• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಾಲೆ ಆರಂಭಿಸುವ ಕುರಿತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ!

|

ಬೆಂಗಳೂರು, ಡಿ. 02: ಶಾಲಾ-ಕಾಲೇಜುಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕೊನೆಗೂ ಮಹತ್ವದ ನಿರ್ಧಾರಕ್ಕೆ ಬಂದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯದಲ್ಲಿ ತಕ್ಷಣವೇ ಶಾಲಾರಂಭ ಮಾಡಬೇಕೆಂದು ವಿಧಾನಪರಿಷತ್ತಿನ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ಸದಸ್ಯರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬುಧವಾರ ಸಮಗ್ರ ಶಿಕ್ಷಣ-ಕರ್ನಾಟಕ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಜ್ವಲಂತ ಸಮಸ್ಯೆಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸದಸ್ಯರು, ಶಾಲೆಗಳು ಪ್ರಾರಂಭವಾಗದೇ ಇರುವುದರಿಂದ ಗ್ರಾಮೀಣ ಪ್ರದೇಶದ ಅದರಲ್ಲೂ ವಿಶೇಷವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕೆಯ ನಿರಂತರತೆ ತಪ್ಪಿ ಹಲವಾರು ಸಮಸ್ಯೆಗಳಿಗೆ ಕಾರಣವಾಗಿದೆ ಎಂದಿದ್ದಾರೆ.

ವಿದ್ಯಾರ್ಥಿಗಳ ಆನ್‌ಲೈನ್ ಕಲಿಕಾ ಮಟ್ಟ ಅರಿಯುವ 'ವಿದ್ಯಾವಿನ್' ಯೋಜನೆಗೆ ಚಾಲನೆ ವಿದ್ಯಾರ್ಥಿಗಳ ಆನ್‌ಲೈನ್ ಕಲಿಕಾ ಮಟ್ಟ ಅರಿಯುವ 'ವಿದ್ಯಾವಿನ್' ಯೋಜನೆಗೆ ಚಾಲನೆ

ಶಾಲೆಗಳನ್ನು ಅಂದರೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮೊದಲ ಹಂತದಲ್ಲಿ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ತರಗತಿಗಳನ್ನು ಆರಂಭಿಸಬೇಕು. ಶಾಲೆಗಳನ್ನು ಆರಂಭಿಸುವುದರಿಂದ ಪ್ರಸ್ತುತ ಶಿಕ್ಷಣ ಇಲಾಖೆಯ ಮುಂದಿರುವ ಖಾಸಗಿ ಅನುದಾನ ರಹಿತ ಶಿಕ್ಷಕರ ಸಮಸ್ಯೆ ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗಳು ಪರಿಹಾರ ದೊರೆತಂತಾಗುತ್ತದೆ ಎಂದು ವಿಧಾನಪರಿಷತ್ತಿನ ಸದಸ್ಯರು ಅಭಿಪ್ರಾಯಪಟ್ಟರು.

ಮಕ್ಕಳ ಮೇಲೆ ಪರಿಣಾಮ

ಮಕ್ಕಳ ಮೇಲೆ ಪರಿಣಾಮ

ವಿಶೇಷವಾಗಿ ಬಹುಕಾಲ ಮಕ್ಕಳು ಶಾಲೆಯಿಂದ ದೂರ ಉಳಿಯುವುದರಿಂದ ಮಕ್ಕಳ ಭವಿಷ್ಯದ ಮೇಲೆ ದೂರಗಾಮಿ ಪರಿಣಾಮಗಳು ಉಂಟಾಗುವುದರಿಂದ ಶಾಲೆಗಳನ್ನು ತಕ್ಷಣವೇ ಪ್ರಾರಂಭಿಸುವುದು ಉತ್ತಮ ಎಂದು ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಎಂಎಲ್‌ಸಿಗಳು ಒತ್ತಾಯ ಮಾಡಿದರು.

