ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ಸಾಫ್ಟ್‌ವೇರ್‌, ಏಪ್ರಿಲ್‌ಗೆ ಫಲಿತಾಂಶ

ಬೆಂಗಳೂರು, ಫೆಬ್ರವರಿ 19: ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೌಲ್ಯಮಾಪನಕ್ಕೆ ತಂತ್ರಾಂಶವನ್ನು ಬಳಕೆ ಮಾಡಲಾಗುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಸುಧಾರಿತ ತಂತ್ರಾಂಶ ಬಳಸಿಕೊಳ್ಳಲಾಗುತ್ತಿದೆ.

ಹೀಗಾಗಿ ಏಪ್ರಿಲ್ ಅಂತ್ಯದೊಳಗೆ ಫಲಿತಾಂಶ ಸಿದ್ಧವಾಗಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ ಸುಮಂಗಲಾ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ನಡೆದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಡಿಡಿಪಿಐ, ಬಿಇಒ ಹಾಗೂ ಆಯಾ ಜಿಲ್ಲಾ ನೋಡಲ್ ಅಧಿಕಾರಿಗಳಿಗೆ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಿದ್ಧತೆ ಸಭೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.

SSLC answer evaluation through softqare, results in April only

ಏ.12ರಿಂದ ಮೌಲ್ಯಮಾಪನ ಪ್ರಾರಂಭವಾಗಲಿದ್ದು, ಒಂದೇ ವಾರದಲ್ಲಿ ಮೌಲ್ಯಮಾಪನ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಪ್ರತಿ ಪರೀಕ್ಷಾ ಕೇಂದ್ರಗಳಿಂದ ಪ್ರತಿ ವಿದ್ಯಾರ್ಥಿಗೆ ವಿಷಯವಾರು ನಮೂದಾಗುವ ಅಂಕಗಳು ನೇರವಾಗಿ ತಂತ್ರಾಂಶದಲ್ಲಿಯೇ ಅಳವಡಿಕೆಗೊಂಡು ಆ ಕ್ಷಣವೇ ಮಂಡಳಿಗೆ ರವಾನೆಯಾಗುತ್ತದೆ.

ಮೌಲ್ಯಮಾಪಕರ ಸಂಭಾವನೆ ಮೊತ್ತ, ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಇಂತಹ ವ್ಯವಸ್ಥೆ ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಅಳವಡಿಸುತ್ತಿರುವ ಹೆಗ್ಗಳಿಕೆಯನ್ನು ಕರ್ನಾಟಕ ರಾಜ್ಯ ಪಡೆಯಲಿದೆ ಎಂದು ತಿಳಿಸಿದ್ದಾರೆ.

ಪರೀಕ್ಷಾ ಫಲಿತಾಂಶ ಘೋಷಣೆಯಾದ ದಿನದಂದೇ ಆಯಾ ವಿದ್ಯಾರ್ಥಿಗಳ ಮೊಬೈಲ್‌ಗೆ ಎಸ್‌ಎಂಎಸ್‌ ಕಲೂಹಿಸಲಾಗುತ್ತದೆ ಈ ಪದ್ಧತಿ ಹಾಗೆಯೇ ಮುಂದುವರೆಯಲಿದೆ ಎಂದು ಹೇಳಿದ್ದಾರೆ. ಮಾರ್ಚ್ 21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಆರಂಭವಾಗಲಿದೆ. ಏಪ್ರಿಲ್ 4ರವರೆಗೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+