ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಚೆಕ್ ಮಾಡೋದು ಹೇಗೆ?

|
Google Oneindia Kannada News

ಬೆಂಗಳೂರು, ಆಗಸ್ಟ್‌ 08: ಕೊರೊನಾವೈರಸ್ ಸಾಂಕ್ರಮಿಕ ಭೀತಿ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಯಶಸ್ಸು ಕಂಡಿದೆ. ಆದರೆ, ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಮುನ್ನವೇ ಎಸ್‌ ಸುರೇಶ್ ಕುಮಾರ್ ತಮ್ಮ ಸ್ಥಾನ ಕಳೆದುಕೊಂಡು, ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಆದರೆ, ಸುರೇಶ್ ಕುಮಾರ್ ಈ ಹಿಂದೆ ಘೋಷಿಸಿದಂತೆ ಆಗಸ್ಟ್ 10ರ ಒಳಗೆ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟವಾಗುತ್ತಿದೆ. ಇನ್ನೂ ಸರಿಯಾಗಿ ಹೇಳುವುದಾದರೆ ಸೋಮವಾರ (ಆಗಸ್ಟ್ 9) ಮಧ್ಯಾಹ್ನ 3:30ರ ನಂತರ ಎಸ್‌ಎಸ್‌ಎಲ್‌ಸಿ ರಿಸಲ್ಟ್ ಘೋಷಿಸಲಾಗುತ್ತದೆ.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶೇಷವಾದ ಒಎಂಆರ್ ಉತ್ತರ ಪತ್ರಿಕೆಗಳನ್ನು ಬಳಸಲಾಗಿತ್ತು. ಈ ಒಎಂಆರ್ ಶೀಟ್ ಡಿಜಿಟಲ್ ಸ್ಕ್ಯಾನಿಂಗ್‌ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸಲಾಗುತ್ತಿದೆ.

ಆಗಸ್ಟ್ 6ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಸೋಮವಾರದಂದು ನೂತನ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಫಲಿತಾಂಶ ಪ್ರಕಟಣೆಗೆ ಅಗತ್ಯ ಸಿದ್ಧತೆ

ಫಲಿತಾಂಶ ಪ್ರಕಟಣೆಗೆ ಅಗತ್ಯ ಸಿದ್ಧತೆ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಫಲಿತಾಂಶ ಪ್ರಕಟಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಆದೇಶವನ್ನು ಮಂಡಳಿ ನಿರೀಕ್ಷಿಸುತ್ತಿದ್ದು, ಆದೇಶ ಬರುತ್ತಿದ್ದಂತೆಯೇ ಫಲಿತಾಂಶ ಪ್ರಕಟಣೆ ಮಾಡಲಿರುವುದಾಗಿ ತಿಳಿದುಬಂದಿದೆ.

ಕೊರೊನಾ ಆತಂಕದ ನಡುವೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಜುಲೈ 19 ಹಾಗೂ 22ರಂದು ಎರಡೇ ದಿನಗಳಲ್ಲಿ ಪರೀಕ್ಷೆಯನ್ನು ನಡೆಸಿತ್ತು. ಒಂದು ದಿನದಲ್ಲಿ ಮೂರು ಪರೀಕ್ಷೆಗಳಂತೆ ಎರಡು ದಿನಗಳಲ್ಲಿ ಆರು ವಿಷಯಗಳ ಪರೀಕ್ಷೆಯನ್ನು ನಡೆಸಲಾಗಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳ ಪ್ರಶ್ನೆಗಳನ್ನು ನೀಡಲಾಗಿತ್ತು.

ಪ್ರೌಢ ಶಿಕ್ಷಣ ಮಂಡಳಿ ಈಗಾಗಲೇ ಮೌಲ್ಯಮಾಪನವನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಬಿಡುಗಡೆ ಮಾಡಲು ಅಧೀಕೃತ ಆದೇಶಕ್ಕೆ ಕಾಯುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ?

ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ?
* ಸೋಮವಾರ ಆಗಸ್ಟ್ 9ರಂದು ಮಧ್ಯಾಹ್ನ 3:30ರ ವೇಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಾಗುತ್ತದೆ. ಇದೇ ವೇಳೆಗೆ ಪರೀಕ್ಷಾ ಮಂಡಳಿಯ ಅಧಿಕೃತ ಎರಡು ವೆಬ್‌ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ (http://kseeb.kar.nic.in) ಅಥವಾ karresult.nic.inಗೆ ಭೇಟಿ ನೀಡಿ ಅಲ್ಲಿ ಫಲಿತಾಂಶಗಳನ್ನು ಪರಿಶೀಲನೆ ಮಾಡಬಹುದು.

