ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್.ಎಸ್.ಎಲ್.ಸಿ. ಪರೀಕ್ಷೆ - ಪೂರ್ವಸಿದ್ಧತೆಗಾಗಿ ಸಹಾಯವಾಣಿ

ಎಸ್.ಎಸ್.ಎಲ್.ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳ ಸಹಾಯಕ್ಕಾಗಿ ಪ್ರೌಢ ಶಿಕ್ಷಣ ಮಂಡಳಿ ಸಹಾಯವಾಣಿ ಆರಂಭಿಸಿದೆ.

By Sachhidananda Acharya
|
Google Oneindia Kannada News

ಬೆಂಗಳೂರು, ಮಾರ್ಚ್ 2: ಎಸ್.ಎಸ್.ಎಲ್.ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿರುವ ವಿದ್ಯಾರ್ಥಿಗಳ ಸಹಾಯಕ್ಕಾಗಿ ಪ್ರೌಢ ಶಿಕ್ಷಣ ಮಂಡಳಿ ಸಹಾಯವಾಣಿ ಆರಂಭಿಸಿದೆ. [ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ]

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಪರೀಕ್ಷೆಯಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ತಮ್ಮ ಮಕ್ಕಳು ಗಳಿಸಬೇಕೆಂದು ಪೋಷಕರ ಬಯಸುತ್ತಾರೆ. ವಿದ್ಯಾರ್ಥಿಗಳ ಸಾಮರ್ಥ್ಯ, ಬುದ್ದಿಶಕ್ತಿ, ಆಸಕ್ತಿ, ಕಠಿಣ ಪರಿಶ್ರಮ ಇವು ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕ ಗಳಿಸುವಂತೆ ಮಕ್ಕಳ ಮೇಲೆ ಪೋಷಕರು, ಸಮಾಜ ಮತ್ತು ಶಿಕ್ಷಕರು ಒತ್ತಡ ಹಾಕುತ್ತಾರೆ.[ಅಣಕು ವಿಡಿಯೋ: ಎಕ್ಸಾಂ ಹಾಲ್ ನಲ್ಲಿ ಕನ್ನಡ ಸಾಂಗ್ಸ್]

ಸಹಾಯವಾಣಿ

ಸಹಾಯವಾಣಿ

ಇದರಿಂದ ವಿದ್ಯಾರ್ಥಿಗಳು ಹಲವು ಸಮಸ್ಯೆ ಎದುರಿಸುತ್ತಾರೆ. ಅಧ್ಯಯನದ ಕಡೆ ಗಮನಹರಿಸಲಾಗದಿರುವುದು, ಏಕಾಗ್ರತೆ ಕೊರತೆ ಮೊದಲಾದ ಸಮಸ್ಯೆಗಳಿಂದ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳನ್ನು ನಿವಾರಿಸಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯುವಂತೆ ಮಾಡಲು ಸರಕಾರ ಈ ಸಹಾಯವಾಣಿ ಆರಂಭಿಸಿದೆ..

ಸಂಪರ್ಕ

ಸಂಪರ್ಕ

ಈಗಾಗಲೇ ಸಹಾಯವಾಣಿ ಬುಧವಾರ ಬೆಳಿಗ್ಗೆ 9.00 ಗಂಟೆಗೆ ಉದ್ಫಾಟನೆಗೊಂಡಿದೆ. ಸಹಾಯವಾಣಿ ಸಂಖ್ಯೆಗಳು: 080-23310075, 080-23310076

ಈ ಸಹಾಯವಾಣಿ ಮಾರ್ಚ್ 1 ರಿಂದ 28 ರವರೆಗೆ ಪ್ರತಿ ದಿನ ಬೆಳಿಗ್ಗೆ 9.00 ರಿಂದ ಸಂಜೆ 7.00 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಮಾರ್ಚ್ 30 ರಿಂದ ಏಪ್ರಿಲ್ 12 ರವರೆಗೆ ನಿಯಂತ್ರಣ ಕೊಠಡಿಯಾಗಿ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 2.30 ಗಂಟೆವರೆಗೆ ಮಾತ್ರ ಕಾರ್ಯನಿರ್ವಹಿಸಲಿದೆ.

ಕರೆ ಮಾಡಬಹುದಾದ ದಿನಗಳು

ಕರೆ ಮಾಡಬಹುದಾದ ದಿನಗಳು

ಪೋಷಕರು, ವಿದ್ಯಾರ್ಥಿಗಳು ಈ ದೂರವಾಣಿ ಸಂಖ್ಯೆಗೆ ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಂದು ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಪೋಷಕರು, ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಶೈಕ್ಷಣಿಕ ವಿಷಯ

ಶೈಕ್ಷಣಿಕ ವಿಷಯ

* ಪರೀಕ್ಷೆಗೆ ಸಿದ್ದತೆ ಮಾಡಿಕೊಳ್ಳುವ ವಿಧಾನ

* ಪ್ರಶ್ನೆ ಪತ್ರಿಕೆಯ ಮಾದರಿ

* ಅಧ್ಯಯನ ಕೌಶಲ್ಯ

ಇವುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಸಹಾಯವಾಣಿಕೆ ಕರೆ ಮಾಡಿ ಪ್ರಶ್ನೆ ಕೇಳಬಹುದು.

ಪರೀಕ್ಷಾ ವಿಷಯ

ಪರೀಕ್ಷಾ ವಿಷಯ

* ಪರೀಕ್ಷಾ ಭೀತಿ

* ಸಮಯ ನಿರ್ವಹಣೆ

* ಜ್ಞಾಪನಶಕ್ತಿ ಕಡಿಮೆ, ಮರೆವು ಎಂಬ ಭಾವನೆ, ನೆನಪಿನ ಶಕ್ತಿ ಉಳಿಸಿಕೊಳ್ಳುವ ವಿಧಾನ

* ತಂದೆ ತಾಯಿಗಳ, ಸಮಾಜ, ಸ್ನೇಹಿತರ ಒತ್ತಡ ನಿರ್ವಹಣೆ

* ಪರೀಕ್ಷೆ ಹತ್ತಿರವಾಗುತ್ತಿರುವ ವಿದ್ಯಾರ್ಥಿಗಳ ವರ್ತನೆಯ ಬದಲಾವಣೆಯಾಗುವುದು

* ಇಷ್ಟವಿಲ್ಲದ ವಿಷಯಗಳನ್ನು ಓದಬೇಕಾದ ಅನಿವಾರ್ಯತೆ, ಒತ್ತಡ ಕೀಳರಿಮೆ ಇತ್ಯಾದಿ

ವಿಷಯಗಳ ಬಗ್ಗೆ ಸಹಾಯವಾಣಿಗೆ ಕರೆ ಮಾಡಿ ಪ್ರಶ್ನೆಗಳನ್ನು ಕೇಳಬಹುದು.

English summary
Ahead of class 10 exam Karnataka Secondary Education Board has started helpline to give suggestions to SSLC students who are facing the important exam of their life.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X