ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶುಕ್ರವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಸೂಚನೆಗಳು

|
Google Oneindia Kannada News

ಬೆಂಗಳೂರು, ಜೂನ್ 24 : ಹಲವಾರು ಹಂತದ ಚರ್ಚೆ, ಸರಣಿ ಸಭೆಗಳ ಬಳಿಕ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಜೂನ್ 25ರ ಶುಕ್ರವಾರಿಂದ ಜುಲೈ 4ರ ತನಕ ಪರೀಕ್ಷೆ ನಡೆಯಲಿದೆ.

Recommended Video

SSLC Exam:ಪರೀಕ್ಷೆ ಬರೆಯುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಂದೇಶ ಕೊಟ್ಟ ಕುಮಾರಸ್ವಾಮಿ. | Kumarswamy

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಕಲ ರೀತಿಯಲ್ಲಿ ಸಜ್ಜಾಗಿದೆ. ರಾಜ್ಯಾದ್ಯಂತ 8,48,169 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 8,500 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಕೊನೆ ಕ್ಷಣದ ಸಿದ್ಧತೆಗಳು ನಡೆಯುತ್ತವೆ.

10ನೇ ತರಗತಿ ಪರೀಕ್ಷೆಗೆ 2 ದಿನ ಬಾಕಿ; ಅಂತಿಮ ಕ್ಷಣದ ಸಿದ್ಧತೆ10ನೇ ತರಗತಿ ಪರೀಕ್ಷೆಗೆ 2 ದಿನ ಬಾಕಿ; ಅಂತಿಮ ಕ್ಷಣದ ಸಿದ್ಧತೆ

ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾರ್ಯಗಳನ್ನು ಈಗಾಗಲೇ ಮಾಡಲಾಗಿದೆ. ಸಾಮಾಜಿಕ ಅಂತರದ ನಿಯಮದೊಂದಿಗೆ ಆಸನ ವ್ಯವಸ್ಥೆ, ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ, ಅಧಿಕಾರಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಬಳಕೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ.

ಎಸ್ಎಸ್ಎಲ್‌ಸಿ ಪರೀಕ್ಷೆ ಕುರಿತು ಕುಮಾರಸ್ವಾಮಿ ಕೊನೆಯ ಎಚ್ಚರಿಕೆ ಎಸ್ಎಸ್ಎಲ್‌ಸಿ ಪರೀಕ್ಷೆ ಕುರಿತು ಕುಮಾರಸ್ವಾಮಿ ಕೊನೆಯ ಎಚ್ಚರಿಕೆ

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ-1973ರ ಕಲಂ 144 ರನ್ವಯ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ನಿರ್ದೇಶನಗಳು ಇಲ್ಲಿವೆ.

ಕೊರೊನಾ ಭೀತಿ: 10ನೇ ತರಗತಿ ಪರೀಕ್ಷೆ ರದ್ದು ಮಾಡಿದ ಮತ್ತೊಂದು ರಾಜ್ಯಕೊರೊನಾ ಭೀತಿ: 10ನೇ ತರಗತಿ ಪರೀಕ್ಷೆ ರದ್ದು ಮಾಡಿದ ಮತ್ತೊಂದು ರಾಜ್ಯ

ವಿದ್ಯಾರ್ಥಿಗಳಿಗೆ ಸೂಚನೆ

ವಿದ್ಯಾರ್ಥಿಗಳಿಗೆ ಸೂಚನೆ

* ಪ್ರತಿ ವಿದ್ಯಾರ್ಥಿಯೂ ಆರೋಗ್ಯ ತಪಾಸಣೆಗೆ ಒಳಪಡುವುದರಿಂದ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ ಒಂದೂವರೆ ಗಂಟೆ ಮೊದಲು ಹಾಜರಾಗಬೇಕು.