ಬಹುಕಾಲ ಶಾಲೆಯಿಂದ ದೂರ ಉಳಿದರೆ ಮಕ್ಕಳಲ್ಲಿ ನಿರಾಸಕ್ತಿ ಮೂಡುತ್ತದೆ, ಈಗಾಗಲೇ ಖಿನ್ನತೆ ಆರಂಭಿಸಿದೆ, ಮುಂದೆ ಇದರಿಂದ ಅವರ ಕಲಿಕೆಯ ಮೇಲೆ ಪರಿಣಾಮವಾಗಿ ಇನ್ನೊಂದು ಸಮಸ್ಯೆ ಸೃಷ್ಟಿಯಾಗುತ್ತದೆ. ಈಗಾಗಲೇ ಮಕ್ಕಳು ಕೂಲಿ ಕೆಲಸಕ್ಕೆ ಹೋಗುತ್ತಿದ್ದಾರೆ, ಕೆಲವರು ಬಾಲ್ಯವಿವಾಹಕ್ಕೆ ತುತ್ತಾಗಿದ್ದಾರೆ. ಇದು ಇನ್ನೂ ಹಲವಾರು ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಪ್ರತಿಯೊಬ್ಬ ಸದಸ್ಯರು ಅಭಿಪ್ರಾಯಪಟ್ಟರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ತಕ್ಷಣ ಆರಂಭಿಸಿ

ಎಸ್‌ಎಸ್‌ಎಲ್‌ಸಿ, ಪಿಯುಸಿ ತಕ್ಷಣ ಆರಂಭಿಸಿ

ನಾವು ಗ್ರಾಮಾಂತರ ಪ್ರದೇಶದಲ್ಲಿ ಪ್ರತಿದಿನವೂ ಎಲ್ಲ ಚಟುವಟಿಕೆಗಳು ಆರಂಭವಾಗಿರುವುದನ್ನು ನೋಡಿದ್ದೇವೆ. ಮಕ್ಕಳೂ ಸಹ ಗುಂಪುಗುಂಪಾಗಿ ಆಟವಾಡುತ್ತಿದ್ದಾರೆ. ಯಾವ ಸಮಸ್ಯೆಗಳೂ ಉದ್ಭವಿಸಿಲ್ಲ. ಅನ್‌ಲಾಕ್ ಘೋಷಣೆಯಾಗಿ ಎಲ್ಲ ರೀತಿಯ ಚಟುವಟಿಕೆಗಳು ಆರಂಭವಾಗಿದ್ದು, ಶಾಲೆಗಳು ಮಾತ್ರವೇ ಆರಂಭವಾಗಿಲ್ಲ. ಶಾಲೆಗಳನ್ನು ಅದರಲ್ಲೂ 10ನೇ ಮತ್ತು ದ್ವಿತೀಯ ಪಿಯಸಿ ತರಗತಿಗಳನ್ನು ಆರಂಭಿಸಲು ಈ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದರು.


