ಎಸ್‌ಎಸ್ಎಲ್‌ಸಿ ಫಲಿತಾಂಶ: ಬಿಬಿಎಂಪಿಯಿಂದ 25 ಸಾವಿರ ಪ್ರೋತ್ಸಾಹ ಧನ
ಬೆಂಗಳೂರು, ಮೇ20: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(ಬಿಬಿಎಂಪಿ) ವಿದ್ಯಾ ಇಲಾಖೆಯಲ್ಲಿ ಒಟ್ಟು 33 ಪ್ರೌಢಶಾಲೆಗಳಿದ್ದು, 2021-2ನೇ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 1,991 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 1,419 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 71 ರಷ್ಟು ಫಲಿತಾಂಶ ಬಂದಿದೆ. ಈ ಪೈಕಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 144 ವಿದ್ಯಾರ್ಥಿಗಳಿಗೆ 25,000 ರೂ. ಪ್ರೋತ್ಸಾಹ ಧನ ನೀಡಿದೆ.
ಉಜ್ವಲ.ಎಂ.ಸಿ 625ಕ್ಕೆ 616 ಅಂಕಗಳಿಕೆ
ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 1,991 ವಿದ್ಯಾರ್ಥಿಗಳ ಪೈಕಿ 742 ಗಂಡು ಮಕ್ಕಳಲ್ಲಿ 41 ಹಾಗೂ 1,249 ಹೆಣ್ಣು ಮಕ್ಕಳಲ್ಲಿ 103 ವಿದ್ಯಾರ್ಥಿಗಳು ಸೇರಿದಂತೆ 144 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ ಬಿಬಿಎಂಪಿ ಶ್ರೀರಾಮಪುರ ಬಾಲಕಿಯರ ಪ್ರೌಢಶಾಲೆಗಳಲ್ಲಿ ಉಜ್ವಲ.ಎಂ.ಸಿ ಎಂಬ ವಿದ್ಯಾರ್ಥಿನಿಯು 625ಕ್ಕೆ 616 ಅಂಕಗಳನ್ನು ಪಡೆದು ಪಾಲಿಕೆ ಪ್ರೌಢಶಾಲೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಅಗ್ರಸ್ಥಾನ ಪಡೆದುಕೊಂಡಿರುತ್ತಾರೆ.
ಪಾಲಿಕೆಯ ಶಾಂತಿನಗರ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶ
ಪಾಲಿಕೆಯ ಶಾಂತಿನಗರ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶವನ್ನು ನೀಡಿ ಮೊದಲ ಸ್ಥಾನ, ಭೈರವೇಶ್ವರ ನಗರ ಪ್ರೌಢಶಾಲೆಯು ಶೇ. 91.52 ರಷ್ಟು ಫಲಿತಾಂಶವನ್ನು ನೀಡಿ ಎರಡನೇ ಸ್ಥಾನ, ಹೇರೋಹಳ್ಳಿ ಪ್ರೌಢಶಾಲೆಯು ಶೇ. 90.12 ರಷ್ಟು ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿರುತ್ತದೆ. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 144 ವಿದ್ಯಾರ್ಥಿಗಳಿಗೂ ಪಾಲಿಕೆ ವತಿಯಿಂದ ತಲಾ 25,000 ರೂ. ಗಳ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುತ್ತದೆ ಎಂದು ಪಾಲಿಕೆಯ ವಿದ್ಯಾ ಇಲಾಖೆಯು ತಿಳಿಸಿರುತ್ತದೆ.

ಆಯುಕ್ತ, ಆಡಳಿತಾಧಿಕಾರಿಯಿಂದ ಅಭಿನಂದನೆ:
ಬಿಬಿಎಂಪಿಯ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬಿಬಿಎಂಪಿ ಶಿಕ್ಷಣ ಇಲಾಖೆಯಲ್ಲಿ ಒಟ್ಟು 33 ಪ್ರೌಢಶಾಲೆಗಳಿದ್ದು, 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ. 71.27 ರಷ್ಟು ಫಲಿತಾಂಶ ಬಂದಿರುತ್ತದೆ. ಈ ಉನ್ನತ ಸಾಧನೆಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮತ್ತು ಅಧಿಕಾರಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವಿಟ್ ಮಾಡಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಶುಭಕೋರಿದ್ದಾರೆ.

Recommended Video
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications