SSLC Result 2025: ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆ ಬಗ್ಗೆ ಅಪ್‌ಡೇಟ್‌ ಕೊಟ್ಟ ಮಧು ಬಂಗಾರಪ್ಪ

ಬೆಂಗಳೂರು, ಏಪ್ರಿಲ್‌ 16: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಮಾರ್ಚ್ 21 ರಿಂದ ಪ್ರಾರಂಭವಾಗಿ ಏಪ್ರಿಲ್ 4, ರವರೆಗೆ ನಡೆದು ಮುಕ್ತಾಯಗೊಂಡಿದೆ. ಏಪ್ರಿಲ್15 ರಿಂದ ರಾಜ್ಯಾದ್ಯಂತ 240 ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಪ್ರಾರಂಭವಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಇನ್ನೂ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ ಹೇಳಿದ್ದಾರೆ. ಈಗಾಗಲೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭವಾಗಿದೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ- 1 ನಡೆದಿದ್ದು, 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು ಎಂದು ಮಾಹಿತಿ ನೀಡಿದ್ದಾರೆ.

SSLC Exam Results Are Likely To Be Declared In First Week Of May Madhu Bangarappa

ವಿದ್ಯಾರ್ಥಿಗಳು karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. SMS ಮೂಲಕವೂ ಫಲಿತಾಂಶ ಪಡೆಯಬಹುದು. ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರುಪರಿಶೀಲನೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಮಂಡಳಿಯ ಅರ್ಜಿ ನಮೂನೆಯನ್ನು ಆನ್ ಲೈನ್ ಅಥವಾ ಆಫ್ ಲೈನ್ ಮೋಡ್‌ನಲ್ಲಿ ಅಗತ್ಯ ಶುಲ್ಕದೊಂದಿಗೆ ಸಲ್ಲಿಸಬೇಕು.

ಇನ್ನೂ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ಆಗಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.

ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್‌ನಲ್ಲಿ ಹೊರಡಿಸಿದ ಆದೇಶದ ಪ್ರಕಾರ, ಜೂನ್ 1, 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26 ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. ಇದರಿಂದ ಸಾವಿರಾರು ಮಕ್ಕಳ ಪ್ರವೇಶಕ್ಕೆ ಅಡ್ಡಿಯಾಗಿದೆ. ಹೀಗಾಗಿ ಮೊದಲು ಇದ್ದಂತೆ ಪೋಷಕರ ಇಚ್ಛೆಗೆ ಅನುಗುಣವಾಗಿ ಶಾಲೆಗೆ ಸೇರಿಸಲು ವಯೋಮಿತಿ ಸಡಿಲಿಕೆಯ ಅವಕಾಶ ನೀಡಬೇಕು ಎಂದು ಹಲವು ಪೋಷಕರು ಮನವಿ ಮಾಡಿದ್ದರು. 5 ವರ್ಷ 5 ತಿಂಗಳು ಇರುವ ಮಕ್ಕಳಿಗೆ ಈ ವರ್ಷ 1ನೇ ತರಗತಿ ನೋಂದಣಿಗೆ ಅವಕಾಶ ಮಾಡಲಾಗುತ್ತಿದೆ. 1ನೇ ತರಗತಿಯ ಅಡ್ಮಿಷನ್ ಜೊತೆಗೆ LKG ಪ್ರವೇಶ ಪಡೆಯುವ ಮಕ್ಕಳಿಗೆ 4 ವರ್ಷ ವಯೋಮಿತಿ ನಿಗದಿಪಡಿಸಲಾಗುತ್ತಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್‌ಸಿ, ಸಿಬಿಎಸ್‌ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗೊಲ್ಲ ಎಂದು ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+