ಬಳ್ಳಾರಿ ಡಿಸಿ ಬಿಸ್ವಾಸ್ ಬಗ್ಗೆ ಸದನದಲ್ಲಿ ಬಿಸಿ-ಬಿಸಿ ಚರ್ಚೆ

ಬೆಂಗಳೂರು, ಫೆ.21 : ಬಳ್ಳಾರಿ ಜಿಲ್ಲಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ವರ್ತನೆ ಬಗ್ಗೆ ಶುಕ್ರವಾರ ಸದನದಲ್ಲಿ ಚರ್ಚೆ ನಡೆದಿದೆ. ಜಿಲ್ಲೆಯ ಅಭಿವೃದ್ಧಿಗೆ ಕಂಟಕವಾಗಿರುವ ಬಿಸ್ವಾಸ್ ಅವರನ್ನು ವರ್ಗಾವಣೆ ಮಾಡಬೇಕೆಂದು ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಶಾಸಕ ಬಿ.ಶ್ರೀರಾಮುಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆಯಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ಶ್ರೀರಾಮುಲು, ಬಳ್ಳಾರಿ ಜಿಲ್ಲಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಅವರು ಜನಪ್ರತಿನಿಧಿಗಳಿಗೆ ಗೌರವ ನೀಡುತ್ತಿಲ್ಲ. ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಅವರನ್ನು ವರ್ಗಾವಣೆ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.

Sriramulu

ಜನಪ್ರತಿನಿಧಿಗಳು ಜಿಲ್ಲಾಧಿಕಾರಿಯನ್ನು ಭೇಟಿಯಾಗಲು ಹೋದೆ ಕಾಯಿಸುತ್ತಾರೆ. ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಗೂ ಅವರು ಅಡ್ಡಗಾಲು ಹಾಕುತ್ತಿದ್ದು, ಅವರನ್ನು ವರ್ಗಾವಣೆ ಮಾಡಿ ಎಂದು ಸರ್ಕಾರವನ್ನು ಆಗ್ರಹಿಸಿರು. ಇದಕ್ಕೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸಹ ಧ್ವನಿ ಗೂಡಿಸಿದರು. [ಬಳ್ಳಾರಿ ಡಿಸಿ ವಿರುದ್ಧ ಶಾಸಕರು ಗರಂ]

ಸಿಎಂ ಪ್ರತಿಕ್ರಿಯೆ : ಬಿ.ಶ್ರೀರಾಮುಲು ಮತ್ತು ಜಗದೀಶ್ ಶೆಟ್ಟರ್ ಮಾತಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಬಳ್ಳಾರಿಗೆ ಆದಿತ್ಯ ಆಮ್ಲಾನ್ ಬಿಸ್ವಾಸ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿದ್ದು ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾದ ಸಮಯದಲ್ಲಿ, ಆಗ ಅವರ ವರ್ತನೆ ನಿಮಗೆ ಸರಿ ಕಾಣುತ್ತಿತ್ತೆ ಎಂದು ಸಿಎಂ ಕುಟುಕಿದರು. ಶಾಸಕರು ಒತ್ತಾಯದ ಕುರಿತು ಚಿಂತನೆ ನಡೆಸುವುದಾಗಿ ಸಿದ್ದರಾಮಯ್ಯ ಹೇಳಿದರು. [11 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ]

ಶಾಸಕರ ಅಸಮಾಧಾನ : ಜ.31 ರಂದು ಆದಿತ್ಯ ಆಮ್ಲಾನ್ ಬಿಸ್ವಾಸ್ ವಿರುದ್ಧ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು ತಿರುಗಿಬಿದ್ದಿದ್ದರು. ಡಿಸಿ ವರ್ತನೆ ವಿರುದ್ಧ ಮುಖ್ಯಮಂತ್ರಿಗಳಿಗೆ ದೂರು ನೀಡುವುದಾಗಿ ಹೇಳಿದ್ದರು. ಸಂಡೂರು ಕ್ಷೇತ್ರದ ಶಾಸಕ ತುಕರಾಂ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಒತ್ತಾಯಿಸಿದ್ದರು.

ಸದ್ಯ ಸದನದಲ್ಲಿ ಜಿಲ್ಲಾಧಿಕಾರಿ ವಿರುದ್ಧ ಬಿ.ಶ್ರೀರಾಮುಲು ಮತ್ತು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಆದಿತ್ಯ ಆಮ್ಲಾನ್ ಬಿಸ್ವಾಸ್ ವರ್ಗಾವಣೆಯಾಗುತ್ತಾರಾ? ಎಂಬ ಪ್ರಶ್ನೆ ಮೂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+