SSLC Exam Fee Hike: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಶೇ.5ರಷ್ಟು ಹೆಚ್ಚಳ, ಸರ್ಕಾರದಿಂದ ಹೊಸ ಶಾಕ್

SSLC ಪರೀಕ್ಷಾ ಶುಲ್ಕದ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ. ಈಚೆಗೆ ಕರ್ನಾಟಕ ಸರ್ಕಾರವು ಪಿಯುಸಿ ಪರೀಕ್ಷಾ ಶುಲ್ಕವನ್ನು ಸಹ ಹೆಚ್ಚಳ ಮಾಡುವುದರೊಂದಿಗೆ ಶಾಕ್ ನೀಡಿತ್ತು. ಇದೀಗ ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕದ ವಿಚಾರದಲ್ಲೂ ಶಾಕ್ ನೀಡಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.

ಇತ್ತೀಚಿಗಷ್ಟೇ ಪಿಯುಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನೂ ಸಹ ಶೇ.5ರ ಏರಿಕೆ ಮಾಡುವ ಮೂಲಕ ಶಾಕ್ ಕೊಡಲಾಗಿದೆ. ಹೊಸದಾಗಿ ಪರೀಕ್ಷೆ ಬರೆಯುವವರು, ಪುನಾರಾವರ್ತಿತ ಅಭ್ಯರ್ಥಿಗಳ ನೋಂದಣಿ ಶುಲ್ಕದ ಜತೆಗೆ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇದೀಗ ಹೊಸದಾಗಿ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರವು ಪಿಯುಸಿ ಪರೀಕ್ಷಾ ಶುಲ್ಕದ ಬೆನ್ನಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿರುವುದು ತೀವ್ರ ಆಕ್ಷೇಪ, ವಿರೋಧ ವ್ಯಕ್ತವಾಗಿದೆ.

SSLC Exam Fee Hike Karnataka Raises Class 10 Exam Fee by 5 710 to 746

SSLC Exam Fee Hike: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಹೆಚ್ಚಳ

ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿದೆ. 2027ರ ಮಾರ್ಚ್, ಏಪ್ರಿಲ್‌ನಲ್ಲಿ ನಡೆಯುವ ಪರೀಕ್ಷೆಗಳಿಂದಲೇ ಹೊಸ ಶುಲ್ಕ ಅನ್ವಯವಾಗಲಿದೆ. 2020ರ ಆದೇಶದಲ್ಲಿ ವಾರ್ಷಿಕವಾಗಿ ಪರೀಕ್ಷಾ ಶುಲ್ಕ ಪರಿಷ್ಕರಿಸಲು ನೀಡಿರುವ ಅವಕಾಶದ ಆಧಾರದ ಮೇಲೆ ಹೆಚ್ಚಳ ಮಾಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕದಲ್ಲಿ ಆಗಿರುವ ವ್ಯತ್ಯಾಸ ಈ ರೀತಿ ಇದೆ. ಈ ಹಿಂದೆ 710 ರೂ. ಶುಲ್ಕಪಾವತಿಸುತ್ತಿದ್ದ ಸಾಮಾನ್ಯ ಅಭ್ಯರ್ಥಿಗಳು(ಫ್ರೆಶರ್ಸ್) ಇನ್ಮುಂದೆ 746 ರೂ. ಪಾವತಿಸಬೇಕಾಗುತ್ತದೆ. ಹೊಸ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ 248 ರೂಪಾಯಿಯಿಂದ 260 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈಗಾಗಲೇ ನೋಂದಣಿಯಾಗಿರುವ ಖಾಸಗಿ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕವನ್ನು ಸಹ ಹೆಚ್ಚಳ ಮಾಡಲಾಗಿದೆ. ಈ ಶುಲ್ಕವು 72 ರೂ. ನಿಂದ 76 ರೂ.ಗೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಹೆಚ್ಚಳ: ಆರ್. ಅಶೋಕ್ ಆಕ್ರೋಶ

SSLC ಪರೀಕ್ಷಾ ಶುಲ್ಕವನ್ನು ಶೇ.5ರಷ್ಟು ಹೆಚ್ಚಿಸಿ, ಸಾಮಾನ್ಯ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕವನ್ನು ₹710ರಿಂದ ₹746ಕ್ಕೆ ಏರಿಸಲಾಗಿದೆ. ಶಿಕ್ಷಣದ ಖರ್ಚು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೇರುವ ನಿರ್ಧಾರವಿದು. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಕುಟುಂಬಗಳ ಸಂಕಷ್ಟವನ್ನು ಅರ್ಥಮಾಡಿಕೊಂಡು ಈ ಶುಲ್ಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ.

ಸರ್ಕಾರವು ಈ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು ಕೂಡಲೇ ಹಿಂಪಡೆಯಬೇಕು. ಅಲ್ಲದೆ ಮಕ್ಕಳ ಶಿಕ್ಷಣದ ಮೇಲೂ ಹೊರೆ ಹಾಕುವುದನ್ನು ನಿಲ್ಲಿಸಿ ಎಂದೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+