SSLC Exam: 625 ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ನಗದು ಬಹುಮಾನ: ಚನ್ನಗಿರಿ ಶಾಸಕ ಘೋಷಣೆ
ದಾವಣಗೆರೆ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ತಯಾರಿ ನಡೆಸಿದ್ದಾರೆ. ವಾರ್ಷಿಕ ಅಂತಿಮ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಈ ಬಾರಿಯ ಪರೀಕ್ಷೆಯಲ್ಲಿ ಔಟ್ ಆಪ್ ಔಟ್ 625ಕ್ಕೆ 625 ಅಂಕಗಳನ್ನು ಪಡೆದರೆ ಅಂತಹ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ದಾವಣಗೆರೆಯ ಚನ್ನಗಿರಿಯ ಶಾಸಕರು ಘೋಷಿಸಿದ್ದಾರೆ. ಈ ಮೂಲಕ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆಯುವಂತೆ ಉತ್ತೇಜಿಸಲಾಗಿದೆ.
ಈ ನಗದು ಬಹುಮಾನವನ್ನು ಚನ್ನಗಿರಿಯ ಶಾಸಕ ಬಸವರಾಜು ಶಿವಗಂಗಾ ಅವರು ಘೋಷಿಸಿದ್ದಾರೆ. ಪಟ್ಟಣದ ಬಾಲಿಕಾ ಪ್ರೌಢಶಾಲೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗಾಗಿ ಎರಡು ದಿನ ಪರೀಕ್ಷಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಚನ್ನಗಿರಿ ತಾಲೂಕಿನ ಪ್ರೌಢಶಾಲೆಗಳಲ್ಲಿ ಹತ್ತನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಇದೇ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸಿದರೆ ಪ್ರತಿಯೊಬ್ಬರಿಗೂ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಅವರು ತಿಳಿಸಿದರು.

ಈಗಾಗಲೇ ಜರುಗಿದ ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಶೇಕಡಾ 90ಕ್ಕೂ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದು ನಿಮ್ಮ ಅಂತಿಮ ಪರೀಕ್ಷೆಗಳಿಗೆ ಸಹಾಯವಾಗುತ್ತದೆ ಎಂದು ಶಾಸಕರು ತಿಳಿಸಿದರು. ಶಾಸಕರು ಹೇಳಿದಂತೆ ವಿದ್ಯಾರ್ಥಿಗಳು ಉತ್ತಮವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು. ಹೆಚ್ಚು ಅಂಕ ಗಳಿಸಬೇಕು, ಈ ಪ್ರೋತ್ಸಾಹ ಧನ ನಿಮ್ಮ ಮುಂದಿನ ಭವಿಷ್ಯಕ್ಕೂ ದಾರಿ ಆಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿಗಳ್ನನುದ್ದೇಶಿಸಿ ಸಲಹೆ ನೀಡಿದರು.
ಶಿಬಿರದಲ್ಲಿ ವಿಷಯವಾರು ಶಿಕ್ಷಕರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಕಠಿಣವಾದ, ಅವರ ಕ್ಲಿಷ್ಟವೆನಿಸಿದ ಅಂಶಗಳನ್ನು ಪರಿಹರಿಸಲಾಯಿತು. ಆಂಗ್ಲ ಮತ್ತು ಕನ್ನಡ ಮಾಧ್ಯಮಗಳ ಬೇರೆ ಬೇರೆಯಾಗಿ ಕಲಿಕಾ ಕಾರ್ಯಕ್ರಮ ನಡೆಯಿತು. ಎರಡು ದಿನಗಳ ಈ ಶಿಬಿರದಲ್ಲಿ ವಿದ್ಯಾರ್ಥಿಗಳು ಸಮಸ್ಯೆ ಬಿಡಿಸಲು ಒಲವು ತೋರಿದ್ದು ಕಂಡು ಬಂತು.
ಟಾಪರ್‌ಗಳ ಪ್ರಶ್ನೆ ಪತ್ರಿಕೆ ಲಭ್ಯ
ಕರ್ನಾಟಕ ರಾಜ್ಯ ಪರೀಕ್ಷಾ ಹಾಗೂ ಮೌಲ್ಯಮಾಪನ ಮಂಡಳಿ (KSEAB) ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಕಳೆದ ವರ್ಷದಲ್ಲಿ ಅತ್ಯಧಿಕ ಅಂಕ ಗಳಿಸಿದ ಟಾಪರ್ ಗಳ ಪ್ರಶ್ನೆ ಪತ್ರಿಕೆಗಳನ್ನು ಸಿಗುವಂತೆ ಮಾಡಿತ್ತು. ಅದನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಅಪ್ಲೋಡ್ ಮಾಡಿದೆ. ವಿದ್ಯಾರ್ಥಿಗಳು ಇದನ್ನು ಡೌನ್‌ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಕೂಡಲೇ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications