Karnataka SSLC Exam 2023 : ಪೂರ್ವಸಿದ್ಧತಾ ಪರೀಕ್ಷೆಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪರೀಕ್ಷಾ ಮಂಡಳಿ

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳು ಫೆಬ್ರವರಿ 27 ಮತ್ತು ಮಾರ್ಚ್ 4 ರ ನಡುವೆ ನಡೆಯುತ್ತವೆ.

ಬೆಂಗಳೂರು, ಫೆಬ್ರವರಿ. 21: ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಕರ್ನಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಈ ಹಿಂದೆ ಫೆಬ್ರವರಿ 23 ರಿಂದ ಮಾರ್ಚ್ 1 ರವರೆಗೆ ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು, ಬಳಿಕ ಅದನ್ನು ಪರಿಷ್ಕರಿಸಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳು ಫೆಬ್ರವರಿ 27 ಮತ್ತು ಮಾರ್ಚ್ 4 ರ ನಡುವೆ ನಡೆಯುತ್ತವೆ. ಮಾರ್ಗಸೂಚಿಗಳ ಪ್ರಕಾರ, ಪ್ರಶ್ನೆ ಪತ್ರಿಕೆಗಳನ್ನು ಸಂಬಂಧಿತ ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ ನೀಡಲಾಗುತ್ತದೆ. ಅಧಿಕಾರಿಯು ಪ್ರಶ್ನೆ ಪತ್ರಿಕೆಗಳನ್ನು ಬಿಗಿ ಭದ್ರತೆಯಲ್ಲಿ ಇರಿಸಲು ಮತ್ತು ತಾಲೂಕು ಮಟ್ಟದಲ್ಲಿ ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸಿ ವಿತರಿಸುವ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ.

SSLC exam: SSLC examination guidelines released by KSEAB

ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 50 ರೂಪಾಯಿ ಶುಲ್ಕ ಪಾವತಿಸಬೇಕು. ಈ ಹಿಂದೆ ಶುಲ್ಕವನ್ನು 60 ರೂಪಾಯಿಗೆ ನಿಗದಿಪಡಿಸಲಾಗಿದ್ದರೂ, ವಿವಿಧ ಕಡೆಗಳಿಂದ ಟೀಕೆಗಳು ಬಂದ ಹಿನ್ನೆಲೆಯಲ್ಲಿ ಅದನ್ನು ಕಡಿತಗೊಳಿಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯನ್ನು ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.

ಇನ್ನು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಹಾಲ್ ಟಿಕೆಟ್ ಬಿಡುಗಡೆ ಮಾಡಿದೆ. ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಅಧಿಕೃತ ವೆಬ್‌ಸೈಟ್ ಅಂದರೆ kseab.karnataka.gov.in ಗೆ ಭೇಟಿ ನೀಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+