ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಬ್ಬ ವಿದ್ಯಾರ್ಥಿಗೂ ಸೋಂಕು ತಗುಲದಂತೆ ಎಚ್ಚರವಹಿಸಿ : ಸುಧಾಕರ್‌

|
Google Oneindia Kannada News

ಬೆಂಗಳೂರು, ಜೂನ್ 24: ಒಬ್ಬ ವಿದ್ಯಾರ್ಥಿಗೂ ಕೊರೊನಾ ಸೋಂಕು ತಗುಲದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎಚ್ಚರಿಕೆಯಿಂದ ನಡೆಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Recommended Video

SSLC Exam:ಪರೀಕ್ಷೆ ಬರೆಯುತ್ತಿರುವ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಂದೇಶ ಕೊಟ್ಟ ಕುಮಾರಸ್ವಾಮಿ. | Kumarswamy

ಪರೀಕ್ಷೆ ನಡೆಸುವ ರಾಜ್ಯ ಸಕಾ೯ರದ ನಿಧಾ೯ರವನ್ನು ಇಡೀ ದೇಶವೇ ಎದುರು ನೋಡುತ್ತಿದೆ. ಹೀಗಾಗಿ ಇದನ್ನು ಸವಾಲಾಗಿ ಸ್ವೀಕರಿಸಿ ಜಾಗರೂಕತೆಯಿಂದ ಪರೀಕ್ಷೆಯನ್ನು ನಡೆಸಬೇಕು. ರಾಜ್ಯದ 2879 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಆರಂಭವಾಗುವ ಪರೀಕ್ಷೆಯಲ್ಲಿ 8,48,203 ವಿದ್ಯಾಥಿ೯ಗಳು ಪಾಲ್ಗೊಳ್ಳಲಿದ್ದಾರೆ. ಯಾವುದೇ ಗೊಂದಲಗಳಿಗೆ ಅವಕಾಶಗಳಿಲ್ಲದಂತೆ ಸಕಾ೯ರ ನೀಡಿರುವ ಸೂಚನೆಗಳನ್ನು ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.

SSLC ಪರೀಕ್ಷೆ ಸುದ್ದಿಗೋಷ್ಠಿ: ವಿದ್ಯಾರ್ಥಿಗಳು ತಿಳಿಯಬೇಕಾದ ವಿಷಯಗಳುSSLC ಪರೀಕ್ಷೆ ಸುದ್ದಿಗೋಷ್ಠಿ: ವಿದ್ಯಾರ್ಥಿಗಳು ತಿಳಿಯಬೇಕಾದ ವಿಷಯಗಳು

ಕುಟುಂಬ ಸದಸ್ಯರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ವಯಂ ಗೃಹಬಂಧನದಲ್ಲಿರುವ ಕೋವಿಡ್‌ - ೧೯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಚಿವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆ,ಮುನ್ನೇಚ್ಚರಿಕೆ ಕ್ರಮಗಳ ಬಗ್ಗೆ ತಮ್ಮ ನಿವಾಸದಿಂದಲೇ ವಿಡಿಯೋ ಸಂವಾದ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.

ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯ ಅಗತ್ಯ

ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯ ಅಗತ್ಯ

ಮನೆಯಿಂದ ಬರುವ ಪ್ರತಿಯೊಬ್ಬ ವಿದ್ಯಾಥಿ೯ ಪರೀಕ್ಷೆ ಬರೆದು ಮನೆಗೆ ಹಿಂತಿರುಗುವತ ನಕ ಕ್ಷೇಮವಾಗಿ ನೋಡಿಕೊಳ್ಳುವ ಜವಾಬ್ದಾರಿಯನ್ನು ಎಲ್ಲ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕಾಯ್ದುಕೊಳ್ಳಬೇಕು. ಸಾವ೯ಜನಿಕ ಸಾರಿಗೆ ಲಭ್ಯವಿಲ್ಲದ ಕಡೆ ಮಕ್ಕಳನ್ನು ಕರೆತರುವ ವಾಹನ, ಪರೀಕ್ಷಾ ಕೇಂದ್ರಗಳ ಬಳಿ, ಪರೀಕ್ಷಾ ಕೊಠಡಿ, ಶೌಚಾಲಯ ಇತ್ಯಾದಿ ಸ್ಥಳಗಳನ್ನು ಸ್ಯಾನಿಟೈಸ್‌ ಮಾಡಬೇಕು. ಪ್ರತಿ ವಿದ್ಯಾಥಿ೯ಗೆ ಮಾಸ್ಕ್‌ ನೀಡಿ ಪರೀಕ್ಷೆ ಬರೆಯುವ ಕೊಠಡಿಯಲ್ಲೂ ಅಂತರ ಇರುವಂತೆ ನೋಡಿಕೊಳ್ಳಬೇಕು ಎಂದರು.

