SSLC Maths Exam: ಎಸ್ಎಸ್ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ

ಬೆಂಗಳೂರು: ರಾಜ್ಯಾದ್ಯಂತ ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಗಣಿತ ವಿಷಯದ ವಾರ್ಷಿಕ ಪರೀಕ್ಷೆಯು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪರೀಕ್ಷೆಯಲ್ಲಿ ಕೇಳಲಾದ ಒಟ್ಟು ಪ್ರಶ್ನೆಗಳ ಪೈಕಿ ಸುಮಾರು 37 ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿವೆ ಅಥವಾ ಅತ್ಯಂತ ಕ್ಲಿಷ್ಟಕರವಾಗಿವೆ ಎಂದು ಗಣಿತ ಶಿಕ್ಷಕರ ಸಂಘ ಮತ್ತು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.

ಕೃಪಾಂಕಕ್ಕೆ ಆಗ್ರಹ

ಈ ಲೋಪದೋಷಗಳಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಕೂಡಲೇ ಈ ವಿಷಯದಲ್ಲಿ ಶಿಕ್ಷಣ ಇಲಾಖೆ ಮಧ್ಯಪ್ರವೇಶಿಸಿ ಕೃಪಾಂಕ (Grace Marks) ನೀಡಬೇಕೆಂದು ಆಗ್ರಹಿಸಿದ್ದಾರೆ. ವರದಿಯ ಪ್ರಕಾರ, ಪ್ರಶ್ನೆಪತ್ರಿಕೆಯಲ್ಲಿ ಸುಮಾರು 16 ಅಂಕಗಳ ಪ್ರಶ್ನೆಗಳು ನಿಗದಿಪಡಿಸಿದ ಪಠ್ಯಕ್ರಮದ ವ್ಯಾಪ್ತಿಯಲ್ಲಿ ಇರಲಿಲ್ಲ ಎಂದು ದೂರಲಾಗಿದೆ. ಇದರ ಜೊತೆಗೆ 21 ಅಂಕಗಳ ಅನ್ವಯಿಕ (Application based) ಪ್ರಶ್ನೆಗಳು ಅತ್ಯಂತ ಕಠಿಣವಾಗಿದ್ದವು, ಇದು ಸಾಮಾನ್ಯ ಮತ್ತು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತರಿಸಲು ಅಸಾಧ್ಯವಾಗಿತ್ತು.

SSLC Maths Exam

ಸಾಮಾನ್ಯವಾಗಿ ಪ್ರಶ್ನೆಪತ್ರಿಕೆಯು ಸುಲಭ, ಮಧ್ಯಮ ಮತ್ತು ಕಠಿಣ ಎಂಬ ಮೂರು ಹಂತಗಳಲ್ಲಿ ಇರಬೇಕು ಎಂಬ ನಿಯಮವಿದ್ದರೂ, ಈ ಬಾರಿ ಕಠಿಣ ಪ್ರಶ್ನೆಗಳ ಪ್ರಮಾಣ ಶೇಕಡಾ 35ಕ್ಕಿಂತ ಹೆಚ್ಚಾಗಿತ್ತು ಎಂಬುದು ಶಿಕ್ಷಕರ ವಾದವಾಗಿದೆ. ಇದರಿಂದ ನೂರಕ್ಕೆ ನೂರು ಅಂಕದ ನಿರೀಕ್ಷೆಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿಗಳೂ ಈಗ ನಿರಾಸೆಗೊಂಡಿದ್ದಾರೆ. ಈ ಸಮಸ್ಯೆಯ ಕುರಿತು ಈಗಾಗಲೇ ಗಣಿತ ಶಿಕ್ಷಕರ ಸಂಘದ ಪದಾಧಿಕಾರಿಗಳು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೆ ಮನವಿ ಸಲ್ಲಿಸಿದ್ದು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅನ್ಯಾಯ ಸರಿಪಡಿಸುವಂತೆ ಕೋರಿದ್ದಾರೆ.

ನಾಳೆ ಸಭೆಯಲ್ಲಿ ಚರ್ಚೆ

ಈ ಹಿನ್ನೆಲೆಯಲ್ಲಿ ಮಾರ್ಚ್ 31ರ ಮಂಗಳವಾರದಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಪರೀಕ್ಷಾ ಮಂಡಳಿ ನಿರ್ದೇಶಕರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೃಪಾಂಕ ನೀಡುವ ಬಗ್ಗೆ ಅಥವಾ ಮೌಲ್ಯಮಾಪನದ ವೇಳೆ ವಿದ್ಯಾರ್ಥಿಗಳಿಗೆ ರಿಯಾಯಿತಿ ನೀಡುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.

ಮತ್ತೊಂದೆಡೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಪಠ್ಯಕ್ರಮದ ಹೊರತಾದ ಯಾವುದೇ ಪ್ರಶ್ನೆಗಳನ್ನು ಕೇಳಲಾಗಿಲ್ಲ ಮತ್ತು ಮೊದಲೇ ನೀಡಲಾಗಿದ್ದ ಮಾದರಿ ಪ್ರಶ್ನೆಪತ್ರಿಕೆ ಹಾಗೂ ನೀಲನಕ್ಷೆಯ ಆಧಾರದ ಮೇಲೆ ಪ್ರಶ್ನೆಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಆದರೆ, ರಾಜ್ಯದ ವಿವಿಧ ಜಿಲ್ಲೆಗಳ ಶಿಕ್ಷಕರು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಇದರಿಂದ ದೊಡ್ಡ ಮಟ್ಟದ ನಷ್ಟವಾಗಲಿದೆ ಎಂದು ಎಚ್ಚರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+