SSLC Result 2025: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಕಂಪ್ಲೀಟ್ ಮಾಹಿತಿ ಇಲ್ಲಿದೆ
ಬೆಂಗಳೂರು, ಮೇ 01: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ(SSLC) ಪರೀಕ್ಷೆ-1 ಅನ್ನು ಮಾರ್ಚ್ 21ರಿಂದ ಏಪ್ರಿಲ್ 04 ರವರೆಗೆ ಯಶಸ್ವಿಯಾಗಿ ರಾಜ್ಯದಾದ್ಯಂತ ನಡೆಸಿದೆ. ಈ ಪರೀಕ್ಷೆ ಬರೆದ ಎಂಟು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶ ಯಾವಾಗ ಬರುತ್ತೆ ಎಂದು ಕಾದುಕುಳಿತಿದ್ದಾರೆ. ಪರೀಕ್ಷೆ ಫಲಿತಾಂಶ ಯಾವಾಗ ಎಂದು ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಇದೀಗ ಉತ್ತರ ಸಿಕ್ಕಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ 2025 ರ ಫಲಿತಾಂಶವನ್ನು ಮೇ ಮೊದಲನೇ ವಾರದಲ್ಲೇ ಬಿಡುಗಡೆ ಮಾಡುವ ಎಲ್ಲ ಸಾಧ್ಯತೆಗಳು ಇವೆ. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಕೆಲವು ತಾಂತ್ರಿಕ ಕೆಲಸಗಳು, ಸಾಫ್ಟ್‌ವೇರ್‌ನಲ್ಲಿ ಅಂಕಗಳನ್ನು ಅಪ್‌ಲೋಡ್ ಮಾಡುವ ಇತರೆ ಕಾರ್ಯಗಳು ನಡೆಯುತ್ತಿವೆ. ಒಂದೆರಡು ದಿನಗಳಲ್ಲಿ ಆ ಕೆಲಸ ಕೂಡ ಮುಗಿಯಲಿವೆ ಎಂದು ಈ ಹಿಂದೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಇನ್ನೂ ಕಳೆದ ವರ್ಷ ಮೊದಲ ಬಾರಿಗೆ ಶಿಕ್ಷಣ ಇಲಾಖೆ ವೆಬ್‌ಕ್ಯಾಸ್ಟಿಂಗ್ ವ್ಯವಸ್ಥೆ ಜಾರಿ ಮಾಡಿತ್ತು. ಫಲಿತಾಂಶ ಕುಸಿತವಾದ ಹಿನ್ನೆಲೆಯಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇ.25ಕ್ಕೆ ಇಳಿಸಲಾಗಿತ್ತು.ಆದರೆ, ಈ ವರ್ಷ ಪ್ರಥಮ ಭಾಷೆಯಲ್ಲಿ 35 ಅಂಕ ಹಾಗೂ ಇತರ ವಿಷಯಗಳಲ್ಲಿ ಕನಿಷ್ಠ 28 ಅಂಕ ಮತ್ತು ಅಂತರಿಕ ಅಂಕಗಳು ಸೇರಿ ಒಟ್ಟು 35 ಅಂಕಗಳನ್ನು ಪಡೆದಿರಬೇಕು ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ನಲ್ಲಿ ಪ್ರಸಕ್ತ ಸಾಲಿನಲ್ಲಿ 15,881 ಶಾಲೆಗಳಲ್ಲಿ ಒಟ್ಟು 8,42,817 ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ್ದಾರೆ. 38,091 ಪುನರಾವರ್ತಿತ ಮತ್ತು 15,539 ಖಾಸಗಿ ಸೇರಿ 8,96,447 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. 3,35,468 ಬಾಲಕರು, 3,78,389 ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ. 2,818 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬಹಳ ದೊಡ್ಡ ತಿರುವು. ಈಗಾಗಲೇ ರಾಜ್ಯದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು, ಪೋಷಕರು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ಇಂದು (ಶುಕ್ರವಾರ) ಕರ್ನಾಟಕ ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶ ಪ್ರಕಟ ಮಾಡುವುದಾಗಿ ಅಧಿಕೃತ ಮಾಹಿತಿಯನ್ನ ತಿಳಿಸಿದೆ.
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ನಂತರ ಮಧ್ಯಾಹ್ನ 12-30 ಗಂಟೆಯ ನಂತರ SSLC ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
-
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications