SSLC ಫಲಿತಾಂಶ 2026: ಶಿಕ್ಷಣ ಸಚಿವರಿಂದ ಸಮಗ್ರ ವಿವರ -Live ವಿಡಿಯೊ ಇಲ್ಲಿದೆ
SSLC Results 2026: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಡೆಸಿದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗುರುವಾರ (ಏಪ್ರಿಲ್ 23) ಅಧಿಕೃತವಾಗಿ ಪ್ರಕಟಿಸಿದ್ದಾರೆ. ಲೈವ್ ವಿಡಿಯೋ ಇಲ್ಲಿದೆ ನೋಡಿ.

ಪತ್ರಿಕಾಗೋಷ್ಠಿಯ ಮೂಲಕ ಈ ವರ್ಷದ ಫಲಿತಾಂಶದ ಅಂಕಿಅಂಶಗಳನ್ನು ಹಂಚಿಕೊಂಡ ಸಚಿವರು, ವಿದ್ಯಾರ್ಥಿಗಳ ಸಾಧನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಒಟ್ಟಾರೆ ಉತ್ತೀರ್ಣ ಪ್ರಮಾಣ ಮತ್ತು ಜಿಲ್ಲಾವಾರು ಸಾಧನೆಯ ಸಂಪೂರ್ಣ ವಿವರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಫಲಿತಾಂಶವನ್ನು ಪಡೆಯಬಹುದಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಸಚಿವರು ಪೂರಕ ಪರೀಕ್ಷೆಯ ಕುರಿತು ಸಹ ಮಾಹಿತಿ ನೀಡಿದ್ದಾರೆ.












Click it and Unblock the Notifications