Oneindia Kannada

English summary
Union Finance Minister Nirmala Sitharaman presented the historic budget, Social Welfare Minister Sriramulu said. Sriramulu has responded to the Budget 2021-22 presented by Nirmana Sitharaman in Vidhanasoudha. Know more about Budget 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X