* ಆರೋಗ್ಯ ತಪಾಸಣೆಗೂ ಮುನ್ನ ಕೈಗಳನ್ನು ಸ್ಯಾನಿಟೈಸರ್‌ನಿಂದ ಸ್ವಚ್ಛಮಾಡಿಕೊಳ್ಳಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

* ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದನ್ನು ಮರೆತಿದ್ದಲ್ಲಿ ಆರೋಗ್ಯ ತಪಾಸಣೆ ವೇಳೆ ಮಾಸ್ಕ್ ನೀಡಲಾಗುತ್ತದೆ.

ಪರೀಕ್ಷಾ ಕೇಂದ್ರಕ್ಕೆ ಹೋಗಬಹುದು

ಪರೀಕ್ಷಾ ಕೇಂದ್ರಕ್ಕೆ ಹೋಗಬಹುದು

* ಆರೋಗ್ಯ ತಪಾಸಣೆಯ ನಂತರ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತೆರಳಲು ಅನುಮತಿಯನ್ನು ನೀಡಲಾಗುತ್ತದೆ.

* ಕೆಮ್ಮುವಾಗ/ಸೀನುವಾಗ ನಿಮ್ಮ ಕರವಸ್ತ್ರಗಳನ್ನು ಉಪಯೋಗಿಸಿ

* ಅನಾರೋಗ್ಯ ಹೊಂದಿರುವ/ಕೋವಿಡ್ -19 ಸೋಂಕಿನ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.

ವಿದ್ಯಾರ್ಥಿಗಳು ಕೈ ಕುಲಕಬೇಡಿ

ವಿದ್ಯಾರ್ಥಿಗಳು ಕೈ ಕುಲಕಬೇಡಿ

* ಇತರೆ ವಿದ್ಯಾರ್ಥಿಗಳೊಂದಿಗೆ ಕೈ ಕುಲುಕುವುದು, ಅಪ್ಪಿಕೊಳ್ಳುವುದು, ಮುಟ್ಟುವುದು ಮತ್ತು ಎಲ್ಲೆಂದರಲ್ಲಿ ಉಗುಳುವುದು ಮಾಡಬೇಡಿ.

* ಬಾಗಿಲು, ಕಿಟಕಿ ಹಾಗೂ ಇತರ ಯಾವುದೇ ವಸ್ತುಗಳನ್ನು ಅನಗತ್ಯವಾಗಿ ಮುಟ್ಟಬೇಡಿ. ಸಹ ವಿದ್ಯಾರ್ಥಿಗಳಿಂದ ಯಾವುದೇ ವಸ್ತು ಪಡೆಯಬೇಡಿ, ನೀವು ಸಹ ನೀಡಬೇಡಿ.

* ಪರೀಕ್ಷೆ ಬರೆಯುವಾಗ ಅನಾರೋಗ್ಯದ ಲಕ್ಷಣ ಕಂಡು ಬಂದಲ್ಲಿ ಮೇಲ್ವಿಚಾರಕರಿಗೆ ತಿಳಿಸಬೇಕು.

ನೀರು, ಆಹಾರ ತನ್ನಿ

ನೀರು, ಆಹಾರ ತನ್ನಿ

* ವಿದ್ಯಾರ್ಥಿಗಳು ತಮ್ಮದೇ ಆದ ಪ್ರತ್ಯೇಕ ಬ್ಯಾಗ್‌ನಲ್ಲಿ ನೀರಿನ ಬಾಟಲಿ, ಆಹಾರದ ಡಬ್ಬಿ ತರುವುದು

* ಪರೀಕ್ಷೆಗೆ ಅಗತ್ಯವಾದ ಪ್ರವೇಶ ಪತ್ರ ಹಾಗೂ ಇತರ ಸಲಕರಣೆಗಳನ್ನು ತಪ್ಪದೇ ತರುವುದು

* ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಹಂತದಿಂದ ನಿರ್ಗಮಿಸುವ ಹಂತದ ತನಕ ದೈಹಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು.

English summary
Karnataka all set to conduct SSLC exam from June 25 to July 4, 2020. Here are the directions to students who will go for exam. Sanitizing work in all 8,500 exam centres completed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X