* ವೆಬ್‌ಸೈಟ್‌ನಲ್ಲಿ ತೆರೆದುಕೊಂಡ ಪುಟದಲ್ಲಿ ವಿದ್ಯಾರ್ಥಿಗಳು ರಿಜಿಸ್ಟರ್ ಸಂಖ್ಯೆ ಹಾಗೂ ಜನ್ಮ ದಿನಾಂಕ ಮಾಹಿತಿ ಒದಗಿಸಿ ಕ್ಲಿಕ್ ಮಾಡಿದರೆ ಫಲಿತಾಂಶದ ಮಾಹಿತಿ ದೊರೆಯುತ್ತದೆ.

ವಿಶೇಷ ವಾಹನಗಳ ವ್ಯವಸ್ಥೆ

ವಿಶೇಷ ವಾಹನಗಳ ವ್ಯವಸ್ಥೆ

ಕೊರೊನಾ ಆತಂಕದ ನಡುವೆ ಹಲವು ಸಿದ್ಧತೆಗಳನ್ನು ಮಾಡಿಕೊಂಡು ನಿಯಮಗಳ ಪಾಲನೆಯೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಗಡಿ ಪ್ರದೇಶದ ವಿದ್ಯಾರ್ಥಿಗಳಿಗೆಂದೇ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆಗೆ ಸೂಕ್ತ ಸಿದ್ಧತೆಗಳನ್ನು ಪರಿಶೀಲಿಸಲು ಅಣಕು ಪರೀಕ್ಷೆಗಳನ್ನು ನಡೆಸಲಾಗಿತ್ತು.

ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 152 ವಿದ್ಯಾರ್ಥಿಗಳು ಭಾಷಾ ವಿಷಯಗಳ ಪರೀಕ್ಷೆ ಬರೆದರು. 10,693 ವಲಸೆ ವಿದ್ಯಾರ್ಥಿಗಳು ತಮಗೆ ಸಮೀಪದ ಪರೀಕ್ಷಾ ಕೇಂದ್ರಗಳನ್ನು ಆರಿಸಿಕೊಂಡಿದ್ದರು. 2,870 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿದ್ದು ಪರೀಕ್ಷೆಗೆ ಹಾಜರಾದರು.

Recommended Video

ತನ್ನದೇ ದೇಶದ ಬಗ್ಗೆ ಪಾಕ್ ಮೀಡಿಯಾ ಮಾಡಿದ ಅಪಹಾಸ್ಯದ ವಿಡಿಯೋ ವೈರಲ್ | Oneindia Kannada
ಪರೀಕ್ಷೆಗೆ ಶೇ 99.65ರಷ್ಟು ಹಾಜರಾತಿ

ಪರೀಕ್ಷೆಗೆ ಶೇ 99.65ರಷ್ಟು ಹಾಜರಾತಿ

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಕೇರಳ ಮಹಾರಾಷ್ಟ್ರ, ಮತ್ತು ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಒಟ್ಟು 706 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.

"ಒಟ್ಟು 8.76 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಯಾವುದೇ ಮಕ್ಕಳು ಗೈರು ಆಗದೇ ಶೇ 99.65ರಷ್ಟು ಹಾಜರಾತಿಯೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳೆದ ಬಾರಿಯ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಜರಾಗಿದ್ದಾರೆ. ಮಕ್ಕಳ ಶೇಕಡಾವಾರು ಹಾಜರಾತಿಯೂ ಈ ಬಾರಿ ಹೆಚ್ಚಾಗಿದೆ" ಎಂದು ಶಿಕ್ಷಣ ಮಂಡಳಿ ಮಾಹಿತಿ ನೀಡಿದೆ.

4,885 ಪರೀಕ್ಷಾ ಕೇಂದ್ರ, 73, 064 ಪರೀಕ್ಷಾ ಕೊಠಡಿಯಲ್ಲಿ ಕೋವಿಡ್ 19 ಮಾರ್ಗಸೂಚಿಗೆ ಅನುಸಾರವಾಗಿ ಪರೀಕ್ಷೆ ಆಯೋಜನೆ ಮಾಡುವಲ್ಲಿ ಸುಮಾರು 1.19 ಲಕ್ಷ ಸಿಬ್ಬಂದಿ ಯಶಸ್ವಿಯಾಗಿದ್ದರು.

English summary
Karnataka SSLC exams result 2021 expected to be released today. Here is detail on how to check,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X