SSLC Results 2025: ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಿಸುವ ವೆಬ್‌ಸೈಟ್‌ಗಳ ವಿವರ ಇಲ್ಲಿದೆ
SSLC Results 2025: ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಇದೀಗ ಬಾಕಿ ಉಳಿದಿರುವುದು ಎಸ್ಎಸ್ಎಲ್‌ಸಿಯದ್ದು. ಪರೀಕ್ಷೆ-1 ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆದಿತ್ತು. ಪ್ರಶ್ನೆ ಪತ್ರಿಕೆಗಳ ಮೌಲ್ಯಮಾಪನ ನಾಳೆಯಿಂದ ಅಂದರೆ ಏಪ್ರಿಲ್ 15ರಿಂದ ಆರಂಭವಾಗಿದೆ. ಇದರ ಬೆನ್ನಲ್ಲೇ ಫಲಿತಾಂಶ ಯಾವಾಗ ಎನ್ನುವ ಅಪ್ಡೇಟ್ ಮಾಹಿತಿಯೊಂದು ಲಭ್ಯವಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಮಾರ್ಚ್ 21ರಿಂದ ಏಪ್ರಿಲ್ 4, 2025ರ ವರೆಗೆ ನಡೆದಿದೆ. ಪ್ರಶ್ನೆಪತ್ರಿಕೆಗಳ ಮೌಲ್ಯಮಾಪನ ಮೇ 15ರಿಂದ ಆರಂಭ ಆಗಿದ್ದು, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿದೆ.

ಮೌಲ್ಯಮಾಪನ ಕಾರ್ಯದಲ್ಲಿ ಎಲ್ಲಾ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರು ಉಪ ಮೌಲ್ಯಮಾಪಕರು ಏಪ್ರಿಲ್ 12ರಂದು ಹಾಜರಾಗಿದ್ದರೆ, ಸಹಾಯಕ ಮೌಲ್ಯಮಾಪಕರು ಏಪ್ರಿಲ್ 15ರಂದು ಕಡ್ಡಾಯವಾಗಿ ಹಾಜರಾಗಬೇಕೆಂದು ಸುತ್ತೋಲೆ ಹೊರಡಿಸಲಾಗಿತ್ತು.
ಈ ಬಾರಿ 8,96,447 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 15,881 ಶಾಲೆಗಳ ಈ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಕಳೆದ ವರ್ಷದಂತೆಯೇ ಈ ಬಾರಿಯೂ ಮೇ 2ನೇ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಫಲಿತಾಂಶ ಪ್ರಕಟದ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಮಂಡಳಿಯ ಅರ್ಜಿ ನಮೂನೆಯನ್ನು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಅಗತ್ಯ ಶುಲ್ಕದೊಂದಿಗೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ.
ಇನ್ನು ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದಿರುವವರಿಗೆ ಮತ್ತೆ ಪರೀಕ್ಷೆ-2 ಮಾಡಲಾಗುತ್ತದೆ. ಇದರಲ್ಲಿ ಮತ್ತೆ ಪರೀಕ್ಷೆ ಬರೆದು ಉತ್ತೀರ್ಣರಾಗಲು ಅವಕಾಶ ಕಲ್ಪಿಸಲಾಗಿದೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈ ತಿಂಗಳಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
* ಮೊದಲು ಅಧಿಕೃತ ವೆಬ್‌ಸೈಟ್ sslc.karnataka.gov.in ಮತ್ತು karresults.nic.in ಗೆ ಭೇಟಿ ನೀಡಿ.
* ಕರ್ನಾಟಕ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶಗಳು 2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
* ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ.
* ಬಳಿಕ ಅಂಕಪಟ್ಟಿಯ ಪ್ರತಿಯನ್ನೂ ಡೌನ್‌ಲೋಡ್ ಮಾಡಿಕೊಳ್ಳಬಹುದು.












Click it and Unblock the Notifications