ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

10ನೇ ತರಗತಿ ಪರೀಕ್ಷೆಗೆ 2 ದಿನ ಬಾಕಿ; ಅಂತಿಮ ಕ್ಷಣದ ಸಿದ್ಧತೆ

|
Google Oneindia Kannada News

ಬೆಂಗಳೂರು, ಜೂನ್ 23 : ನಿಗದಿತ ವೇಳಾಪಟ್ಟಿಯಂತೆ ಜೂನ್ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪರೀಕ್ಷಾ ಮಂಡಳಿ ಹೇಳಿದೆ. ಬೆಂಗಳೂರು ನಗರದಲ್ಲಿ 363 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

Recommended Video

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಬಾರಿ ಮಳೆ | Weather Forecast | KSNDMC | Oneindia Kannada

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಕುರಿತು ಹಲವು ಚರ್ಚೆಗಳು ನಡೆಯುತ್ತಿವೆ. ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೇರೆ ರಾಜ್ಯಗಳ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬಾರದು, ವಿದ್ಯಾರ್ಥಿಗಳಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಸ್‌. ಎಸ್. ಎಲ್‌. ಸಿ ಪರೀಕ್ಷೆ; ವಾಟಾಳ್ ನಾಗರಾಜ್ ಹೊಸ ಬೇಡಿಕೆಸ್‌. ಎಸ್. ಎಲ್‌. ಸಿ ಪರೀಕ್ಷೆ; ವಾಟಾಳ್ ನಾಗರಾಜ್ ಹೊಸ ಬೇಡಿಕೆ

ನಿಗದಿಪಡಿಸಿದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಮಂಗಳವಾರ ಹೇಳಿದೆ. ಗುರುವಾರದಿಂದ ಪರೀಕ್ಷೆಗಳು ಆರಂಭವಾಗಲಿದೆ.

ಕೊರೊನಾ ಭೀತಿ: 10ನೇ ತರಗತಿ ಪರೀಕ್ಷೆ ರದ್ದು ಮಾಡಿದ ಮತ್ತೊಂದು ರಾಜ್ಯಕೊರೊನಾ ಭೀತಿ: 10ನೇ ತರಗತಿ ಪರೀಕ್ಷೆ ರದ್ದು ಮಾಡಿದ ಮತ್ತೊಂದು ರಾಜ್ಯ

ಬಿಬಿಎಂಪಿ ಬೆಂಗಳೂರಿನ 363 ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಆರಂಭಿಸಿದೆ. ಪರೀಕ್ಷಾ ಕೇಂದ್ರದ ಸುತ್ತ ಮುತ್ತ ಸೋಂಕು ನಿವಾರಕ ಔಷಧಿಯನ್ನು ಸಿಂಪಡಣೆ ಮಾಡಲಾಗುತ್ತಿದೆ.

PUC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್PUC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್

ಪರೀಕ್ಷೆ ಮುಂದೂಡಿ

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮಂಗಳವಾರ ಪರೀಕ್ಷೆ ಮುಂದೂಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದರೆ. SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ ಎಂದು ಟ್ವೀಟ್ ಮಾಡಿದ್ದಾರೆ.

ಪರೀಕ್ಷಾ ಮಂಡಳಿ ಸ್ಪಷ್ಟನೆ

ಪರೀಕ್ಷಾ ಮಂಡಳಿ ಸ್ಪಷ್ಟನೆ

ಮಂಗಳವಾರ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ. ಜೂನ್ 25ರಿಂದ ಜುಲೈ 4ರ ತನಕ ಪರೀಕ್ಷೆಗಳನ್ನು ಮಾಡಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

8,500 ಕೊಠಡಿ

8,500 ಕೊಠಡಿ

8,48,196 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಇದಕ್ಕಾಗಿ 8,500 ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಒಂದು ಕೊಠಡಿಯಲ್ಲಿ 18 ರಿಂದ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

8 ಲಕ್ಷ ವಿದ್ಯಾರ್ಥಿಗಳು

8 ಲಕ್ಷ ವಿದ್ಯಾರ್ಥಿಗಳು

ಜೂನ್ 25ರಿಂದ ಜುಲೈ 4ರ ತನಕ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. 8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳು ಲಾಕ್ ಡೌನ್ ಪರಿಣಾಮ ಮುಂದೂಡಲಾಗಿತ್ತು.

English summary
Bruhat Bengaluru Mahanagara Palike (BBMP) has started sanitizing work in 363 SSLC exam centres in Bengaluru city. SSLC exam will be held from June 25 to July 4, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X