ಎಸ್‌ಎಸ್‌ಎಲ್‌ಸಿ ಫಲಿತಾಂಶ : ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ

ಬೆಂಗಳೂರು, ಏಪ್ರಿಲ್ 30 : 2019ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ. ಶೇ 70.70ರಷ್ಟು ಫಲಿತಾಂಶ ಬಂದಿದೆ. ಹಾಸನ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.

ಮಂಗಳವಾರ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಆಯುಕ್ತ ಎಸ್.ಆರ್.ಉಮಾ ಶಂಕರ್, ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಅವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಿದರು. ಶಾಲೆಗಳಲ್ಲಿ ಬುಧವಾರ ಫಲಿತಾಂಶ ಪ್ರಕಟಿಸಲಾಗುತ್ತದೆ.

SSLC examination result 2019 : Rural students toppers

ಮಂಗಳವಾರ ಮಧ್ಯಾಹ್ನದಿಂದ ವಿದ್ಯಾರ್ಥಿಗಳು www.kaceb.kar.nic.in ಮತ್ತು www.karresults.nic.in ವೆಬ್ ಸೈಟ್‌ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶಕ್ಕೆ ಹೋಲಿಕೆ ಮಾಡಿದರೆ ಗ್ರಾಮೀಣ ಪ್ರದೇಶದ ಫಲಿತಾಂಶದ ಪ್ರಮಾಣ ಹೆಚ್ಚಿದೆ.

2018-19ನೇ ಸಾಲಿನಲ್ಲಿ ನಗರದ ಪ್ರದೇಶದಲ್ಲಿ 371045 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 259927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 70.05ರಷ್ಟು ಫಲಿತಾಂಶ ಬಂದಿದೆ.

454423 ಗ್ರಾಮೀಣ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 348409 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ 76.67ರಷ್ಟು ಫಲಿತಾಂಶ ಬಂದಿದೆ.

2017-18ನೇ ಸಾಲಿನಲ್ಲಿಯೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದರು. ಕಳೆದ ವರ್ಷ ಶೇ 74.00 ಫಲಿತಾಂಶ ಗ್ರಾಮೀಣ ಪ್ರದೇಶದಲ್ಲಿ ಬಂದಿತ್ತು. ನಗರ ಪ್ರದೇಶದಲ್ಲಿ ಶೇ 69.38 ಫಲಿತಾಂಶ ಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+