ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka SSLC Result 2022: ಫಲಿತಾಂಶ ನೋಡುವುದು ಹೇಗೆ?

|
Google Oneindia Kannada News

ಬೆಂಗಳೂರು, ಮೇ 18: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 19ರ ಗುರುವಾರ ಪ್ರಕಟಿಸಲಿದೆ. ಶಿಕ್ಷಣ ಸಚಿವ ಬಿ. ಸಿ. ನಾಗೇಶ್‌ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಫಲಿತಾಂಶವನ್ನು ಆನ್‌ಲೈನ್ ಮೂಲಕ ನೋಡುವ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ.ನಾಗೇಶ್ ಗುರುವಾರ ಮಧ್ಯಾಹ್ನ 12:30ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದ್ದಾರೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ karresults.nic.inನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.

SSLC ಮೇ 20ರೊಳಗೆ ಫಲಿತಾಂಶ: ಮೌಲ್ಯಮಾಪನಕ್ಕೆ ಗೈರು ಹಾಜರಾದವರ ವಿರುದ್ಧ ಶಿಸ್ತುಕ್ರಮ! SSLC ಮೇ 20ರೊಳಗೆ ಫಲಿತಾಂಶ: ಮೌಲ್ಯಮಾಪನಕ್ಕೆ ಗೈರು ಹಾಜರಾದವರ ವಿರುದ್ಧ ಶಿಸ್ತುಕ್ರಮ!

ವಿದ್ಯಾರ್ಥಿಗಳು ಪರೀಕ್ಷೆಯ ವೇಳೆ ನೋಂದಾಯಿಸಿಕೊಂಡಿರುವ ಫೋನ್‌ ನಂಬರ್‌ಗಳಿಗೆ ಶಿಕ್ಷಣ ಇಲಾಖೆ ಫಲಿತಾಂಶವನ್ನು ಎಸ್‌ಎಂಎಸ್‌ ಮೂಲಕ ಕಳಹಿಸಿಕೊಡಲಿದೆ. ಪ್ರತಿ ಸೆಕೆಂಡಿಗೆ ಇಬ್ಬರಿಗೆ ಫಲಿತಾಂಶದ ವಿವರ ಮೊಬೈಲ್‌ಗೆ ರವಾನೆಯಾಗಲಿದೆ. ಮೇ. 19 ಸಂಜೆ ವೇಳೆಗೆ ಫಲಿತಾಂಶದ ವಿವರಗಳು ವಿದ್ಯಾರ್ಥಿಗಳ ಮೊಬೈಲ್‌ಗಳಿಗೆ ಹೋಗಲಿದೆ.

Karnataka SSLC Exam Result 2022 How to Check Result Online

ವೆಬ್ ತಾಣದಲ್ಲಿ ಪ್ರಕಟ: ಎಸ್ಎಸ್ಎಲ್‌ಸಿ ಫಲಿತಾಂಶ ಹಾಗೂ https://karresults.nic.in/ ವೆಬ್‌ಸೈಟ್‌ನಲ್ಲಿ ಸಿಗಲಿದೆ. ಶಿಕ್ಷಣ ಸಚಿವರ ಪತ್ರಿಕಾಗೋಷ್ಠಿ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಸಿಗಲಿದೆ.

8.7 ಲಕ್ಷ ವಿದ್ಯಾರ್ಥಿಗಳ ಭವಿಷ್ಯ; ಕೋವಿಡ್ ನಡುವೆಯೂ ಕರ್ನಾಟಕದಲ್ಲಿ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 15,387 ಶಾಲೆಗಳಿಂದ ಒಟ್ಟು 8,73,884 ವಿದ್ಯಾರ್ಥಿಗಳು ಹಾಜರಾಗಿದ್ದರು. ಮಾ. 28 ರಿಂದ ಏ. 11 ರ ವರೆಗೆ ಪರೀಕ್ಷೆ ನಡೆದಿತ್ತು. ಹದಿನೈದು ಸಾವಿರ ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇನ್ನೆರಡು ದಿನದಲ್ಲಿ ಸಮಗ್ರ ವಿವರ ಲಭ್ಯವಾಗಲಿದೆ.

Karnataka SSLC Exam Result 2022 How to Check Result Online

ವೆಬ್‌ಸೈಟ್‌ನಲ್ಲಿ ಫಲಿತಾಂಶ ಮತ್ತು ಅಂಕಪಟ್ಟಿ ಪಡೆಯುವುದು ಹೇಗೆ?

> sslc.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ
>10ನೇ ತರಗತಿ ಫಲಿತಾಂಶ ಎಂದು ತೋರಿಸುವ ಲಿಂಕ್‌ ಕ್ಲಿಕ್‌ ಮಾಡಿ
>ನಂತರ KSEEB SSLC ಫಲಿತಾಂಶ 2022 ಎಂಬ ಲಾಗಿನ್ ವಿಂಡೋವನ್ನು ತೋರಿಸುತ್ತದೆ.
> kseeb.Kar.nic.in ವಿಂಡೋದಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ಭರ್ತಿ ಮಾಡಿ
> ನಂತರ ನಿಮ್ಮ ಎಸ್‌ಎಸ್‌ಎಲ್‌ಸಿ ಫಲಿತಾಂಶ ವೆಬ್‌ಸೈಟ್‌ ಪರದೆಯ ಮೇಲೆ ಕಾಣುತ್ತದೆ.

Recommended Video

ಬಯೋ ಬಬ್ಬಲ್ ಬಿಟ್ಟು ಹೊರಟ Williamson | Oneindia Kannada

English summary
Karnataka SSLC exam result 2022 will be announced on May 19th. How to check result online, here are the steps.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X