ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC ಫಲಿತಾಂಶ: ಮಕ್ಕಳ ಮಾನಸಿಕ ಒತ್ತಡ ನಿವಾರಣೆಗೆ ಸಹಾಯವಾಣಿ ಆರಂಭ

|
Google Oneindia Kannada News

ಬೆಂಗಳೂರು, ಮೇ 18: ರಾಜ್ಯದಲ್ಲಿ ಮೇ 19ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಹಾಯವಾಣಿಯನ್ನು ಪ್ರಾರಂಭಿಸಿದೆ. ಫಲಿತಾಂಶ ಬಂದ ನಂತರ ಮಕ್ಕಳ ಒತ್ತಡ ನಿವಾರಿಸುವ ಸಂಬಂಧ ಇದೇ ಮೊದಲ ಬಾರಿಗೆ ಸಹಾಯವಾಣಿಯನ್ನು ಆರಂಭಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಟೆಲಿ ಕೌನ್ಸಿಲಿಂಗ್ ಒದಗಿಸಲಾಗುತ್ತದೆ. ಒತ್ತಡದಲ್ಲಿರುವ ವಿದ್ಯಾರ್ಥಿಗಳು 080-46110007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.

Karnataka SSLC Result 2022: ಫಲಿತಾಂಶ ನೋಡುವುದು ಹೇಗೆ? Karnataka SSLC Result 2022: ಫಲಿತಾಂಶ ನೋಡುವುದು ಹೇಗೆ?

ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ:

"ಜೀವನದಲ್ಲಿ ಸೋಲು, ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಸೋತವನು ಮತ್ತೊಮ್ಮೆ ಗೆದ್ದೆಗೆಲ್ಲುತ್ತಾನೆ. ಹೀಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು ಏನೇ ಬಂದರೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು," ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

SSLC Result 2022: Mental health helpline started

ಎಸ್ಸೆಎಸ್ಸೆಲ್ಸಿ ಫಲಿತಾಂಶದ ಕುರಿತಾಗಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿರುವ ಸಚಿವರು, "ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷೆಯಲ್ಲಿದ್ದಾರೆ. ಫಲಿತಾಂಶಗಳು ಅಂದುಕೊಂಡ ಹಾಗೇ ಬರಲಿ, ಬಾರದೇ ಇರಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು. ಫಲಿತಾಂಶ ಜೀವನದ ಅಂತ್ಯವಲ್ಲ. ಆರಂಭವೂ ಅಲ್ಲ. ಅದು ಶೈಕ್ಷಣಿಕ ಜೀವನದ ಒಂದು ಪ್ರಕ್ರಿಯೆ," ಎಂದು ಹೇಳಿದರು.

SSLC Result 2022: Mental health helpline started

ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕೆ ಎದುರು ನೋಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಆಲ್ ದ ಬೆಸ್ಟ್. ಸೋಲು ಗೆಲುವು ಎರಡೂ ಜೀವನದ ಭಾಗ. ಧೃತಿಗೆಡದೆ ಆತ್ಮವಿಶ್ವಾಸದಿಂದ ಮುನ್ನುಗ್ಗಿ. ಪರೀಕ್ಷೆ ಫಲಿತಾಂಶವೇ ಅಂತ್ಯವಲ್ಲ, ನಿರ್ಣಾಯಕವಲ್ಲ. ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ಶುಭ ಹಾರೈಕೆಗಳು. ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದು ಸಚಿವರು ಶುಭ ಹಾರೈಸಿದ್ದಾರೆ.

English summary
SSLC Result 2022 on May 19th: For the first time in history, SSLC students in Karnataka get mental health helpline to cope with result stress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X