ಸಾಮಾಜಿಕ ಅಂತರ ಕಾಪಾಡಿಕೊಂಡು ಪಾಳಿ ಆಧಾರದಲ್ಲಿ ತರಗತಿಗಳನ್ನು ನಡೆಸಬೇಕು. ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ನಾವು ದೃಶ್ಯ ಮಾಧ್ಯಮಗಳತ್ತ ಹೆಚ್ಚು ಗಮನ ಹರಿಸುವುದಕ್ಕಿಂತ ನಮ್ಮ ಮಕ್ಕಳ ಹಿತವನ್ನು ಗಮನಹರಿಸಬೇಕಿದೆ. ಮಾಧ್ಯಮಗಳು ಶಾಲೆ ಆರಂಭಿಸಿದರೆ ಒಂದು ಸಮಸ್ಯೆ ಹಿಡಿದು ಎಳೆದಾಡುತ್ತಾರೆ, ಶಾಲೆ ಆರಂಭಿಸದಿದ್ದರೆ ಇನ್ನೊಂದು ರೀತಿಯ ಸಮಸ್ಯೆಗಳುಂಟಾಗುತ್ತವೆ ಎಂದು ಜಗ್ಗಾಡುತ್ತಾರೆ. ಅವರ ಅಭಿಪ್ರಾಯಗಳನ್ನು ಎಷ್ಟು ದಿವಸ ಕೇಳಿಕೊಂಡಿರುವುದು ಎಂದು ಪ್ರಶ್ನಿಸಿದ ಸದಸ್ಯರು, ಮಾಧ್ಯಮಗಳ ವರದಿಯನ್ನು ಪಕ್ಕಕ್ಕಿಟ್ಟು ನಮ್ಮ ಮಕ್ಕಳ ಹಿತದೃಷ್ಟಿಯಿಂದ ನಾವು ಶಾಲೆಗಳನ್ನು ಆರಂಭಿಸುವುದು ಒಳ್ಳೆಯದು ಎಂದು ಅಭಿಪ್ರಾಯಪಟ್ಟರು.

ಕಾಲಹರಣ ಮಾಡದೆ ಶಾಲೆ ಆರಂಭಿಸಿ

ಕಾಲಹರಣ ಮಾಡದೆ ಶಾಲೆ ಆರಂಭಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಇನ್ನೂ ಕಾಲಹರಣ ಮಾಡದೇ ಶಾಲೆಗಳನ್ನು ಆರಂಭಿಸುವುದು ಎಲ್ಲ ದೃಷ್ಟಿಯಿಂದಲೂ ಉತ್ತಮ. ತಮ್ಮೊಂದಿಗೆ ಮತ್ತು ಶಾಲೆ ಆರಂಭಿಸುವ ಸರ್ಕಾರದ ನಿರ್ಧಾರದೊಂದಿಗೆ ನಾವೆಲ್ಲ ಇದ್ದೇವೆ. ನೀವು ಶಾಲೆ ಆರಂಭಿಸಿ ಎಂದು ಎಲ್ಲ ಸದಸ್ಯರು ಶಿಕ್ಷಣ ಸಚಿವರಿಗೆ ಅಭಯ ನೀಡಿದರು.


10 ಮತ್ತು 12ನೇ ತರಗತಿಗಳನ್ನು ಶೀಘ್ರವೇ ಆರಂಭಿಸಬೇಕು. ವಿದ್ಯಾಗಮದಂತಹ ಕಾರ್ಯಕ್ರಮ ನಿಲ್ಲಿಸಿದ್ದು ಸರ್ವಥಾ ಸರಿಯಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ನಿಜಕ್ಕೂ ತುಂಬಾ ತೊಂದರೆಯಾಗಿದೆ. ಈ ವಿದ್ಯಾಗಮ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಬೇಕೆಂದು ಒತ್ತಾಯಿಸಿದ ಸದಸ್ಯರು ಶಾಲಾರಂಭದ ನಂತರ ಉಳಿಕೆಯ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಪಠ್ಯ ಕಡಿತ ಮಾಡಬೇಕೆಂದು ಸಲಹೆ ನೀಡಿದರು.

ಮೊದಲು ಎಸ್‌ಎಸ್ಎಲ್‌ಸಿ, ಪಿಯುಸಿ ಆರಂಭ

ಮೊದಲು ಎಸ್‌ಎಸ್ಎಲ್‌ಸಿ, ಪಿಯುಸಿ ಆರಂಭ

ಎಲ್ಲ ಸದಸ್ಯರ ಅಭಿಪ್ರಾಯಗಳನ್ನು ಆಲಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಸದಸ್ಯರು ಒಕ್ಕೊರಲಿನ ಅಭಿಪ್ರಾಯವನ್ನು ನಾನು ಗಮನಿಸಿದ್ದು, ಈ ಕುರಿತಂತೆ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಪಡೆದು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಆರಂಭಿಸುವ ಕುರಿತಂತೆ ನಿರ್ಣಯಕ್ಕೆ ಬರಲಾಗುವುದು ಎಂದು ಹೇಳಿದರು.


