SSLC Results 2023: ಜಿಲ್ಲಾವಾರು ಎಸ್‌ಎಸ್‌ಎಲ್‌ಸಿ ಫಲಿತಾಂಶದ ವಿವರ; ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?
2023ರ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು (ಸೋಮವಾರ, ಮೇ 8) ಪ್ರಕಟವಾಗಿದ್ದು, ಈ ಬಾರಿ ಶೇಕಡಾ 83.89 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅಲ್ಲದೇ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ರಾಮನಾಥ್ ಮಾತನಾಡಿ, ಶೇಕಡಾ 83.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

2022-23ನೇ ಸಾಲಿನಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳ ಹಾಜರಾಗಿದ್ದರು. ಅದರಲ್ಲಿ 7,00,619 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಬಾರಿ ಗ್ರಾಮೀಣ ಭಾಗದಲ್ಲಿ ಶೇ.87ರಷ್ಟು ಮತ್ತು ನಗರ ಪ್ರದೇಶದಲ್ಲಿ ಶೇ.79ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ ಮಕ್ಕಳಿಗಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶೇಕಡಾ 86.74 ಫಲಿತಾಂಶ ಬಂದಿದ್ದರೆ, ಅನುದಾನ ರಹಿತ ಶಾಲೆಗಳಲ್ಲಿ ಶೇ.90.89 ಫಲಿತಾಂಶ ಬಂದಿದೆ. ಅನುದಾನಿತ ಶಾಲೆಯಲ್ಲಿ ಶೇ.85.64ರಷ್ಟು ಫಲಿತಾಂಶ ಬಂದಿದೆ. 14,983 ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದಿದ್ದಾರೆ.

ನಾಲ್ಕು ವಿದ್ಯಾರ್ಥಿಗಳು ಶೇ.100ರಷ್ಟು ಫಲಿತಾಂಶ
*625 ಅಂಕ - ಯಶಸ್ ಗೌಡ - ಬಿಜಿಎಸ್ ಹೈಸ್ಕೂಲ್, ಚಿಕ್ಕಬಳ್ಳಾಪುರ.
*625 ಅಂಕ - ಭೂಮಿಕ ಪೈ - ನ್ಯೂ ಮೆಕಾಲೆ ಇಂಗ್ಲೀಷ್ ಸ್ಕೂಲ್, ಹೊಸೂರು ರೋಡ್, ಬೆಂಗಳೂರು.
*625 ಅಂಕ - ಅನುಪಮ ಶ್ರೀಶೈಲ್ ಹಿರಿಹೋಳಿ - ಶ್ರೀಕಂಠೇಶ್ವರ ಪ್ರೌಢಶಾಲೆ, ಸವದತ್ತಿ, ಬೆಳಗಾವಿ ಜಿಲ್ಲೆ.
*625 ಅಂಕ - ಭೀಮನಗೌಡ ಹನುಮಂತ ಗೌಡ ಬೀರಾದರ್ ಪಾಟೀಲ್, ಆಕ್ಸ್‌ಫರ್ಡ್ ಇಂಗ್ಲೀಷ್ ಹೈಸ್ಕೂಲ್, ಮುದ್ದೆಬೀಹಾಳ
ಜಿಲ್ಲಾವಾರು ಫಲಿತಾಂಶ ಶೇಕಡಾವಾರು ಉತ್ತೀರ್ಣ:
| ಕ್ರಮ ಸಂಖ್ಯೆ | ಜಿಲ್ಲೆ | ಫಲಿತಾಂಶ |
| 1 | ಚಿತ್ರದುರ್ಗ | ಶೇ.96.80 |
| 2 | ಮಂಡ್ಯ | ಶೇ.96.74 |
| 3 | ಹಾಸನ | ಶೇ.96.68 |
| 4 | ಬೆಂಗಳೂರು ಗ್ರಾಮಾಂತರ | ಶೇ.96.48 |
| 5 | ಚಿಕ್ಕಬಳ್ಳಾಪುರ | ಶೇ.96.15 |
| 6 | ಕೋಲಾರ | ಶೇ.94.60 |
| 7 | ಚಾಮರಾಜನಗರ | ಶೇ.94.37 |
| 8 | ಮಧುಗಿರಿ | ಶೇ.93.23 |
| 9 | ಕೊಡಗು | ಶೇ.93.19 |
| 10 | ವಿಜಯನಗರ | ಶೇ.91.41 |
| 11 | ವಿಜಯಪುರ | ಶೇ.91.23 |
| 12 | ಚಿಕ್ಕೋಡಿ | ಶೇ.91.07 |
| 13 | ಉತ್ತರ ಕನ್ನಡ | ಶೇ.90.53 |
| 14 | ದಾವಣಗೆರೆ | ಶೇ.90.43 |
| 15 | ಕೊಪ್ಪಳ | ಶೇ.90.27 |
| 16 | ಮೈಸೂರು | ಶೇ.89.75 |
| 17 | ಚಿಕ್ಕಮಗಳೂರು | ಶೇ.89.69 |
| 18 | ಉಡುಪಿ | ಶೇ.89.49 |
| 19 | ದಕ್ಷಿಣ ಕನ್ನಡ | ಶೇ.89.47 |
| 20 | ತುಮಕೂರು | ಶೇ.89.43 |
| 21 | ರಾಮನಗರ | ಶೇ.89.42 |
| 22 | ಹಾವೇರಿ | ಶೇ.89.11 |
| 23 | ಶಿರಸಿ | ಶೇ.87.39 |
| 24 | ಧಾರವಾಡ | ಶೇ.86.55 |
| 25 | ಗದಗ | ಶೇ.86.51 |
| 26 | ಬೆಳಗಾವಿ | ಶೇ.85.85 |
| 27 | ಬಾಗಲಕೋಟೆ | ಶೇ.85.14 |
| 28 | ಕಲಬುರಗಿ | ಶೇ.84.51 |
| 29 | ಶಿವಮೊಗ್ಗ | ಶೇ.84.04 |
| 30 | ರಾಯಚೂರು | ಶೇ.84.02 |
| 31 | ಬಳ್ಳಾರಿ | ಶೇ.81.54 |
| 32 | ಬೆಂಗಳೂರು ಉತ್ತರ | ಶೇ.80.93 |
| 33 | ಬೆಂಗಳೂರು ದಕ್ಷಿಣ | ಶೇ.78.95 |
| 34 | ಬೀದರ್ | ಶೇ.78.73 |
| 35 | ಯಾದಗಿರಿ | ಶೇ.75.49 |
ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಿಸಲು ಈ ವೆಬ್‌ಸೈಟ್‌ಗೆ ಭೇಟಿ ನೀಡ:
*ಅಧಿಕೃತ ವೆಬ್‌ಸೈಟ್ www.karresults.nic.in ಲಾಗಿನ್ ಆಗಿ
*ಮುಖಪುಟದಲ್ಲಿ ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ಒತ್ತಿರಿ
*ತೆರೆಯುವ ಹೊಸ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ
*ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications