SSLC Exam 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2; ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳು
SSLC Exam 2025: ರಾಜ್ಯದಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮುಕ್ತಯವಾಗಿ ಫಲಿತಾಂಶ ಕೂಡ ಪ್ರಟಕವಾಗಿದೆ. ಇನ್ನೂ ಈ ವೇಳೆ ಅನುತ್ತೀರ್ಣರಾದವರಿಗೆ ಇಂದಿನಿಂದ ಅಂದರೆ ಮೇ 26ರಿಂದ ಪರೀಕ್ಷೆ-2 ಆರಂಭ ಆಗುತ್ತಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ಗಮನಿಸಿ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದಿನಿಂದ ಅಂದರೆ ಮೇ 26ರಿಂದ ಆರಂಭ ಆಗಲಿದ್ದು, ಜೂನ್ 2ಕ್ಕೆ ಮುಕ್ತಾಯವಾಗಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಇಂದಿನಿಂದ ಎಸ್‌ಎಸ್‌ಎಸ್‌ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವುದು ಕಡ್ಡಾಯವಾಗಿದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ
ವಿದ್ಯಾರ್ಥಿಗಳಿಗೆ ಪ್ರಮುಖ ಸೂಚನೆ
* ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್‌ಗಳನ್ನು ಮಾತ್ರ ಬಳಸಲು ಅವಕಾಶ
* ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
* ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
* ಗುರುತಿನ ಚೀಟಿ ಹಾಗೂ ಪ್ರವೇಶ ಪತ್ರ ತರುವುದು (hall ticket) ಕಡ್ಡಾಯ
* ಮೊಬೈಲ್ ಫೋನ್, ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
* ಪರೀಕ್ಷಾ ಅವಧಿಗಿಂತ ಮುನ್ನ ಹೊರಗಡೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ
* ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ
* ಮೇ 26, 2025ರಂದು ಪ್ರಥಮ ಭಾಷೆ - ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎಸ್‌ಸಿಇಆರ್‌ಟಿ, ಸಂಸ್ಕೃತ.
* ಮೇ 27, 2025ರಂದು ಕೋರ್ ಸಬ್ಜೆಕ್ಟ್ - ಗಣಿತ, ಸಮಾಜ ಶಾಸ್ತ್ರ
* ಮೇ 28, 2025ರಂದು ದ್ವಿತೀಯ ಭಾಷೆ - ಇಂಗ್ಲೀಷ್, ಕನ್ನಡ
* ಮೇ 29, 2025ರಂದು ಕೋರ್ ಸಬ್ಜೆಕ್ಟ್ - ಸಮಾಜ ವಿಜ್ಞಾನ
* ಮೇ 30, 2025ರಂದು ತೃತೀಯ ಭಾಷೆ- ಹಿಂದಿ ಎಸ್‌ಸಿಇಆರ್‌ಟಿ, ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎಸ್‌ಎಸ್‌ಕ್ಯೂಎಫ್ ವಿಷಯಗಳಾದಂತ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್.
* ಮೇ 31 2025ರಂದು ಕೋರ್ ಸಬ್ಜೆಕ್ - ವಿಜ್ಞಾನ
* ಜೂನ್ 2, 2025ರಂದು ಜೆಟಿಎಸ್ ವಿಷಯಗಳಾದಂತ ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್- IV, ಪ್ರೋಗ್ರಾಮಿಂಗ್ ಇನ್ ANSI C, ಅರ್ಥಶಾಸ್ತ್ರ.












Click it and Unblock the Notifications