ಕೋವಿಡ್ ನಂತರ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಕಲಿಕಾ ನಿರಂತರತೆಗೆ ಕೈಗೊಂಡ ಕ್ರಮಗಳನ್ನು ವಿವರಿಸಿದ ಸುರೇಶ್ ಕುಮಾರ್, ಶಾಲೆ ಆರಂಭಗೊಂಡ ನಂತರ ಪಿಯು ತರಗತಿಗಳ ಪಠ್ಯವನ್ನು ಎನ್.ಸಿ.ಇ.ಆರ್.ಟಿ ನಿಗದಿಪಡಿಸಿದ ಪಠ್ಯಕ್ರಮಗಳಂತೆ ಕಡಿತ ಮಾಡಲಾಗಿದೆ ಎಂದರು.

ಶಿಕ್ಷಕ‌ ಸ್ನೇಹಿ‌ ವರ್ಗಾವಣೆ

ಶಿಕ್ಷಕ‌ ಸ್ನೇಹಿ‌ ವರ್ಗಾವಣೆ

ಈಗಾಗಲೇ ಪ್ರಾರಂಭವಾಗಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಎದುರಿಸಲಾಗುತ್ತಿರುವ ಕೆಲವು ಪ್ರಾಯೋಗಿಕ ಸಮಸ್ಯೆಗಳನ್ನು ಸರಿಪಡಿಸುವುದಲ್ಲದೇ ಕಡ್ಡಾಯ, ಹೆಚ್ಚುವರಿ ವರ್ಗಾವಣೆಯಾದ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಲಾಗಿದೆ. ಈ ಬಾರಿ ವರ್ಗಾವಣೆ ಮಿತಿಯನ್ನು ಶೇ. 15ಕ್ಕೆ ಹೆಚ್ಚಿಸಿರುವುದರಿಂದ ಬಹುಪಾಲು ಶಿಕ್ಷಕರಿಗೆ ವರ್ಗಾವಣೆ ಅವಕಾಶಗಳಿವೆ ಎಂದು ಸಚಿವರು ಹೇಳಿದರು.

  Atulya Ganga : ಗಂಗೆಯನ್ನು ಶುದ್ಧಗೊಳಿಸಲು ನಿವೃತ್ತ ಸೈನಿಕರ ಮಹಾ ಯೋಜನೆ | Oneindia Kannada
  ಸಿಆರ್‌ಪಿ, ಬಿಆರ್‌ಪಿಗಳಿಗೂ ಅವಕಾಶ

  ಸಿಆರ್‌ಪಿ, ಬಿಆರ್‌ಪಿಗಳಿಗೂ ಅವಕಾಶ

  ಸಿ.ಆರ್.ಪಿ ಮತ್ತು ಬಿ.ಆರ್.ಪಿ ಶಿಕ್ಷಕರಿಗೆ ವರ್ಗಾವಣಾ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯ ವರ್ಗಾವಣಾ ವ್ಯಾಪ್ತಿಯಲ್ಲಿ ಬಂದ ಮುಖ್ಯೋಪಾಧ್ಯಾಯರಿಗೆ ಮತ್ತು ಪದವಿ ಪೂರ್ವ ಉಪನ್ಯಾಸಕರಿಗೂ ಈ ಬಾರಿ ಆದ್ಯತೆಯ ವರ್ಗಾವಣೆಗೆ ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಭರವಸೆ ನೀಡಿದ್ದಾರೆ.

  English summary
  Primary Education Minister S. Suresh Kumar said he would get the opinion of the State Covid Technical Advisory Committee and decide on starting SSLC and Secondary PU classes. Know more,
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X