Get Updates
Get notified of breaking news, exclusive insights, and must-see stories!

ಇಂದೇ SSLC ಪರೀಕ್ಷೆ ಫಲಿತಾಂಶ ಪ್ರಕಟ ಸಾಧ್ಯತೆ; ಫಲಿತಾಂಶ ನೋಡುವುದು ಹೇಗೆ?

ಬೆಂಗಳೂರು, ಆಗಸ್ಟ್‌ 06: ಕೊರೊನಾ ಸೋಂಕಿನ ಭೀತಿ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಪೂರೈಸಲಾಗಿದ್ದು, ಆಗಸ್ಟ್ 10ರ ಒಳಗೆ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಎಸ್‌ ಸುರೇಶ್ ಕುಮಾರ್ ಈ ಮುನ್ನ ಮಾಹಿತಿ ನೀಡಿದ್ದರು.

ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್‌ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಶೀಘ್ರವೇ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದು ಹೇಳಿದ್ದರು.

ಇದೀಗ ಶುಕ್ರವಾರ, ಆಗಸ್‌ 6ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬಿಡುಗಡೆ ಮಾಡುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ.

Karnataka SSLC Exam Result 2021 To Be Released Today; Here Is How To Check

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಫಲಿತಾಂಶ ಪ್ರಕಟಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಆದೇಶವನ್ನು ಮಂಡಳಿ ನಿರೀಕ್ಷಿಸುತ್ತಿದ್ದು, ಆದೇಶ ಬರುತ್ತಿದ್ದಂತೆಯೇ ಫಲಿತಾಂಶ ಪ್ರಕಟಣೆ ಮಾಡಲಿರುವುದಾಗಿ ತಿಳಿದುಬಂದಿದೆ.

ಕೊರೊನಾ ಆತಂಕದ ನಡುವೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಜುಲೈ 19 ಹಾಗೂ 22ರಂದು ಎರಡೇ ದಿನಗಳಲ್ಲಿ ಪರೀಕ್ಷೆಯನ್ನು ನಡೆಸಿತ್ತು. ಒಂದು ದಿನದಲ್ಲಿ ಮೂರು ಪರೀಕ್ಷೆಗಳಂತೆ ಎರಡು ದಿನಗಳಲ್ಲಿ ಆರು ವಿಷಯಗಳ ಪರೀಕ್ಷೆಯನ್ನು ನಡೆಸಲಾಗಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳ ಪ್ರಶ್ನೆಗಳನ್ನು ನೀಡಲಾಗಿತ್ತು.

ಪ್ರೌಢ ಶಿಕ್ಷಣ ಮಂಡಳಿ ಈಗಾಗಲೇ ಮೌಲ್ಯಮಾಪನವನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಬಿಡುಗಡೆ ಮಾಡಲು ಅಧೀಕೃತ ಆದೇಶಕ್ಕೆ ಕಾಯುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ?
*ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧೀಕೃತ ವೆಬ್‌ಸೈಟ್ http://kseeb.kar.nic.in ಅಥವಾ karresult.nic.inಗೆ ಭೇಟಿ ನೀಡಿ ಅಲ್ಲಿ ಫಲಿತಾಂಶಗಳನ್ನು ಪರಿಶೀಲನೆ ಮಾಡಬಹುದು.

* ವೆಬ್‌ಸೈಟ್‌ನಲ್ಲಿ ತೆರೆದುಕೊಂಡ ಪುಟದಲ್ಲಿ ವಿದ್ಯಾರ್ಥಿಗಳು ರಿಜಿಸ್ಟರ್ ಸಂಖ್ಯೆ ಹಾಗೂ ಜನ್ಮ ದಿನಾಂಕ ಮಾಹಿತಿ ಒದಗಿಸಿ ಕ್ಲಿಕ್ ಮಾಡಿದರೆ ಫಲಿತಾಂಶದ ಮಾಹಿತಿ ದೊರೆಯುತ್ತದೆ.

ಕೊರೊನಾ ಆತಂಕದ ನಡುವೆ ಹಲವು ಸಿದ್ಧತೆಗಳನ್ನು ಮಾಡಿಕೊಂಡು ನಿಯಮಗಳ ಪಾಲನೆಯೊಂದಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಗಡಿ ಪ್ರದೇಶದ ವಿದ್ಯಾರ್ಥಿಗಳಿಗೆಂದೇ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆಗೆ ಸೂಕ್ತ ಸಿದ್ಧತೆಗಳನ್ನು ಪರಿಶೀಲಿಸಲು ಅಣಕು ಪರೀಕ್ಷೆಗಳನ್ನು ನಡೆಸಲಾಗಿತ್ತು.

ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 152 ವಿದ್ಯಾರ್ಥಿಗಳು ಭಾಷಾ ವಿಷಯಗಳ ಪರೀಕ್ಷೆ ಬರೆದರು. 10,693 ವಲಸೆ ವಿದ್ಯಾರ್ಥಿಗಳು ತಮಗೆ ಸಮೀಪದ ಪರೀಕ್ಷಾ ಕೇಂದ್ರಗಳನ್ನು ಆರಿಸಿಕೊಂಡಿದ್ದರು. 2,870 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿದ್ದು ಪರೀಕ್ಷೆಗೆ ಹಾಜರಾದರು.

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಕೇರಳ ಮಹಾರಾಷ್ಟ್ರ, ಮತ್ತು ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಒಟ್ಟು 706 ಮಕ್ಕಳು ಬಂದು ಪರೀಕ್ಷೆ ಬರೆದಿದ್ದಾರೆ. ಅವರಿಗೆ ಗಡಿ ಪ್ರದೇಶದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಅಭ್ಯರ್ಥಿಗಳು ಗೈರು ಹಾಜರಾಗಿದ್ದರು.

"ಈ ವರ್ಷಧಾರೆ ಸಾರಿಗೆ ಕಾರಣದಿಂದ ಯಾವುದೇ ಮಕ್ಕಳು ಗೈರು ಆಗದೇ ಶೇ 99.65ರಷ್ಟು ಹಾಜರಾತಿಯೊಂದಿಗೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಕಳೆದ ಬಾರಿಯ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಮಕ್ಕಳಿಗಿಂತ ಹೆಚ್ಚಿನ ಸಂಖ್ಯೆಯ ಮಕ್ಕಳು ಹಾಜರಾಗಿದ್ದಾರೆ. ಮಕ್ಕಳ ಶೇಕಡಾವಾರು ಹಾಜರಾತಿಯೂ ಈ ಬಾರಿ ಹೆಚ್ಚಾಗಿದೆ" ಎಂದು ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಮಾಹಿತಿ ನೀಡಿದ್ದರು.

ಎಸ್​ಎಸ್​ಎಲ್​ಸಿ ಪರೀಕ್ಷೆಯ ಒಎಂಆರ್ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಸ್ಕ್ಯಾನಿಂಗ್‌ಗೆ ಕಳುಹಿಸಿ ನಂತರ ಮೌಲ್ಯಮಾಪನ ಮಾಡಿ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟ ಮಾಡುತ್ತೇವೆ ಎಂದು ಹೇಳಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+