SSLC ಪರೀಕ್ಷೆಗೆ ಸಿದ್ಧತೆ, ವಿದ್ಯಾರ್ಥಿಗಳ ಮೇಲೆ ಸಿಸಿಟಿವಿ ಕಣ್ಗಾವಲು

ಬೆಂಗಳೂರು, ಫೆಬ್ರವರಿ 15: ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್‌ 21 ರಿಂದ ನಡೆಯಲಿದ್ದು, ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಪರೀಕ್ಷೆಗಾಗಿ ಸಕಲ ಸಿದ್ದತೆಯನ್ನು ಮಾಡಿಕೊಂಡಿದೆ.

ರಾಜ್ಯಾದ್ಯಂತ 2,847 ಕೇಂದ್ರಗಳಲ್ಲಿ ಒಟ್ಟು 14,4,54 ಶಾಲೆಗಳಿಂದ 84,1,649 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. 1,140 ಸರ್ಕಾರಿ ಪರೀಕ್ಷಾ ಕೇಂದ್ರಗಳು, 1,124 ಸರ್ಕಾರಿ ಅನುದಾನಿತ ಕೇಂದ್ರಗಳು ಹಾಗೂ 583 ಖಾಸಗಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಈ ಪರೀಕ್ಷಾ ಕೇಂದ್ರಗಳಲ್ಲಿ 46 ಸೂಕ್ಷ್ಮ ಪರೀಕ್ಷಾ ಕೇಂದ್ರಗಳು, 7 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ ಉಳಿದಂತೆ 2794 ಸಾಮಾನ್ಯ ಪರೀಕ್ಷಾ ಕೇಂದ್ರಗಳಾಗಿವೆ.

SSLC exam 2019: CCTV in all exam centers

2847 ಪರೀಕ್ಷಾ ಕೇಂದ್ರಗಳ ಪೈಕಿ ಈಗಾಗಲೇ 2630 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಉಳಿದ ಕೇಂದ್ರಗಳಿಗೂ ಸಿಸಿಟಿವಿ ಅಳವಡಿಸಲಾಗುತ್ತದೆ ಎನ್ನಲಾಗಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ದೃಷ್ಟಿಯಿಂದ ಈ ವ್ಯವಸ್ಥೆ ಮಾಡಲಾಗಿದೆ.

ಪರೀಕ್ಷಾರ್ಥಿಗಳು ಪರೀಕ್ಷಾ ಕೊಠಡಿಗೆ ಡಿಜಿಟಲ್ ಹಾಗೂ ಸ್ಮಾರ್ಟ್​ ವಾಚ್​, ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್​ ವಸ್ತುಗಳನ್ನು ತರದಂತೆ ನಿಷೇಧಿಸಲಾಗಿದೆ. ಸಾಮಾನ್ಯ ಕ್ಯಾಲ್ಕುಲೇಟರ್​​ ಮತ್ತು ವಾಚ್​​ ಅನ್ನು ವಿದ್ಯಾರ್ಥಿಗಳು ಬಳಸಬಹುದಾಗಿದೆ.

ಪರೀಕ್ಷಾ ವೀಕ್ಷಕರಿಗೆ ವಿಶೇಷ ಗುರುತಿನ ಚೀಟಿಯನ್ನು ಈ ಬಾರಿ ನೀಡಲಾಗುತ್ತಿದೆ. ಪರೀಕ್ಷಾ ಕೇಂದ್ರಗಳ ಭದ್ರತೆಗೆ ಪೊಲೀಸರಿಗೆ ಪತ್ರಗಳನ್ನು ಈಗಾಗಲೇ ಪರೀಕ್ಷಾ ಮಂಡಳಿ ಬರೆದಾಗಿದೆ. ಬಿಡುಗಡೆ ಆಗಿರುವ ವೇಳಾಪಟ್ಟಿ ಪ್ರಕಾರ ಮಾರ್ಚ್‌ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+