ಥಮ೯ಲ್‌ ಸ್ಕ್ಯಾನಿಂಗ್‌ ಅಗತ್ಯ

ಥಮ೯ಲ್‌ ಸ್ಕ್ಯಾನಿಂಗ್‌ ಅಗತ್ಯ

ಬೆಳಗ್ಗೆ 7.30 ಕ್ಕೆ ಬರುವುದರಿಂದ ಪರೀಕ್ಷೆ ಬರೆದು ಹಿಂತಿರುಗುವತನಕ ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ಪ್ರತಿ ಮಗುವಿಗೂ ಚಿಕ್ಕ ಬಿಸ್ಕೆಟ್‌ ಪ್ಯಾಕ್‌ ನೀಡಬೇಕು. ಇದಕ್ಕಾಗಿ ಜಿಲ್ಲಾಡಳಿತದಿಂದ ಹಣ ಭರಿಸುವಂತೆ ಸೂಚಿಸಿದರು. ಪ್ರತಿ ವಿದ್ಯಾಥಿ೯ಯನ್ನೂ ಥಮ೯ಲ್‌ ಸ್ಕ್ಯಾನಿಂಗ್‌ ಮೂಲಕ ಪರೀಕ್ಷೆ ನಡೆಸಿ ಒಳಬಿಡಬೇಕು. ಒಂದು ವೇಳೆ ಜ್ವರ ಸಹಿತ ಇತರೆ ಸೋಂಕುಗಳಿದ್ದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.

ಸುಧಾಕರ್‌ಗೆ ಕರೆ ಮಾಡಿದ ಸಿದ್ಧರಾಮಯ್ಯ, ಪರಮೇಶ್ವರ್ಸುಧಾಕರ್‌ಗೆ ಕರೆ ಮಾಡಿದ ಸಿದ್ಧರಾಮಯ್ಯ, ಪರಮೇಶ್ವರ್

ಕ್ವಾರಂಟೈನ್‌ ಪ್ರದೇಶಗಳ ಮಕ್ಕಳಿಗೆ ಪ್ರತ್ಯೇಕ ಕೇಂದ್ರ

ಕ್ವಾರಂಟೈನ್‌ ಪ್ರದೇಶಗಳ ಮಕ್ಕಳಿಗೆ ಪ್ರತ್ಯೇಕ ಕೇಂದ್ರ

ಕ್ವಾರಂಟೈನ್‌ ಪ್ರದೇಶಗಳ ಮಕ್ಕಳಿಗೆ ಪ್ರತ್ಯೇಕ ಕೇಂದ್ರಗಳನ್ನು ಮೀಸಲಿಟ್ಟು ಒಂದು ವೇಳೆ ಅವರು ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ ಆಗಸ್ಟ್‌ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂಬುದನ್ನು ಖಚಿತ ಪಡಿಸಿಕೊಂಡ ಸಚಿವರು, ಪೋಷಕರಿಗೆ ಆತಂಕಗಳಿಲ್ಲದಂತೆ ಜಿಲ್ಲಾಡಳಿತಗಳು ಮಾಧ್ಯಮಗಳ ಮೂಲಕ ಸಕಾ೯ರ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಬೇಕು ಎಂದರು.

ಶಿಕ್ಷಣ ಇಲಾಖೆ ಇತರೆ ಇಲಾಖೆಗಳ ಸಮನ್ವಯದೊಂದಿಗೆ ಮಾಡಿಕೊಂಡಿರುವ ಸಿದ್ದತೆ, ವಿದ್ಯಾಥಿ೯, ಪರೀಕ್ಷಾ ಸಿಬ್ಬಂದಿ ಮತ್ತು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೆ ನೀಡಿರುವ ಮಾಗ೯ಸೂಚಿಗಳ ಮಾಹಿತಿ ಪಡೆದ ಸಚಿವರು, ಎಲ್ಲವೂ ಯೋಜನಾಬದ್ಧವಾಗಿ, ವೈಜ್ಞಾನಿಕ ಆಲೋಚನೆ ಹಿನ್ನಲೆಯಲ್ಲಿ ತೀಮಾ೯ನಗಳನ್ನು ಕೈಗೊಳ್ಳಲಾಗಿದೆ. ಆದರೆ ಅವುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಆ ಮೂಲಕ ರಾಜ್ಯ ಸಕಾ೯ರದ ನಿಧಾ೯ರದ ಜತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ನಗರ ವ್ಯಾಪ್ತಿಯಲ್ಲಿ 458 ಕ್ವಾರಂಟೈನ್‌ ಪ್ರದೇಶ

