Karnataka SSLC Exam 2022: ಮೊದಲ ದಿನ ಶೇ. 97. 59 ರಷ್ಟು ವಿದ್ಯಾರ್ಥಿಗಳು ಹಾಜರು!

ಬೆಂಗಳೂರು, ಮಾ. 28: ರಾಜ್ಯದಲ್ಲಿ ಸೋಮವಾರ ನಡೆದ ಮೊದಲ ದಿನದ ಎಸ್ಎಸ್ಎಲ್ ಸಿ ಪರೀಕ್ಷೆಗೆ 8,48 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 20,994 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.

ಮಾ.28 ರಂದು ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದೆ. ಪ್ರಥಮ ಭಾಷೆ ಪರೀಕ್ಷೆಯನ್ನು ನಡೆಸಲಾಗಿದೆ. ಹಿಜಾಬ್ ಗೊಂದಲದ ನಡುವೆಯೂ ಬಹುತೇಕ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ರಾಜ್ಯದ 3,444 ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ ಎಮದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ರಾಜ್ಯ ಪಠ್ಯ ಕ್ರಮದಲ್ಲಿ ಅಧ್ಯಯನ ಮಾಡುತ್ತಿರುವ 8,69,399 ವಿದ್ಯಾರ್ಥಿಗಳು ಎಸ್ಎಸ್ ಎಲ್‌ಸಿ ಪರೀಕ್ಷೆಗೆ ನೋಂದಣಿ ಮಾಡಿದ್ದರು. ಎಲ್ಲಾ ವಿದ್ಯಾರ್ಥಿಗಳು ಒಳಗೊಂಡಂತೆ ಮೊದಲ ದಿನ 8,48,405 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 20994 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮೊದಲ ಬಾರಿಗೆ 8,11,195 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. 35,509 ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿದ್ದರು. ಪುನರಾವರ್ತಿತ ವಿದ್ಯಾರ್ಥಿಗಳ ಸಂಖ್ಯೆ 1701 ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

SSLC 1st day Exam: 97.59 % of students Present

ಇನ್ನು ರಾಜ್ಯದಲ್ಲಿ ಮೊದಲ ದಿನ ಯಾವುದೇ ಪರೀಕ್ಷಾ ಅಕ್ರಮ ನಡೆದಿಲ್ಲ. ಅನಾರೋಗ್ಯ ಕಾರಣದಿಂದ 336 ವಿದ್ಯಾರ್ಥಿಗಳು ವಿಶೇಷ ಕೊಠಡಿಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ವಿಪರ್ಯಾಸವೆಂದರೆ ಕೋವಿಡ್ ಪಾಸಿಟೀವ್ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಯಾರಲ್ಲೂ ಕಾಣಿಸಿಕೊಂಡಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 3 ರಷ್ಟು ಗೈರು ಹಾಜರಿ ಪ್ರಮಾಣ ಹೆಚ್ಚಾಗಿದೆ.

ಪ್ರಸಕ್ತ ವರ್ಷ ಹಾಜರಾತಿ ಶೇ. 97.59 ಆಗಿದ್ದು, ಕಳೆದ ವರ್ಷ ಶೇ. 99.54 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಬಾರಿಗೆ ಹೋಲಿಸಿದರೆ ಗೈರು ಹಾಜರಿ ಪ್ರಮಾಣ ಶೇ. 3 ರಷ್ಟು ಹೆಚ್ಚಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+