ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಎಸ್ಎಲ್ ಸಿ ಫಲಿತಾಂಶ ತಿಳಿಯುವ ಬಗ್ಗೆ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

|
Google Oneindia Kannada News

ಬೆಂಗಳೂರು, ಆಗಸ್ಟ್.10: ಕೊರೊನಾವೈರಸ್ ಸೋಂಕು ಹರಡುವಿಕೆಯ ಸವಾಲಿನ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ಬರೆದ ವಿದ್ಯಾರ್ಥಿಗಳ ಭವಿಷ್ಯ ಸೋಮವಾರ ನಿರ್ಧಾರವಾಗಲಿದೆ. 2020ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶವು ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.

Recommended Video

Mumbai ಮಳೆಯಲ್ಲಿ ರಸ್ತೆ ನಡುವೆ ನಿಂತು ಮಾನವೀಯತೆ ಮೆರೆದ ಮಹಿಳೆ | Oneindia Kannada

ಮಧ್ಯಾಹ್ನ 3 ಗಂಟೆಯ ನಂತರ ಸರ್ಕಾರ ಅಧಿಕೃತ ವೆಬ್ ಸೈಟ್ ಗಳಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ಪಡೆಯುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೇ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ಪ್ರತಿಯೊಬ್ಬ ವಿದ್ಯಾರ್ಥಿಯ ಮೊಬೈಲ್ ಸಂಖ್ಯೆಗೆ ಫಲಿತಾಂಶವನ್ನು ಎಸ್ಎಂಎಸ್ ಮೂಲಕ ರವಾನಿಸಲಾಗುತ್ತದೆ.

ಸೋಮವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಸುರೇಶ್‌ ಕುಮಾರ್ಸೋಮವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಸುರೇಶ್‌ ಕುಮಾರ್

ಕಳೆದ ಜೂನ್. 25 ರಿಂದ ಜುಲೈ. 3ರವರೆಗೆ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು. ಅದಾದ ಬಳಿಕ ಮೌಲ್ಯಮಾಪನ ಆರಂಭಿಸಲಾಗಿದ್ದು, ರಾಜ್ಯಾದ್ಯಂತ ಒಟ್ಟು 7.5 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು.

SSLC Results-2020 Announced On August.10: Here Details

ಈ ಬಾರಿ 7,43,477 ಸಾಮಾನ್ಯ ವಿದ್ಯಾರ್ಥಿಗಳು ಹಾಗೂ 20,857 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕಂಟೈನ್ಮೆಂಟ್ ಪ್ರದೇಶಗಳ 3911 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದರು. ಕೋವಿಡ್-19 ಹೊರತುಪಡಿಸಿ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 863 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಈ ಸರ್ಕಾರಿ ವೆಬ್ ಸೈಟ್ ಗಳಲ್ಲಿ ಎಸ್ಎಸ್ಎಲ್ ಸಿ ಫಲಿತಾಂಶ ಲಭ್ಯ:

www.karresults.nic.in

www.kseeb.kar.nic.in

English summary
SSLC Results-2020 Announced On August.10: Here Details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X