ಮೇ 7ಕ್ಕೆ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2018

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 06: ಮುಂದಿನ ತಿಂಗಳು ಮೇ 7ಕ್ಕೆ ಇಂಟರ್‌ನೆಟ್‌ನಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದು (ಏಪ್ರಿಲ್ 06) ಮುಕ್ತಾಯವಾದ ಕಾರಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆ ನಡೆದ ರೀತಿಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದರು.

ಸಿಬಿಎಸ್‌ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಇಲ್ಲ

ಮೇ 7ಕ್ಕೆ ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗುತ್ತದೆ, ಮೇ8ಕ್ಕೆ ಶಾಲೆಗಳಲ್ಲಿ ಫಲಿತಾಂಶದ ಪ್ರಕಟಿಸಲಾಗುತ್ತದೆ ಹಾಗೂ ಅಂದೇ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಶ್ನೆ ಪತ್ರಿಕೆ ಕೀ ಉತ್ತರವನ್ನು ಬಿಡುಗಡೆ ಮಾಡಲಾಗುತ್ತದೆ ಎಂದರು.

SSLC result will be out on May 7th

ಮೇ 8 ರಿಂದ 10ರ ವರೆಗೂ ಕೀ ಉತ್ತರ, ಪ್ರಶ್ನೆ ಪತ್ರಿಕೆ, ಫಲಿತಾಂಶಗಳ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇದೆ ಎಂದು ಅವರು ಮಾಹಿತಿ ನಿಡಿದರು.

ಈ ಬಾರಿ ಪರೀಕ್ಷೆಯು ಶಿಸ್ತುಬದ್ಧವಾಗಿ ನಡೆದಿದ್ದು, ಮುಂದಿನ ಬಾರಿ ಮಂಡಳಿ ವತಿಯಿಂದಲೇ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳನ್ನು ನಡೆಸುವ ಉದ್ದೇಶ ಇದೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka SSLC results 2018 will be out on May 7th through the internet said state education minister Tanveer Sait. He said May 8 will release Key answers and May 10th will be last date for file objections.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