SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೇಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅದ್ಭುತ ಸಾಧನೆ
Karnataka SSLC Result 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಾರ್ಚ್ 25 ಮತ್ತು ಏಪ್ರಿಲ್ 6ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿದ್ದು, ಇಂದು (ಮೇ 09) ಫಲಿತಾಂಶ ಪ್ರಕಟವಾಗಿದೆ. ಹಾಗಾದರೆ ಈ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮೈಲುಗೈ ಸಾಧಿಸಿದ್ದಾರಾ ಅಥವಾ ನಗರ ಪ್ರದೇಶ ವಿದ್ಯಾರ್ಥಿಗಳಾ? ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದಲ್ಲಿ ಈ ಬಾರಿ 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆ 2024ರ ಫಲಿತಾಂಶದಲ್ಲಿ ನಗರ ಪ್ರದೇಶದ 3.59 ಲಕ್ಷ ಮಂದಿ ಅಂದರೆ ಶೇಕಡ 72.83 ವಿದ್ಯಾರ್ಥಿಗಳು, ಗ್ರಾಮೀಣ ಪ್ರದೇಶದ ಶೇಕಡ 74.17ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಈ ಬಾರಿ ಮೈಲುಗೈ ಸಾಧಿಸಿದ್ದಾರೆ.
ಸರ್ಕಾರಿ ಶಾಲೆಯ 2.43 ಲಕ್ಷ ಮಂದಿ ಅಂದರೆ ಶೇಕಡಾ 72.46 ವಿದ್ಯಾರ್ಥಿಗಳು, ಅನುದಾನಿತ ಶಾಲೆಯ 1.50 ಲಕ್ಷ ಮಂದಿ ಅಂದರೆ ಶೇಕಡಾ 72.22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನುದಾನರಹಿತ ಶಿಕ್ಷಣ ಸಂಸ್ಥೆಗಳ 2.23 ಲಕ್ಷ ವಿದ್ಯಾರ್ಥಿಗಳು ಅಂದರೆ ಶೇಕಡಾ 86.46 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಪರಿಶೀಲನೆ ಮಡಬಹುದಾಗಿದೆ. ಇನ್ನು ಮಾರ್ಚ್ 25ರಿಂದ ಏಪ್ರಿಲ್ 6ರವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಇದೀಗ ಇಂದು (ಮೇ 09) ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.
ಮತ್ತೊಂದೆಡೆ ಈ ಬಾರಿ 3 ಸರ್ಕಾರಿ ಶಾಲೆಗಳು ಶೂನ್ಯ ಫಲಿತಾಂಶ ಪಡೆದಿದ್ದು, 13 ಅನುದಾನಿತ ಮತ್ತು 62 ಅನುದಾನರಹಿತ ಶಾಲೆಗಳು ಶೂನ್ಯ ಫಲಿತಾಂಶ ಪಡೆದಿವೆ ಎಂದು ತಿಳಿದುಬಂದಿದೆ. 785 ಸರ್ಕಾರಿ ಶಾಲೆಗಳು ಶೇಕಡ 100 ಫಲಿತಾಂಶ, 206 ಅನುದಾನಿತ ಮತ್ತು 1297 ಅನುದಾನರಹಿತ ಶಾಲೆಗಳು ಶೇಕಡ 100 ಫಲಿತಾಂಶ ಪಡೆದಿವೆ ಎಂದು ತಿಳಿದುಬಂದಿದೆ.












Click it and Unblock the Notifications