SSLC Results 2025 Update: ಎಸ್‌ಎಸ್‌ಎಲ್‌ಸಿ ಫಲಿತಾಂಶದ ಬಗ್ಗೆ ಬಿಗ್ ಅಪ್ಡೇಟ್
SSLC Exam Results 2025 Update: ರಾಜ್ಯದಲ್ಲಿ ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಕ್ತಾಯ ಆಗಿದೆ. ಅಲ್ಲದೆ, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನವೂ ಮುಗಿದಿದೆ. ಇದೀಗ ವಿದ್ಯಾರ್ಥಿಗಳ ಚಿತ್ತ ಫಲಿತಾಂಶದ ಕಡೆ ನೆಟ್ಟಿದ್ದು, ಈ ಬಗ್ಗೆ ಮಹತ್ವದ ಅಪ್ಡೇಟ್‌ವೊಂದು ಹೊರಬಿದ್ದಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.
ರಾಜ್ಯದ ಬಹುತೇಕ ಎಲ್ಲಾ ಕೇಂದ್ರಗಳಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ. ಇನ್ನು ಇದೇ ತಿಂಗಳ ಅಂದರೆ ಏಪ್ರಿಲ್ ಕೊನೆಯಲ್ಲಿ ಅಥವಾ ಮೇ ಮೊದಲ ವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಆಗುವ ಸಾಧ್ಯತೆಯಿದೆ ಎಂದು ಹೇಳಾಗುತ್ತಿದೆ. ಯಾಕಂದ್ರೆ ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿಯು ಫಲಿತಾಂಶವನ್ನು ಬೇಗ ಪ್ರಕಟಿ ಮಾಡಲು ಎಲ್ಲಾ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

ಕೆಎಸ್‌ಇಎಬಿ 2025ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟ ಮಾಡಲಿದೆ. ಈಹಗಾಗಲೇ ಏಪ್ರಿಲ್ 8ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಆಗಿದ್ದು, ಇನ್ನುಳಿದಿರುವ ಎಸ್ಎಸ್ಎಲ್‌ಸಿ ಫಲಿತಾಂಶ ಯಾವಾಗ ಬಿಡುಗಡೆ ಆಗಲಿದೆಯೋ ಎಂದು ಕಾತರದಿಂದ ಕಾಯುತ್ತಿದ್ದಾರೆ.
ಯಾವ್ಯಾವ ವರ್ಷ ಯಾವಾಗ ಫಲಿತಾಂಶ?
* 2024ರಲ್ಲಿ ಮೇ 9ರಂದು ಎಸ್ಎಸ್ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿತ್ತು.
* 2023 ರಲ್ಲಿ ಮೇ 8ರಂದು ಹಾಗೂ 2022ರಲ್ಲಿ ಮೇ 19 ರಂದು ಫಲಿತಾಂಶ ಪ್ರಕಟ ಆಗಿತ್ತು.
* 2022ರಲ್ಲಿ ಕೋವಿಡ್ ಹಿನ್ನೆಲೆ ಜುಲೈನಲ್ಲಿ ಫಲಿತಾಂಶ ಪ್ರಕಟ ಮಾಡಲಾಗಿತ್ತು.
ಇನ್ನು ಈ ವರ್ಷ ಅಂದರೆ 2025ನೇ ಸಾಲಿನ ಫಲಿತಾಂಶದ ದಿನಾಂಕ ಮತ್ತು ಸಮಯದ ಬಗ್ಗೆ ಅಧಿಕೃತ ಅಧಿಸೂಚನೆಯವನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಹೇಳಿದ್ದಾರೆ.
ಕೆಎಸ್‌ಇಎಬಿ ಫಲಿತಾಂಶ ಪ್ರಕಡ ಮಾಡಿದಾಗ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು karresults.nic.inನಲ್ಲಿ ವೀಕ್ಷಣೆ ಮಾಡಬಹುದಯ. ಅಲ್ಲದೆ, kseab.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶದ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಕೆಎಸ್‌ಇಎಬಿಯಿಂದ ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ಕೀ ಉತ್ತರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
ರಾಜ್ಯದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಪ್ರಾರಂಭವಾಗಿದ್ದು, ಏಪ್ರಿಲ್ 4ರಂದು ಮುಕ್ತಾಯ ಆಗಿದ್ದವು. ಪರೀಕ್ಷೆಗಳನ್ನಯ ಬೆಳಗ್ಗೆ 10ರಿಂದ ಮಧ್ಯಾಹ್ನ 1.15 ಗಂಟೆವರೆಗೆ ನಡೆಸಲಾಗಿತ್ತು. ಇನ್ನೂ ಫಲಿತಾಂಶ ವೀಕ್ಷಭೆ ಮಾಡುವುದು ಹೇಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಮಂಡಳಿಯು ಫಲಿತಾಂಶದ ಜೊತೆಗೆ ಟಾಪರ್‌ಗಳ ಹೆಸರುಗಳನ್ನು ಪ್ರಕಟ ಮಾಡುತ್ತದೆ ಮತ್ತು ಪರೀಕ್ಷೆಗೆ ಹಾಜರಾದ ಮತ್ತು ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ, ಒಟ್ಟಾರೆ ಉತ್ತೀರ್ಣ ಶೇಕಡಾವಾರು, ಲಿಂಗವಾರು ಫಲಿತಾಂಶ, ಹೆಸರುಗಳು ಮತ್ತು ಇತರ ವಿವರಗಳನ್ನು ನೀಡಲಾಗುತ್ತದರ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಫಲಿತಾಂಶ ವೀಕ್ಷಣೆ ವಿಧಾನಗಳು
* ಮೊದಲು ಅಧಿಕೃತ ವೆಬ್‌ಸೈಟ್ sslc.karnataka.gov.in ಅಥವಾ karresults.nic.inಗೆ ಭೇಟಿ ನೀಡಿ
* ಕರ್ನಾಟಕ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶಗಳು 2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
* ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ
* ಬಳಿಕ ಅಂಕಪಟ್ಟಿಯ ಪ್ರತಿಯನ್ನೂ ಡೌನ್‌ಲೋಡ್ ಮಾಡಿಕೊಳ್ಳಬಹುದು












Click it and Unblock the Notifications