SSLC Result 2025: ಎಸ್ಎಸ್ಎಲ್ಸಿ ಪರೀಕ್ಷೆ ಪಾಸಾಗಬೇಕಿದ್ದರೆ ಇಷ್ಟೇ ಅಂಕ ಸಾಕು: ಗ್ರೇಸ್‌ ಮಾರ್ಕ್ಸ್‌ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್‌ 22: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಮಾರ್ಚ್ 21 ರಿಂದ ಪ್ರಾರಂಭವಾಗಿ ಏಪ್ರಿಲ್ 4, ರವರೆಗೆ ನಡೆದು ಮುಕ್ತಾಯಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗರಾಪ್ಪ ಹೇಳಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್ ಪೂರ್ವದ ದಿನಗಳಲ್ಲಿ ಜಾರಿಯಲ್ಲಿದ್ದ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತಂದಿದೆ. ಈ ವರ್ಷ ಎಸ್‌ ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದ್ದರೆ ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್ ಪೂರ್ವದ ದಿನಗಳಲ್ಲಿ ಜಾರಿಯಲ್ಲಿದ್ದ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತಂದಿದೆ.

SSLC Result Scoring 35 percent marks must to pass this year Says Madhu Bangarappa

ಈ ವರ್ಷ ಎಸ್‌ಎಸ್‌ಎಲ್‌ಪಿ ಪರೀಕ್ಷೆಯಲ್ಲಿ ಪಾಸ್‌ ಆಗಲು ಶೇಕಡಾ 35 ಅಂಕಗಳನ್ನ ಗಳಿಸುವುದು ಕಡ್ಡಾಯವಾಗಿದ್ದು, ಈ ವರ್ಷ ಯಾವುದೇ ಗ್ರೇಸ್ ಮಾರ್ಕ್ಸ್ ನೀಡಲಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟ ಪಡಿಸಿದ್ದಾರೆ. ಕಳೆದ ವರ್ಷ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಬಡ್ತಿ ಪಡೆಯಲು ಸಹಾಯ ಮಾಡುವುದಕ್ಕಾಗಿ ಮಂಡಳಿಯು ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇಕಡಾ 25 ಕ್ಕೆ ಇಳಿಕೆ ಮಾಡಿತ್ತು ಮತ್ತು ಗ್ರೇಸ್ ಮಾರ್ಕ್ಗಳನ್ನು ನೀಡಿತ್ತು. ಆದರೆ, ಈ ಬಾರಿ ಗ್ರೇಸ್‌ ಮಾರ್ಕ್ಸ್‌ ಇರುವುದಿಲ್ಲ.

ಈ ವರ್ಷ ಯಾವುದೇ ಗ್ರೇಸ್ ಅಂಕಗಳು ಇರುವುದಿಲ್ಲ ಮತ್ತು ಪಾಸಿಂಗ್ ಅಂಕಗಳನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ. ವೆಬ್‌ಕಾಸ್ಟಿಂಗ್‌ನಂತಹ ಹೊಸ ಕ್ರಮಗಳನ್ನು ಪರಿಚಯಿಸಿದ್ದರಿಂದ ಕಳೆದ ವರ್ಷ ಫಲಿತಾಂಶದ ಮೇಲೆ ಪರಿಣಾಮ ಬೀರಿತ್ತು. ಹಾಗಾಗಿ ಪಾಸಿಂಗ್ ಅಂಕವನ್ನು ಶೇಕಡಾ 25 ಕ್ಕೆ ಇಳಿಕೆ ಮಾಡಬೇಕಾಗಿ ಬಂದಿತ್ತು. ಆ ವ್ಯವಸ್ಥೆ ಈ ವರ್ಷ ಇರುವುದಿಲ್ಲ ಮತ್ತು ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 21 ರಿಂದ ಪರೀಕ್ಷೆ ಆರಂಭವಾಗಿ ಏಪ್ರಿಲ್ 4 ರವರೆಗೆ ನಡೆದಿದೆ. ರಾಜ್ಯಾದ್ಯಂತ 15,881 ಪ್ರೌಢಶಾಲೆಗಳಿಂದ 4,61,563 ಬಾಲಕರು ಮತ್ತು 4,34,884 ಬಾಲಕಿಯರು ಸೇರಿದಂತೆ ಒಟ್ಟು 8,96,447 ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು ಎಂದು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+