SSLC Exam: ಶಿಕ್ಷಣ ಇಲಾಖೆಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಇಷ್ಟು ಅಂಕ ಪಡೆದ್ರೆ ಪಾಸ್
Karnataka SSSLC Exam: ರಾಜ್ಯದಲ್ಲಿ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುತ್ತದೆ. ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿಬಿಎಸ್‌ಇ ಮಾದರಿ ಅಳವಡಿಕೆ ಮಾಡಲು ನಿರ್ಧರಿಸಿದೆ. ಇದರಿಂದ ಏನೆಲ್ಲಾ ಉಪಯೋಗಗಳಿವೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿಬಿಎಸ್‌ಇ ಮಾದರಿ ಅಳವಡಿಕೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಸ್ತಾಪನೆ ಸಲ್ಲಿಸಿದೆ. ಇದು ಜಾರಿಯಾದ್ರೆ, ಇನ್ಮುಂದೆ ವಿದ್ಯಾರ್ಥಿಗಳು ಕನಿಷ್ಠ 33 ಅಂಕ ಪಡೆದವರನ್ನೂ ಉತ್ತೀರ್ಣ ಎಂದು ಪರಿಗಣಿಸಲಾಗುತ್ತದೆ.

ಲಿಖಿತ ಪರೀಕ್ಷೆ ಹಾಗೂ ಆಂತರಿಕ ಅಂಕಗಳೂ ಸೇರಿ 100ಕ್ಕೆ ಕನಿಷ್ಠ 33 ಅಂಕ ಪಡೆದವರೂ ತೇರ್ಗಡೆಯಾಗಲಿದ್ದಾರೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ ಮಕ್ಕಳು ಇನ್ಮುಂದೆ ಸಿಬಿಎಸ್‌ಇ ಮಾದರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ.
ಸಿಬಿಎಸ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಂತರಿಕ ಅಂಕ ಸೇರಿ ಒಟ್ಟು ಶೇಕಡ 33 ಅಂಕ ಪಡೆದರೂ ಉತ್ತೀರ್ಣ ಆಗುತ್ತಾರೆ. ಪ್ರತಿ ವಿಷಯಕ್ಕೆ 20 ಆಂತರಿಕ ಅಂಕಗಳು ನಿಗದಿಪಡಿಸಿದ್ದು, 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಎರಡೂ ಸೇರಿ 100 ಅಂಕಗಳಿಗೆ ಕನಿಷ್ಠ 33 ಅಂಕ ಪಡೆದವರು ಉತ್ತೀರ್ಭರಾಗುತ್ತಾರೆ. ಇದೇ ಮಾದರಿಯನ್ನು ರಾಜ್ಯ ಪಠ್ಯಕ್ರಮದ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಅಳವಡಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮದ ಪ್ರಕಾರ, ಒಬ್ಬ ವಿದ್ಯಾರ್ಥಿ ಉತ್ತೀರ್ಣ ಆಗಲು ಶೇಕಡ 35ರಷ್ಟು ಅಂಕ ಪಡೆಯಬೇಕಿದೆ. ಸಿಬಿಎಸ್‌ಇ ಮಾದರಿ ಅಳವಡಿಸಿಕೊಂಡರೆ 33 ಅಂಕ ಪಡೆದರೂ ಉತ್ತೀರ್ಣರಾಗುತ್ತಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿದಂತೆ ಪ್ರಥಮ ಭಾಷೆಯನ್ನು 125 ಅಂಕಗಳಿಗೆ ನಡೆಸಲಾಗುವುದು. ಪ್ರಥಮ ಭಾಷೆಗೆ 25 ಆಂತರಿಕ ಅಂಕ ಇದೆ. ವಿಜ್ಞಾನ, ಸಮಾಜ ವಿಜ್ಞಾನ, ಗಣಿತ, ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ 100 ಅಂಕಗಳಿಗೆ ಪರೀಕ್ಷೆ ನಡೆಸಲಾಗುವುದು. 20 ಅಂಕಗಳು ಆಂತರಿಕ ಮೌಲ್ಯಮಾಪನಕ್ಕೆ ನಿಗದಿ ಆಗಿವೆ.
ಕನ್ನಡ ಸೇರಿ ಎಸ್‌ಎಸ್ಎಲ್‌ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲಿಗೆ 100ಕ್ಕೆ ಸೀಮಿ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ. ಇದು ಜಾರಿಯಾದ್ರೆ, 2026ರ ಮಾರ್ಚ್, ಏಪ್ರಿಲ್‌ನಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇತರೆ ಐದು ವಿಷಯಗಳಂತೆ ಕನ್ನಡಕ್ಕೂ 100 ಅಂಕಗಳು ಇರಲಿವೆ. ಒಟ್ಟಾರೆ 6 ವಿಷಯಗಳಿಂದಲೂ 600 ಅಂಕಗಳು ಇರುತ್ತವೆ. ಇದುವರೆಗೂ 625 ಅಂಕಗಳು ಇದ್ದವು.
ಈಗಾಗಾಗಲೇ ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಗಿದು ಫಲಿತಾಂಶವು ಲಭ್ಯವಾಗಿದ್ದು, ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸವನ್ನು ಮುಂದುವರೆಸಿದ್ದಾರೆ. ಇನ್ನೂ ಒಂದು ವೇಳೆ ಸಿಬಿಎಸ್‌ಸಿ ಮಾದರಿ ಅಳವಡಿಕೆ ಆದ್ರೆ, ಮಂದಿನ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರು ವಿಷಯಗಳು ಸೇರಿ 600 ಅಂಕಗಳಿಗೆ ನಡೆಯಲಿದೆ. ಅಲ್ಲದೆ, ಉತ್ತೀರ್ಣದ ಅಂಕ ಕೂಡ ಕಡಿಮೆಯಾಲಿದೆ ಎಂಬ ಮಾಹಿತಿ ಲಭ್ಯವಾಗಿದೆ.












Click it and Unblock the Notifications