SSLC Exam: ಇಂದಿನಿಂದ SSLC ಪರೀಕ್ಷೆ ಆರಂಭ, ವೇಳಾಪಟ್ಟಿ, ಭದ್ರತೆ ಸಂಪೂರ್ಣ ವಿವರ
ಬೆಂಗಳೂರು, ಮಾರ್ಚ್ 25: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಇಂದಿನಿಂದ(ಮಾರ್ಚ್ 25) ಆರಂಭಗೊಳ್ಳಲಿದೆ. ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆಯಾಗಿದ್ದು, ರಾಜ್ಯದ ಒಟ್ಟು 2,750 ಕೇಂದ್ರಗಳಲ್ಲಿ 8,69,968 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ.
ಇಂದು ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ಪ್ರಥಮ ಭಾಷೆ) ಪರೀಕ್ಷೆ ನಡೆಯಲಿದೆ. ಈ ಬಾರಿ ಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಬರೆಯಲು ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

ಇನ್ನು ಒಟ್ಟು ವಿದ್ಯಾರ್ಥಿಗಳಲ್ಲಿ 8,10,368 ನಿಯಮಿತ ವಿದ್ಯಾರ್ಥಿಗಳಾಗಿದ್ದು, 18,225 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು 41,375 ಪುನರಾವರ್ತಿತ ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯಲಿದ್ದಾರೆ. ಇನ್ನು ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಇನ್ನು ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ ಸೇರಿದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದೆ. ಜೊತೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ. ಅಲ್ಲದೇ ವಿದ್ಯಾರ್ಥಿಗಳು ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಈ ಬಾರಿ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಾಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.
2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ
25-03-2024: (ಪ್ರಥಮ ಭಾಷೆ) ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ
27-03-2024:ಸಮಾಜ ವಿಜ್ಞಾನ
30-03-2024:ವಿಜ್ಞಾನ
02-04-2024: ಗಣಿತ
03-04-2024: ಅರ್ಥಶಾಸ್ತ್ರ
04-04-2024: (ತೃತೀಯ ಭಾಷೆ) ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ
06-04-2024: (ದ್ವಿತೀಯ ಭಾಷೆ) ಇಂಗ್ಲಿಷ್, ಕನ್ನಡ












Click it and Unblock the Notifications