• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಸ್ಎಸ್ಎಲ್‌ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಶುಭಾಶಯ

|
Google Oneindia Kannada News

ಬೆಂಗಳೂರು ಮೇ 19: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಭಿನಂದಿಸಿದ್ದಾರೆ. ಇಂದು ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು ವಿದ್ಯಾರ್ಥಿಗಳು ಕಳೆದ ಹತ್ತು ವರ್ಷಗಳಲ್ಲಿ ಗರಿಷ್ಠ ಫಲಿತಾಂಶ 85.63 %ನ್ನು ಸಾಧಿಸಿದ್ದು ಹೆಮ್ಮೆಯ ಸಂಗತಿ ಎಂದಿದ್ದಾರೆ.

"ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯವು, ಕಳೆದ ಹತ್ತು ವರ್ಷಗಳಲ್ಲಿ ಗರಿಷ್ಠ ಫಲಿತಾಂಶ 85.63 %ನ್ನು ಸಾಧಿಸಿದ್ದು ಹೆಮ್ಮೆಯ ಸಂಗತಿ. ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಎಲ್ಲ ವಿದ್ಯಾರ್ಥಿ ವೃಂದಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಈ ಮಹತ್ಸಾಧನೆಗೆ ಕಾರಣರಾದ ಎಲ್ಲ ಶಿಕ್ಷಕ-ಶಿಕ್ಷಕಿಯರು, ತರಬೇತುದಾರರು ಅಭಿನಂದನಾರ್ಹರು. ವಿದ್ಯಾರ್ಥಿಗಳ ವಿಜಯ ಯಾತ್ರೆ ಹೀಗೆ ಮುಂದುವರಿಯಲಿ, ನಾಡಿಗೆ ಕೀರ್ತಿ ತರುವಂತಾಗಲಿ. ಅನುತ್ತೀರ್ಣರಾದ ವಿದ್ಯಾರ್ಥಿಗಳು ನಿರಾಸೆ ಹೊಂದದೇ ಮುಂದಿನ ಭಾರಿ ಮತ್ತಷ್ಟು ಪರಿಶ್ರಮದಿಂದ ಪರೀಕ್ಷೆ ಬರೆದು ಯಶಸ್ವಿಯಾಗಿ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ನೋಡುವುದು ಹೇಗೆ?ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ನೋಡುವುದು ಹೇಗೆ?

ಬಹು ನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕವಾಗಿದ್ದು ಈ ಬಾರಿಯೂ ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಉತ್ತೀರ್ಣ ಪ್ರಮಾಣ ಶೇ.85.63ರಷ್ಟು ಇದೆ.ಉತ್ತೀರ್ಣ ಪ್ರಮಾಣ ಬಾಲಕಿಯರು- ಶೇ. 90.29 ಮತ್ತು ಬಾಲಕರು ಬಾಲಕರು- ಶೇ. 81.30 ಇದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆಸಿ ಮಾಧ್ಯಮಗೋಷ್ಠಿಯಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.ಪೂರಕ ಪರೀಕ್ಷೆಗಳು ಜೂನ್ 27, 2022 ರಂದು ನಡೆಯುತ್ತದೆ.

English summary
Karnataka SSLC Results 2022: CM Basavaraj Bommai congratulate students says Best Result in 10 years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X