SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಯಾವಾಗ? ಪರಿಶೀಲಿಸುವುದೇಗೆ?-ಮಾಹಿತಿ, ವಿವರ
SSLC Result 2024: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) 2024ರ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಯಾವಾಗ ಬಿಡುಗಡೆ ಮಾಡುತ್ತದೆ ಎನ್ನುವ ಮಾಹಿತಿನ್ನು ಇಲ್ಲಿ ತಿಳಿಯಿರಿ.
ಕೆಎಸ್‌ಇಎಬಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮೇ ನಲ್ಲಿ ತಾತ್ಕಾಲಿಕವಾಗಿ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಈ ವಾರ ಅಥವಾ ಮೇ ಮೊದಲ ವಾರದಲ್ಲಿ ಪ್ರಕಟ ಆಗಲಿದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ.

ಏಪ್ರಿಲ್ 15ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಸುಮಾರು 20 ದಿನಗಳಲ್ಲಿ ಮೌಲ್ಯಮಾಪನ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಆದಷ್ಟು ಬೇಗ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳನಲಿದೆ. ಇನ್ನು ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದ ಮಂಜುಳಾ ಅವರು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kseab.karnataka.gov.in ಮತ್ತು karresults.nic.in ಗೆ ಭೇಟಿ ನೀಡಿ ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೂಮೂದಿಸುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.












Click it and Unblock the Notifications