SSLC ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದರೆ ಜೈಲು ಶಿಕ್ಷೆ

ಬೆಂಗಳೂರು, ಮಾರ್ಚ್ 11: ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿದರೆ, ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪ್ರೌಢ ಶಿಕ್ಷಣ ಇಲಾಖೆ ತಿಳಿಸಿದೆ. ಈ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದರೆ, ಹುಷಾರ್ ಎಂದು ಎಚ್ಚರಿಕೆ ನೀಡಿದೆ.

ಇದೇ ತಿಂಗಳ 27 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭ ಆಗಲಿದೆ. ಪರೀಕ್ಷೆ ದಿನ ಹತ್ತಿರ ಬರುತ್ತಿದ್ದಂತೆ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಯತ್ನಗಳು ನಡೆಯುತ್ತಿದೆ. ಆದರೆ, ಈ ಬಾರಿ ಏನಾದರೂ, ಪ್ರಶ್ನೆ ಪತ್ರಿಕೆ ಲೀಕ್ ಮಾಡುವ ಕೆಲಸಕ್ಕೆ ಮುಂದಾದರೆ, ಶಿಕ್ಷೆ ಅನುಭವಿಸಬೇಕಾಗುತ್ತದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಆರೋಪಿಗಳ ವಿರುದ್ಧ ಜಾಮೀನು ರಹಿತ ಬಂಧನ ಪ್ರಕರಣ ದಾಖಲಾಗಲಿದೆ. ಈ ಕೆಲಸ ಮಾಡಲು ಪ್ರಯತ್ನ ಪಡುವವರನ್ನು ಮಾತ್ರವಲ್ಲದೆ ಅದಕ್ಕೆ ಸಹಾಯ ಮಾಡುವವರು ಕೂಡ ಜೈಲು ಸೇರಬೇಕಾಗುತ್ತದೆ.

SSLC Board Assurance To The Students That Question Paper Will Not Be Leak

ಪ್ರಶ್ನೆ ಪತ್ರಿಕೆ ಸೋರಿಕೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡಿದ್ದು, ವಿಧ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯ ಇಲ್ಲ ಎಂದು ಪ್ರೌಢ ಶಿಕ್ಷಣ ಇಲಾಖೆ ತಿಳಿಸಿದೆ.

ಇತ್ತೀಚಿಗಷ್ಟೆ, ವಿಜಯಪುರದಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ನಡೆದಿತ್ತು. ಮುರುಗೇಶ್ ಸಗರ ಹಾಗೂ ಮುರುಘೇಂದ್ರ ಹಿರೇಮಠ ಎನ್ನುವವರನ್ನು ಪೊಲೀಸರು ಬಂಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+