SSLC Exam: ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ 6 ಶಿಕ್ಷಕರ ಬಂಧನ, ₹200-500ಗೆ ಮಾರಾಟ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಸ್ಕ್ಯಾಮ್‌ನಲ್ಲಿ ಭಾಗಿಯಾಗಿದ್ದರವರ ಪೈಕಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲದೇ ಹೇಗೆಲ್ಲ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ಲಾನ್ ಮಾಡಲಾಗಿತ್ತು. ಎಷ್ಟು ಹಣಕ್ಕೆ ಹಂಚಲಾಗಿದೆ ಎಂಬುದೆಲ್ಲ ಸಂಗತಿಗಳು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿವೆ.
ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಅಪರಾಧ ಪೊಲೀಸರು 10ನೇ ತರಗತಿ ಪೂರ್ವ ಸಿದ್ಧತಾ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ತನಿಖೆ ನಡೆಸುತ್ತಿದ್ದಾರೆ. ಇದರಲ್ಲಿ ಪಾತ್ರ ವಹಿಸಿದ್ದ ಒಬ್ಬರು ಮುಖ್ಯೋಪಾಧ್ಯಾಯ ಮತ್ತು ಐದು ಶಿಕ್ಷಕರನ್ನು ಬಂಧಿಸಲಾಗಿದೆ. ದುರದೃಷ್ಟವಶಾತ್ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಕೈವಾಡ ಬಯಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು 'ಡಿಎಚ್' ವರದಿ ಮಾಡಿದೆ.

200 ರಿಂದ 500 ರೂ.ಗೆ ಮಾರಾಟ
ತುಮಕೂರು ಶಾಲೆಯೊಂದರ ಮುಖ್ಯೋಪಾಧ್ಯಾಯ ಗಿರೀಶ್ ವಿ.ಡಿ, ರಾಮನಗರದಲ್ಲಿ ಸಹಾಯಕ ಶಿಕ್ಷಕರಾದ ಅಮ್ಜದ್ ಖಾನ್, ಮತ್ತು ಶಿಕ್ಷಕಿ ಶಾಹಿದಾ ಬೇಗಂ, ಸಹಾಯಕ ಶಿಕ್ಷಕಿ ಫಹ್ಮಿದಾ, ಶಿಕ್ಷಕರಾದ ಮೊಹಮ್ಮದ್ ಸಿರಾಜುದ್ದೀನ್ ಮತ್ತು ಶಿಕ್ಷಕಿ ಕೆ ಫರ್ಜಾನಾ ಬೇಗಂ ಅವರು ಬಂಧಿತರು.ಖಾಸಗಿ ಸಂದೇಶಗಳ ಮೂಲಕ 200 ರಿಂದ 500 ರೂ.ಗಳವರೆಗೆ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ.
ಪ್ರಶ್ನೆ ಪತ್ರಿಕೆ ನೀಡುವುದಾಗಿ ಆನ್‌ಲೈನ್‌ನಲ್ಲಿ ಪೋಸ್ಟ್!
ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ಬಳಿ ಪ್ರಶ್ನೆ ಪತ್ರಿಕೆಗಳು ಲಭ್ಯವಿವೆ, ಸಂಪರ್ಕಿಸಿ ಎಂಬ ಪೋಸ್ಟ್‌ಗಳನ್ನು ಮಾಡಲಾಗಿತ್ತು. ಆಸಕ್ತರು ವಿದ್ಯಾರ್ಥಿಗಳು ಖಾಸಗಿ ಸಂದೇಶಗಳ ಸಂಪರ್ಕಿಸಿದರೆ ನೀಡುವುದಾಗಿ ತಿಳಿಸಿದ್ದರು. ಸಂಪರ್ಕಿಸಿದವರ ಬಳಿ ಇಂತಿಷ್ಟು ಹಣ ಪಡೆದು ಪ್ರಶ್ನೆ ಪತ್ರಿಕೆ ಕೊಟ್ಟು ಸೋರಿಕೆ ಮಾಡಲಾಗಿದೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಖ್ಯೋಪಾಧ್ಯಾಯರ ಮಾಹಿತಿ ಹಾಕಿಯೇ ಡೌನ್‌ಲೋಡ್
ಇಲ್ಲಿ ಗಮನಿಸಬೇಕಾದ ವಿಷಯವೆಂದರೆ, ಶಿಕ್ಷಣ ಇಲಾಖೆಯು ಈ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಯನ್ನು ಆನ್‌ಲೈನ್ ಮೂಲಕ ಒದಗಿಸುತ್ತದೆ. ಅದನ್ನು ಮುಖ್ಯೋಪಾಧ್ಯಾಯರ ವಿವರ ನಮೂದಿಸಿ, ಓಟಿಪಿ ಹಾಗಿ ಪಡೆಯುವಂತೆ ನಿಯಮ ತರಲಾಗಿದೆ. ಹೀಗಿದ್ದರು. ಮುಖ್ಯೋಪಾಧ್ಯಾಯರ ರುಜುವಾತು ಹಾಕಿ ಡೌನ್‌ಲೋಡ್ ಮಾಡಿಕೊಂಡು ಸೋರಿಕೆ ಮಾಡಲಾಗಿದೆ. ಶಿಕ್ಷಕರೇ ಇದರಲ್ಲಿ ಶಾಮೀಲಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಇದು ನಮ್ಮ ಮಕ್ಕಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುವ ಗಂಭೀರ ಪ್ರಕರಣವಾಗಿದ್ದು, ರಾಜ್ಯದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ಪೋಷಕರು ಶಿಕ್ಷಣ ಇಲಾಖೆ ಮೇಲಿನ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ.
ಡೌನ್‌ಲೋಡ್ ಆದ ಪ್ರಶ್ನೆ ಪತ್ರಿಕೆಗಳನ್ನು ಶಿಕ್ಷಕರ ಮುಖೇನ ಪಡೆದು ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಮಾರಾಟ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದವರು, ಯಾರೆಲ್ಲ ಲಾಭ ಪಡೆದಿದ್ದಾರೆ. ಇನ್ನೂ ಯಾರೆಲ್ಲ ಇದರಲ್ಲಿ ಭಾಗಿಯಾಗಿದ್ದಾರೆ ಎಂಬುದರ ಪತ್ತೆಗಾಗಿ ತನಿಖೆ ಮುಂದುವರಿಸಿದ್ದೇವೆ ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ.
ಪೂರ್ವ ಸಿದ್ಧತಾ ಪರೀಕ್ಷೆಗಳ ವೇಳಾಪಟ್ಟಿ
ಎಸ್‌ಎಸ್‌ಎಲ್‌ಸಿ ಮೂರು ಪೂರ್ವಸಿದ್ಧತಾ ಪರೀಕ್ಷೆಗಳಲ್ಲಿ ಮೊದಲನೇ ಪರೀಕ್ಷೆ ನಡೆದು ಪೂರ್ಣಗೊಂಡಿದೆ. ಇನ್ನೆರಡು ಪರೀಕ್ಷೆಗಳು ನಡೆಯಬೇಕಿದೆ. ಈಗಾಗಲೇ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ವಾರ್ಷಿಕ ಪರೀಕ್ಷೆಯ ಮೇಲೂ ಇದರ ಪ್ರಭಾವ ಉಂಟಾಗಬಹುದು ಹಾಗೂ ನಿಯತ್ತಾಗಿ ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳು 2026 ಮೂರು ಹಂತಗಳ ಪೈಕಿ ಪರೀಕ್ಷೆ-1 ಜನವರಿ 5-10ರವರೆಗೆ ನಡೆದಿವೆ. ಪರೀಕ್ಷೆ-2 ಜನವರಿ 27 ರಿಂದ ಫೆಬ್ರವರಿ 2ರವರೆಗೆ ಮತ್ತು ಪರೀಕ್ಷೆ-3 ಫೆಬ್ರವರಿ 23-28ರವರೆಗೆ ನಡೆಯಲಿವೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರವರೆಗೆ ಪರೀಕ್ಷೆ ಜರುಗಲಿದ್ದು, ಈ ಪರೀಕ್ಷೆಗಳು ಸಹ ವಿದ್ಯಾರ್ಥಿಗಳಿಗೆ ನೀರ್ಣಾಯಕವಾಗಿದೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications