ಎಸ್ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಗೊಂದಲವೇ, ಕರೆ ಮಾಡಿ

ಬೆಂಗಳೂರು, ಮಾ.3 : ಎಸ್‌ಎಸ್ಎಲ್‌ಸಿ ಪರೀಕ್ಷೆಗಳು ಆರಂಭವಾಗುತ್ತಿರುವ ಹಿನ್ನಲೆಯಲ್ಲಿ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ. ಮಾರ್ಚ್ 30ರಿಂದ ಏ.13ರ ತನಕ ಈ ಬಾರಿಯ ಪರೀಕ್ಷೆಗಳು ನಡೆಯಲಿವೆ.

ಮಂಗಳವಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋಧಾ ಬೋಪಣ್ಣ ಮತ್ತು ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್ ಮೊಹಸಿನ್ ಅವರು ಸಹಾಯವಾಣಿಗೆ ಚಾಲನೆ ನೀಡಿದರು. ಏ.13ರವರೆಗೆ ಈ ಸಹಾಯವಾಣಿ ಕಾರ್ಯನಿರ್ವಹಿಸಲಿದೆ. [ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ]

helpline

ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳು ತಮಗಿರುವ ಗೊಂದಗಳನ್ನು ಸಹಾಯವಾಣಿಗೆ ಕರೆ ಮಾಡುವ ಮೂಲಕ ಬಗೆಹರಿಸಿಕೊಳ್ಳಬಹುದು. ಬೆಳಗ್ಗೆ 10.30ರಿಂದ ರಾತ್ರಿ 8ರವರೆಗೆ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.[ಎಸ್ಎಸ್ಎಲ್ ಸಿಯಲ್ಲಿ ಯಾರೂ ಫೇಲ್ ಆಗಲ್ಲ]

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2015ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಿದ್ದು, ಮಾ.30ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಏಪ್ರಿಲ್ 13ರವರೆಗೆ ನಡೆಯಲಿವೆ.

ಈ ವರ್ಷದ 8,53,063 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 3038 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು ಪರೀಕ್ಷೆಯ ಪ್ರಾರಂಭದಲ್ಲಿ 15 ನಿಮಿಷಗಳ ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ಸಹಾಯವಾಣಿ ಸಂಖ್ಯೆಗಳು : 080-23310075, 080-23310076

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+