ನಗರ ವ್ಯಾಪ್ತಿಯಲ್ಲಿ 458 ಕ್ವಾರಂಟೈನ್‌ ಪ್ರದೇಶ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 458 ಕ್ವಾರಂಟೈನ್‌ ಪ್ರದೇಶಗಳಿವೆ. ಅಲ್ಲಿ ಪರೀಕ್ಷೆ ಬರೆಯುವ ಮಕ್ಕಳ ಬಗ್ಗೆ ಗರಿಷ್ಠ ಪ್ರಮಾಣದ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಆ ಮಕ್ಕಳಲ್ಲಿ ಯಾರಿಗಾದರೂ ಸೋಂಕಿನ ಸೂಚನೆ ಕಂಡು ಬಂದಲ್ಲಿ ತಕ್ಷಣವೇ ಪರೀಕ್ಷಾಕೇಂದ್ರದ ಬಳಿಯಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಹತ್ತಿರದ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಕರೆದೊಯ್ದು ಪರೀಕ್ಷೆ ನಡೆಸಬೇಕು. ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೋವಿಡ್‌ ಚಿಕಿತ್ಸೆ, ಸೌಲಭ್ಯಗಳಲ್ಲಿ ಲೋಪ ಸಹಿಸುವುದಿಲ್ಲ: ಸುಧಾಕರ್ಕೋವಿಡ್‌ ಚಿಕಿತ್ಸೆ, ಸೌಲಭ್ಯಗಳಲ್ಲಿ ಲೋಪ ಸಹಿಸುವುದಿಲ್ಲ: ಸುಧಾಕರ್

ವಿಡಿಯೋ ಸಂವಾದದಲ್ಲಿ ಪಾಲ್ಡೊಂಡಿದ್ದವರು

ವಿಡಿಯೋ ಸಂವಾದದಲ್ಲಿ ಪಾಲ್ಡೊಂಡಿದ್ದವರು

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌, ಹೆಚ್ಚುವರಿ ಮುಖ್ಯ ಕಾಯ೯ದಶಿ೯ ಜಾವೇದ್‌ ಅಖ್ತರ್‌, ಶಿಕ್ಷಣ ಇಲಾಖೆ ಕಾಯ೯ದಶಿ೯ ಉಮಾಶಂಕರ್‌, ವೈದ್ಯಕೀಯ ಶಿಕ್ಷಣ ಇಲಾಖೆ ಕಾಯ೯ದಶಿ೯ ಅನಿಲ್‌ಕುಮಾರ್‌, ಬಿಬಿಎಂಪಿ ಉಸ್ತುವಾರಿ ಮಂಜುನಾಥ್‌, ನಿದೇ೯ಶಕಿ ಸುಮಂಗಲ, ತಜ್ಞರಾದ ಡಾ. ಸುದಶ೯ನ್‌, ಡಾ. ಗಿರಿಬಾಬು ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

ಸಚಿವ ಪ್ರತಿಕ್ರಿಯೆ :
"ಪರೀಕ್ಷೆಗಳನ್ನು ಸಮಪ೯ಕವಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪೋಷಕರು ಯಾವುದೇ ಆತಂಕಗಳಿಲ್ಲದೆ ಮಕ್ಕಳನ್ನು ಕಳುಹಿಸಿಕೊಡಿ. ಇಡೀ ದೇಶವೇ ಎದುರುನೋಡುತ್ತಿರವ ಈ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಧಿಕಾರಿ ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ. ಒಬ್ಬ ವಿದ್ಯಾಥಿ೯ಗೂ ಸೋಂಕು ತಗುಲದಂತೆ ಜಾಗೃತೆವಹಿಸಲಾಗಿದೆ'' - ಡಾ. ಕೆ. ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವರು.

English summary
SSLC exam: Medical Education Minister Dr. D Sudhakar Video Conference with Department officials and asked them to take care not to have one student infected from Covid19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X