SSLC Result 2025: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಇನ್ನೆರಡು ಅವಕಾಶ 2 & 3 ಪರೀಕ್ಷೆ ಯಾವಾಗ ?
SSLC Result 2025: ಎಸ್‌ಎಸ್‌ಎಲ್‌ಸಿಯಲ್ಲಿ ಕಡಿಮೆ ಅಂಕ ಗಳಿಸಿರುವ (ಅನುತ್ತೀರ್ಣ / ಫೇಲ್) ಆಗಿರುವ ವಿದ್ಯಾರ್ಥಿಗಳಿಗೆ ಇನ್ನೆರಡು ಅವಕಾಶಗಳು ಇರಲಿವೆ. ಪಾಸ್ ಆಗದೆ ಇರುವವರು ಮೂರು ಪರೀಕ್ಷೆಗಳನ್ನು ಪೂರ್ಣಗೊಳಿಸುವವರೆಗೂ ಅವರ ಡಿಜಿಟಲ್ ಅಂಕಪಟ್ಟಿಯಲ್ಲಿ ಪ್ರಗತಿಯಲ್ಲಿದೆ ಎಂದೇ ನಮೂದಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಶುಕ್ರವಾರ ( ಮೇ 02)ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿ, ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 2 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 3ರ ಅಪ್ಡೇಟ್ ಸಹ ನೀಡಿದ್ದಾರೆ. ಮುಂದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಾವಾಗ ನಡೆಯಲಿದೆ ಹಾಗೂ ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಅವರು ಕೊಟ್ಟ ಅಪ್ಡೇಟ್ಸ್ ಏನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಮಾಡಲಾಗಿದೆ. ಹೀಗಾಗಿ, ಈ ವರ್ಷ ಮೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಮಾಡುವುದಕ್ಕೆ ನಿರ್ಧರಿಸಲಾಗಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1 ಪೂರ್ಣಗೊಂಡಿದ್ದು. ಇದೀಗ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 2 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 3 ಅವಕಾಶ ಸಿಗಲಿದೆ. ಹೀಗಾಗಿ ವಿದ್ಯಾರ್ಥಿಗಳು ನಿರಾಸೆಗೆ ಒಳಗಾಗುವ ಅವಶ್ಯಕತೆ ಇಲ್ಲ. ಯಾರು ಪಾಸ್ ಆಗಿಲ್ಲವೋ ಅವರಿಗೆ ಅವಕಾಶ ಇರಲಿದೆ ಎಂದು ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಇನ್ನೆರಡು ಅವಕಾಶ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಈ ಬಾರಿ ಶೇ 66.14ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿ 8.96 ಲಕ್ಷ ಜನ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಬಾರಿ ಉತ್ತಮ ಫಲಿತಾಂಶ ಪ್ರಕಟವಾಗಿದೆ ಎಂದು ಅವರು ಹೇಳಿದ್ದಾರೆ. ಇನ್ನು ವಿದ್ಯಾರ್ಥಿಗಳು ಉತ್ತಮ ಅಂಕವನ್ನು ಗಳಿಸದಿದ್ದರೆ ಅಥವಾ ಫೇಲ್ ಆಗಿದ್ದರೆ ಇನ್ನೂ ಎರಡು ಬಾರಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಇರಲಿದೆ. ಈ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುವ ವರೆಗೂ ಫೇಲ್ ಅಂತ ಸರ್ಟಿಫಿಕೇಟ್‌ನಲ್ಲಿ ಪ್ರಕಟವಾಗಲ್ಲ ಅಂತಲೂ ಅವರು ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ 2 & 3ನೇ ಪರೀಕ್ಷೆ ಯಾವಾಗ ?
ಎಸ್‌ಎಸ್‌ಎಲ್‌ಸಿ 2 & 3ನೇ ಪರೀಕ್ಷೆ ಯಾವಾಗ ನಡೆಯಲಿದೆ ಎನ್ನುವುದಕ್ಕೆ ಸಂಬಂಧಿಸಿದಂತೆ ದಿನಾಂಕವನ್ನೂ ಸಚಿವ ಮಧುಬಂಗಾರಪ್ಪ ಅವರು ಇದೇ ಸಂದರ್ಭದಲ್ಲಿ ಘೋಷಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯಿಂದ ಇನ್ನೆರಡು ಪರೀಕ್ಷೆಗಳು ನಡೆಯಲಿವೆ. ಎಸ್‌ಎಸ್‌ಎಲ್‌ಸಿ - 2 ಪರೀಕ್ಷೆಯನ್ನು ಮೇ 26ರಿಂದ ಜೂನ್ 2ರವರೆಗೆ (26/05/2025 ರಿಂದ 02/06/2025) ಎಸ್‌ಎಸ್‌ಎಲ್‌ಸಿ - 3 ಪರೀಕ್ಷೆಯನ್ನು ಜೂನ್ 23ರಿಂದ ಜೂನ್ 30ರ ವರೆಗೆ (23/06/2025 ರಿಂದ 30/06/2025) ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಈ ಬಾರಿ 79,000 ಸಾವಿರ ಜನ ವಿದ್ಯಾರ್ಥಿಗಳು ಮರು ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications