• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸಚಿವ ಸುರೇಶ್

|

ಬೆಂಗಳೂರು, ಜನವರಿ 28: ಶಾಲೆಗಳ ಪ್ರಾರಂಭ ಹಾಗೂ ವಿದ್ಯಾಗಮ ವಿಸ್ತರಣೆ, ಎಸ್ಎಸ್ಎಲ್ಸಿ ಪರೀಕ್ಷೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಇಂದು ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಸಭೆ ನಡೆಸಲಾಯಿತು. ಸಭೆ ಬಳಿಕ ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕವನ್ನು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದರು.

ಕರ್ನಾಟಕ ಪ್ರಾಥಮಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರುಗಳಾದ ಸುರೇಶ್ ಕುಮಾರ್ ಮತ್ತು ಡಾ. ಕೆ. ಸುಧಾಕರ್ ಅವರು ಎರಡೂ ಇಲಾಖೆ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಗುರುವಾರ ಉನ್ನತ ಮಟ್ಟದ ಸಭೆ ನಡೆಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕ: ಜೂನ್ 14ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ಜೂನ್ 14 ರಿಂದ ಜೂಣನ್ 25ರೊಳಗೆ ಪರೀಕ್ಷೆ ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ವಿಸ್ತೃತ ವೇಳಾಪಟ್ಟಿ ನಂತರ ಪ್ರಕಟಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದರು.

ಫೆಬ್ರವರಿ 01, 2021ರಿಂದ 10, 12 ನೇ‌ ತರಗತಿಗೆ ಸಂಬಂಧಿಸಿದಂತೆ ಹಾಗೂ 9, 11 ನೇ ತರಗತಿಗಳು ಪೂರ್ಣ ದಿನ ನಡೆಯಲಿವೆ. 6-8 ನೇ ತರಗತಿಗಳಿಗೆ ಸಂಬಂಧಿಸಿದಂತೆ ವಿದ್ಯಾಗಮ ಮುಂದುವರೆಯಲಿವೆ.

ಮುಂದಿನ ಫೆಬ್ರುವರಿ 2021ರಲ್ಲಿ ತಾಂತ್ರಿಕ ಸಲಹಾ ಸಮಿತಿ ಇನ್ನೊಮ್ಮೆ ಸಭೆ ಸೇರಿ ಉಳಿದ ತರಗತಿಗಳನ್ನ ಪ್ರಾರಂಭಿಸುವ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುತ್ತದೆ. ಆಫ್ ಲೈನ್/ಆನ್ ಲೈನ್ ಆಯ್ಕೆ‌ ಮುಂದುವರೆಯಲಿದೆ. ಹಾಜರಾತಿ ಕಡ್ಡಾಯವಲ್ಲ ಎಂದು ಸಚಿವರು ಹೇಳಿದರು.

English summary
Karnataka: Secondary School Leaving Certificate (SSLC) exams to take place between June 14 and June 25, says Primary and Secondary Education Minister S Suresh Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X