SSLC 2026 ಫಲಿತಾಂಶ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಟಾಪರ್ಸ್ ಇವರೇ ನೋಡಿ..

2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟಾರೆ ಶೇಕಡಾ 94.10% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ರಾಜ್ಯಮಟ್ಟದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಸಾಧನೆಗೈದ ಟಾಪರ್ಸ್ ಪಟ್ಟಿಯನ್ನು ಸಹ ಮಂಡಳಿಯು ಬಿಡುಗಡೆ ಮಾಡಿದೆ.

ರಾಜ್ಯವಾರು ಟಾಪರ್ಸ್ ವಿವರ

ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ಉಡುಪಿಯ ಪ್ರಥಮ, ದಾವಣಗೆರೆಯ ಭರತ್‌, ಬೆಂಗಳೂರು ಉತ್ತರದ ಧನುಷ್‌, ಚಿಕ್ಕೋಡಿಯ ಪ್ರಾರ್ಥನ, ವಿಜಯಪುರ ಸೌಜನ್ಯ, ಚಿಕ್ಕಮಂಗಳೂರಿನ ಬೃಂದಾ, ರಾಯಚೂರಿನ ಸುಖದೇವಾ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.

SSLC 2026 Results Toppers List

ಜಿಲ್ಲಾವಾರು ಸಾಧನೆ

ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾವಾರು ಫಲಿತಾಂಶದಲ್ಲಿ ತೀವ್ರ ಪೈಪೋಟಿ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯು ಶೇಕಡಾ 98.4% ಫಲಿತಾಂಶದೊಂದಿಗೆ ರಾಜ್ಯದಲ್ಲೇ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ಉಡುಪಿ ಮತ್ತು ಮೂರನೇ ಸ್ಥಾನದಲ್ಲಿ ಉತ್ತರ ಕನ್ನಡ ಜಿಲ್ಲೆ ಪಡೆದಿದೆ. ಕಲಬುರಗಿ ಜಿಲ್ಲೆಯು ಕೊನೆಯ ಸ್ಥಾನದಲ್ಲಿದೆ.

SSLC Results 2026: ಬಂತು ಎಸ್‌ಎಸ್‌ಎಲ್‌ಸಿ ರಿಸಲ್ಟ್; ಈ ಬಾರಿ ಶೇ 90ರಷ್ಟು ಸಾಧನೆ
SSLC Results 2026: ಬಂತು ಎಸ್‌ಎಸ್‌ಎಲ್‌ಸಿ ರಿಸಲ್ಟ್; ಈ ಬಾರಿ ಶೇ 90ರಷ್ಟು ಸಾಧನೆ

ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೂಡ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಸೆಡ್ಡು ಹೊಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿರುವುದು ವಿಶೇಷವಾಗಿದೆ. ಈ ಬಾರಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಕೂಡ ಖಾಸಗಿ ಶಾಲೆಗಳಿಗೆ ಸಮನಾಗಿ ಅತ್ಯುತ್ತಮ ಸಾಧನೆ ತೋರಿದ್ದಾರೆ.

ಬಾಲಕಿಯರ ಮೇಲುಗೈ

ಹಿಂದಿನ ವರ್ಷಗಳ ಟ್ರೆಂಡ್‌ನಂತೆಯೇ ಈ ಬಾರಿಯ ಫಲಿತಾಂಶದಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇಕಡಾ 96.18 % ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇಕಡಾ 91.94 % ರಷ್ಟು ಬಾಲಕರು ಉತ್ತೀರ್ಣರಾಗಿದ್ದಾರೆ. ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳ ಫಲಿತಾಂಶದಲ್ಲಿ ಕೂಡ ಗಣನೀಯ ಏರಿಕೆ ಕಂಡುಬಂದಿದ್ದು, ಶಿಕ್ಷಣ ಇಲಾಖೆಯು ಮೆಚ್ಚುಗೆ ವ್ಯಕ್ತಪಡಿಸಿದೆ.

ಎಸ್‌ಎಸ್‌ಎಲ್‌ಸಿ ಆಯ್ತು. ಮುಂದೇನು? ಮುಂದಿನ ಕೋರ್ಸ್‌ ಆಯ್ಕೆ ಹೇಗಿರಬೇಕು ಇಲ್ಲಿದೆ ಉತ್ತರ
ಎಸ್‌ಎಸ್‌ಎಲ್‌ಸಿ ಆಯ್ತು. ಮುಂದೇನು? ಮುಂದಿನ ಕೋರ್ಸ್‌ ಆಯ್ಕೆ ಹೇಗಿರಬೇಕು ಇಲ್ಲಿದೆ ಉತ್ತರ

ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ವೀಕ್ಷಿಸಬಹುದು. ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಉತ್ತಮ ಅಂಕ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೂ ಶುಭಾಶಯಗಳು, ಹಾಗೂ ನಿರೀಕ್ಷಿತ ಅಂಕ ಪಡೆಯದ ವಿದ್ಯಾರ್ಥಿಗಳು ನಿರಾಶರಾಗದೆ ಮುಂಬರುವ ಪೂರಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಈಗಿನಿಂದಲೇ ಸಿದ್ಧತೆ ನಡೆಸಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+